ಬಳ್ಳಾರಿ. ಅ. 31; : ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಕರ್ನಾಟಕ ಸಂಘಟನೆಯ ರಾಜ್ಯ ಅಧ್ಯಕ್ಷರಾದ ಡಾ. ಕೆಎಂ ಸಂದೇಶ್ ಅವರು ಸಮಿತಿಯ ಬಳ್ಳಾರಿ ಜಿಲ್ಲಾ ಅಧ್ಯಕ್ಷರನ್ನಾಗಿ ಕಿರಣ್ ಕುಮಾರ್ ಅವರನ್ನು ನೇಮಕಗೊಳಿಸಿದ್ದಾರೆ.
ಈ ಕುರಿತು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಕಿರಣ್ ಕುಮಾರ್, ರಾಜ್ಯಾಧ್ಯಕ್ಷರು ನನ್ನ ಮೇಲೆ ವಿಶ್ವಾಸ ಬಿಟ್ಟು ಇಡೀ ದಲಿತ ಸಮುದಾಯದ ಸೇವೆಗಾಗಿ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಅವರ ನಂಬಿಕೆಯನ್ನು ಹುಸಿಗೊಳಿಸದೆ ಅಂಬೇಡ್ಕರ್ ಅವರ ತತ್ವ ಮತ್ತು ಆದರ್ಶಗಳನ್ನು ಪಾಲಿಸುತ್ತಾ ಸಂವಿಧಾನದ ಮೌಲ್ಯಗಳನ್ನು ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ಕಾಪಾಡಿಕೊಳ್ಳುತ್ತಾ ಎಲ್ಲಾ ತಂಡದೊಂದಿಗೆ ಸಮುದಾಯದ ಸೇವೆಯನ್ನು ಮಾಡುವುದಾಗಿ ರಾಜ್ಯ ಅಧ್ಯಕ್ಷರು ನೀಡಿದ ನೇಮಕಾತಿ ಪತ್ರವನ್ನು ಪ್ರದರ್ಶಿಸಿದರು.
ಇದೇ ಸಂದರ್ಭದಲ್ಲಿ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಭೀಮರಾವ್ ಜಿಲ್ಲಾ ಉಪಾಧ್ಯಕ್ಷರಾಗಿ ಡಿ ಶಂಕರ್ ನಗರ ಘಟಕ ಅಧ್ಯಕ್ಷರಾಗಿ ಗಿರೀಶ್ ಶಂಕರ್ ಎಚ್ಎಂ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ತಿಳಿಸಿದರು. ಈ ಸಂದರ್ಭದಲ್ಲಿ ನೇಮಕಗೊಂಡ ಎಲ್ಲಾ ಪದಾಧಿಕಾರಿಗಳಿಗೆ ರಾಜ್ಯದಿಂದ ಕಳುಹಿಸಿದ ಆದೇಶ ಪತ್ರಗಳನ್ನು ನೀಡಲಾಯಿತು.
ಈ ಪತ್ರಿಕಾಗೋಷ್ಠಿಯಲ್ಲಿ ಎಲ್ಲಾ ನೂತನ ಪದಾಧಿಕಾರಿಗಳು ಇದ್ದರು.