Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ




ಧಾರವಾಡ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ನಗರದ ಆಲೂರು ವೆಂಕಟರಾವ ಸಾಂಸ್ಕøತಿಕ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.


 ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಕಿತ್ತೂರ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ದಾಂಡೇಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡದ ಪ್ರಾಧ್ಯಾಪಕರು ಹಾಗೂ ಬೆಳಗಾವಿ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‍ನ ಅಧ್ಯಕ್ಷೆ ಡಾ. ವಿನಯಾ ಒಕ್ಕುಂದ ಅವರು ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ  ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು.   ಹಿರಿಯ ನ್ಯಾಯವಾದಿ ಚಂದ್ರಶೇಖರ ಎಸ್. ನೇಗಿನಾಳ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸದಸ್ಯ ಶಂಭು ಸಾಲಿಮನಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.


ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ವೇದಿಕೆಯಲ್ಲಿ ಸಹಾಯಕ ಪೋಲಿಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ವೀರಮಾತೆ ಕಿತ್ತೂರ ರಾಣಿ ಚನ್ನಮ್ಮಾಜಿ ಪ್ರತಿಷ್ಟಾಪನ. ನಾಗರಾಜ ಶಿ. ಪಟ್ಟಣಶೆಟ್ಟಿ, ನಿಂಗಣ್ಣ ಕರಿಕಟ್ಟಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಎಂ. ಪಾಟೀಲ ಅವರು ಉಪಸ್ಥಿತರಿದ್ದರು.


ವೇದಿಕೆ ಕಾರ್ಯಕ್ರಮದ ನಂತರ ಸುಧಾ ಕಬ್ಬೂರ ಮತ್ತು ತಂಡದವರಿಂದ ಕಿತ್ತೂರು ರಾಣಿ ಚನ್ನಮ್ಮ ಕುರಿತ ರೂಪಕವನ್ನು ಪ್ರಸ್ತುತಪಡಿಸಲಾಯಿತು.   ಕಾರ್ಯಕ್ರಮದಲ್ಲಿ ಸಮುದಾಯದ ಗುರು ಹಿರಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*