ಬಳ್ಳಾರಿ, ನ.23:: ಪ್ರಸ್ತುತ ವ್ಯಾಪಾರ ಮತ್ತು ಉದ್ಯಮ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯ ಬಳಕೆ ಅನಿವಾರ್ಯವಾಗಿದ್ದು, ಉದ್ಯಮಿಗಳು ಆಧುನಿಕ ತಂತ್ರಜ್ಞಾನವನ್ನು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಹೇಳಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಟ್ಯಾಲಿ ಪ್ರೈಮ್ ಆವೃತ್ತಿ 7.2ರ ವಿಶೇಷ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಟ್ಯಾಕ್ಸ್ ಪ್ರಾಕ್ಟೀಷನರ್ಸ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಪಾರ್ಥಸಾರಥಿ ಮಾತನಾಡಿ, ಟ್ಯಾಲಿ ಪ್ರೈಮ್ 7.2ರಲ್ಲಿ ದಾಖಲೆಗಳ ಸಂಸ್ಕರಣೆ, ಸುಧಾರಿತ ಇನ್ವಾಯ್ಸ್, ಬ್ಯಾಂಕಿಂಗ್ ಪಾವತಿ ಸೇರಿದಂತೆ ಹಲವು ಸೌಲಭ್ಯಗಳಿದ್ದು, ಇವು ದೈನಂದಿನ ವ್ಯಾಪಾರ ನಿರ್ವಹಣೆಯನ್ನು ಸುಲಭಗೊಳಿಸುತ್ತವೆ ಎಂದರು.
ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶ್ ಬಾಬು ಮಾತನಾಡಿ, ಟ್ಯಾಲಿ ಪ್ರೈಮ್ನ ನೂತನ ಆವೃತ್ತಿಯು ಬಳಕೆದಾರ ಸ್ನೇಹಿಯಾಗಿದ್ದು, ಲೆಕ್ಕಪತ್ರ ನಿರ್ವಹಣೆಗೆ ಹೆಚ್ಚು ಅನುಕೂಲಕರವಾಗಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ರಾಮ್ ಕಟಗಿ ಅವರು ಟ್ಯಾಲಿ ಪ್ರೈಮ್ 7.2ರ ಹೊಸ ವೈಶಿಷ್ಟ್ಯಗಳು, ತಾಂತ್ರಿಕ ಸುಧಾರಣೆಗಳು ಹಾಗೂ ಡಿಜಿಟಲ್ ಲೆಕ್ಕಪತ್ರ ನಿರ್ವಹಣೆಯ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಉದ್ಯಮಿಗಳು ಮತ್ತು ಅಕೌಂಟೆಂಟ್ಗಳ ಪ್ರಶ್ನೆಗಳಿಗೆ ಉತ್ತರಿಸಿ, ನೂತನ ಸೌಲಭ್ಯಗಳ ಬಳಕೆಯ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಉಸ್ಮಾನ್ ಶರೀಫ್, ಟ್ಯಾಲಿ ಸಲ್ಯೂಷನ್ಸ್ನ ರವಿ ತಾಳಿಕೋಟಿ, ಸಂಸ್ಥೆಯ ಉಪಾಧ್ಯಕ್ಷ ಸೊಂತ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ ಸೇರಿದಂತೆ ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಉದ್ಯಮಿಗಳು ಉಪಸ್ಥಿತರಿದ್ದರು.
ಸರ್ಟಿಫೈಡ್ ಪಾರ್ಟ್ನರ್ ಚವಾಣ್ ಮನೋಹರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.