Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷ

ಕೊಪ್ಪಳ ಮೇ 13: ತೋಟಗಾರಿಕೆ ಇಲಾಖೆ ವತಿಯಿಂದ ಮೇ 12 ರಿಂದ ಮೇ 22ರ ವರೆಗೆ 10 ದಿನಗಳ ಕಾಲ ಕೊಪ್ಪಳ ನಗರದಲ್ಲಿನ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಆವರಣದಲ್ಲಿ ಆಯೋಜಿಸಲಾದ 10ನೇ ವರ್ಷದ ಮಾವು ಮೇಳಕ್ಕೆ ಮೇ 12ರಂದು ಚಾಲನೆ ಸಿಕ್ಕಿತು. ಈ ಮೇಳವು ಹಲವಾರು ವಿಶೇಷತೆಗಳನ್ನು ಹೊಂದಿದೆ.
 ದಶಕದ ಮಾವು ಮೇಳದ ಫಲವಾಗಿ ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 6500 ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದು ಇವುಗಳಲ್ಲಿ ಮುಖ್ಯವಾಗಿ ಕೇಸರ್ ತಳಿಯು ಅತ್ಯಂತ ಬೇಡಿಕೆಯ ತಳಿಯಾಗಿದೆ ಹಾಗೂ ದಶಹರಿ, ತೋತಾಪೂರಿ, ಮಲ್ಲಿಕಾ, ಬೆನೆಶಾನ್, ಸಿಂಧೂರಿ, ಇಮಾಮ ಪಸಂದ, ಉಪ್ಪಿನಕಾಯಿ ತಳಿಗಳನ್ನು ಬೆಳೆಯತ್ತಿದ್ದು, ರೈತರ ಅನುಕೂಲಕ್ಕಾಗಿ ಹಾಗೂ ಗ್ರಾಹಕರಿಗೆ ಯೋಗ್ಯ ಬೆಲೆಗೆ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಲು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಈ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ಕೊಪ್ಪಳದಲ್ಲಿ ರೈತರು ಬೆಳೆದ ಜಗತ್ತಿನ ದುಬಾರಿ ಮಾವು ಮಿಯಾಜಾಕಿ ಮಾವನ್ನು ಮಾರಾಟಕ್ಕೆ ಇಡಲಾಗಿದೆ.
 ಈ ಮೇಳದಲ್ಲಿ ಹಿಂದಿನ ಮೇಳಕ್ಕಿಂತಲೂ 100ಕ್ಕೂ ಹೆಚ್ಚಿನ ರೈತರು ಭಾಗವಹಿಸಲು ಪೈಪೋಟಿ ಮೇಲೆ ತಾವು ಬೆಳೆದ ಹಣ್ಣುಗಳನ್ನು ಮಾರಾಟ ಮಾಡಲು ಸ್ಟಾಲ್‌ಗಳನ್ನು ನೊಂದಾಯಿಸಿರುತ್ತಾರೆ. ವರ್ಷದಿಂದ ವರ್ಷಕ್ಕೆ ಸಾರ್ವಜನಿಕರಿಗೆ ನೇರವಾಗಿ ಮಾರಾಟ ಮಾಡಲು ರೈತರು ಹೆಚ್ಚಾಗಿ ಮೇಳದಲ್ಲಿ ಭಾಗವಹಿಸುತ್ತಿದ್ದಾರೆ.
*ವಿವಿಧ ಮಾವಿನ ತಳಿಯ ಹಣ್ಣು, ಉತ್ಪನ್ನಗಳು:*
ಈ ಮೇಳದಲ್ಲಿ ಮೇಳದಲ್ಲಿ ಕೇಸರ್, ಬೆನೆಶಾನ್, ದಶಹರಿ, ರಸಪುರಿ, ಸ್ವರ್ಣರೇಖಾ, ಇಮಾಮ ಪಸಂಧ, ಆಪೋಸು, ಮಲ್ಲಿಕಾ, ತೋತಾಪೂರಿ, ಪುನಾಸ್ ಸೇರಿದಂತೆ 200ಕ್ಕೂ ಅಧಿಕ ವಿವಿಧ ಮಾವಿನ ತಳಿಗಳನ್ನು ಹಾಗೂ ಉಪ ಉತ್ಪನ್ನಗಳು ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು ಪ್ರದರ್ಶನದಲ್ಲಿಡಲಾಗಿದೆ. ಜೊತೆಗೆ ತೋಟಗಾರಿಕೆ ಕ್ಷೇತ್ರದಲ್ಲಿ ಬೆಳೆದ ಮಾವಿನ ವಿವಿಧ ತಳಿಗಳನ್ನು ಸಹ ಪ್ರದರ್ಶನ ಮತ್ತು ಮಾರಾಟಕ್ಕಿಡಲಾಗಿದೆ.
*ಮಾವಿನ ಸೀಕರಣೆ ಲಭ್ಯ:*
ಈ ಮೇಳದಲ್ಲಿ ಮಾವಿನ ಹಣ್ಣಿನ ರುಚಿಕರವಾದ ಸೀಕರಣೆಯನ್ನು ಸಹ ಮಾರಾಟ ಮಾಡಲಾಗುತ್ತಿದೆ ಹಾಗೂ ಉಪ್ಪಿನಕಾಯಿ ಮಾವನ್ನು ಸಹ ಮಾರಾಟ ಮಾಡಲಾಗುತ್ತಿದ್ದು, ರೈತರೇ ತಯಾರಿಸಿದ ಉಪ್ಪಿನಕಾಯಿಗಳನ್ನು ಆಕರ್ಷಕವಾದ ಬಾಟಲ್‌ಗಳಲ್ಲಿ ಪ್ಯಾಕಿಂಗ್ ಮಾಡಿ ಮಾರಾಟ ಮಾಡಲಾಗುತ್ತಿದೆ.
*ಗಮನ ಸೆಳೆದ ದುಬಾರಿ ಮಾವು `ಮೀಯಾಜಾಕಿ':*
 ಈ ಮೇಳದದಲ್ಲಿ ಕೊಪ್ಪಳದ ರೈತರು ಬೆಳೆದ ಪ್ರಪಂಚದ ಅತ್ಯಂತ ದುಬಾರಿ ಮಾವಿನ ಹಣ್ಣಾದ “ಮೀಯಾಜಾಕಿ” ಎಂಬ ಜಪಾನ ತಳಿಯ ಹಣ್ಣನ್ನು ಪ್ರದರ್ಶನಕ್ಕೆ ಇಡಲಾಗಿದೆ ಹಾಗೂ ಮಾರಾಟ ಮಾಡಲಾಗುತ್ತಿದೆ. ಈ ಮಾವಿನ ತಳಿಯ ಬೆಲೆಯು 1 ಕೆ.ಜಿ.ಗೆ ರೂ. 2.50 ಲಕ್ಷ ಬೆಲೆ ಬಾಳುತ್ತದೆ. ಆದರೆ ಈ ತಳಿಯನ್ನು ಕೊಪ್ಪಳದಲ್ಲಿಯೇ ಬೆಳೆಯುತ್ತಿರುವುದರಿಂದ ಇದರ ಬೆಲೆಯನ್ನು ಪ್ರತಿ ಕೆ.ಜಿ.ಗೆ ರೂ. 2500 ರಿಂದ 3000 ರ ವರೆಗೂ ದರವನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಸಾಕಷ್ಟು ಗ್ರಾಹಕರು ಮುಂಗಡವಾಗಿ ಖರೀದಿಸಲು ಹಣ ಪಾವತಿಸಿರುತ್ತಾರೆ.
*ಮಾವು ಮೇಳಕ್ಕೆ ದಶಕ; ಛಾಯಾಚಿತ್ರಗಳ ಪ್ರದರ್ಶನ:*
 10 ವರ್ಷಗಳ ಕಾಲ ಮಾವು ಮೇಳದ ನಡೆದು ಬಂದ ದಾರಿ ಕುರಿತು ಪ್ರತಿ ವರ್ಷ ಮಾವು ಮೇಳದ 2016 ರಿಂದ 2026ರ ವರೆಗಿನ ಛಾಯಾಚಿತ್ರಗಳನ್ನು ಈ ಮೇಳದಲ್ಲಿ ಪ್ರದರ್ಶನಕ್ಕಿಡಲಾಗಿದೆ.
*ಸಾರ್ವಜನಿಕರಿಗೆ ಮನವಿ:*
ಈ ಮೇಳದಲ್ಲಿ 15 ಕ್ಕೂ ಹೆಚ್ಚಿನ ಮಾವಿನ ತಳಿಗಳನ್ನು ರೈತರು ನೇರವಾಗಿ ಮಾರಾಟ ಮಾಡುವ ಅನುಕೂಲ ಕಲ್ಪಿಸಲಾಗಿದೆ ಹಾಗೂ ಮೇಳದಲ್ಲಿ ಸಾವಯವದಲ್ಲಿ ಬೆಳೆದ ಹಾಗೂ ದೃಢೀಕರಣದ ಪ್ರಮಾಣ ಪತ್ರ ಹೊಂದಿದ ರೈತರು ಸಹಮಾವಿನ ಹಣ್ಣುಗಳನ್ನು ಮಾರಾಟ ಮಾಡಲು ಭಾಗವಹಿಸಿರುತ್ತಾರೆ. ಈ ಮೇಳದಲ್ಲಿ ವಿವಿಧ ತಳಿಗೆ ಯೋಗ್ಯ ಬೆಲೆಯನ್ನು ನಿರ್ಧರಿಸಲಾಗಿದ್ದು, ಇದರಿಂದ ಸಾರ್ವಜನಿಕರು ಮಾವು ಮೇಳದಲ್ಲಿ ಭಾಗವಹಿಸಿ ರೈತರ ಆದಾಯ ಹೆಚ್ಚಿಸಬೇಕೆಂದು ಕೊಪ್ಪಳ ತೋಟಗಾರಿಕೆ ಇಲಾಖೆಯು ಕೋರಿದೆ.
*ರೈತರಿಗೆ ಉಚಿತ ಸ್ಟಾಲ್‌ಗಳ ವ್ಯವಸ್ಥೆ:*
ಈ ಮೇಳದಲ್ಲಿ ಭಾಗವಹಿಸಲು 100ಕ್ಕೂ ಹೆಚ್ಚಿನ ರೈತರು ನೇರವಾಗಿ ನೊಂದಾಯಿಸಿರುತ್ತಾರೆ. ರೈತರಿಗಾಗಿ ಉಚಿತವಾಗಿ 30ಕ್ಕೂ ಹೆಚ್ಚಿನ ಸ್ಟಾಲ್‌ಗಳನ್ನು ನಿರ್ಮಿಸಿ ಕೊಡಲಾಗಿದೆ ಮತ್ತು ಪ್ರದರ್ಶನದಲ್ಲಿ 100ಕ್ಕೂ ಹೆಚ್ಚಿನ ದೇಶಿ ಮತ್ತು ವಿದೇಶಿ ಮಾವಿನ ತಳಿಗಳನ್ನು ಸುಸಜ್ಜಿತವಾಗಿ ಪ್ರದರ್ಶನದಲ್ಲಿಡಲಾಗಿದೆ. 10ಕ್ಕೂ ಹೆಚ್ಚಿನ ತೋಟಗಾರಿಕೆ ರೈತ ಉತ್ಪಾದಕ ಕಂಪನಿಗಳಲ್ಲದೇ ಜಿಲ್ಲಾ ಹಾಪಕಾಮ್ಸ್ ಸಂಸ್ಥೆಗಳಿಗೆ ಮಾವಿನ ಹಣ್ಣು ಮಾರಲು ಸ್ಟಾಲ್‌ಗಳ ವ್ಯವಸ್ಥೆ ಮಾಡಲಾಗಿದೆ. ರೈತ ಉತ್ಪಾದಕ ಕಂಪನಿಗಳು ಹಾಗೂ ಜಿಲ್ಲಾ ಹಾಪಕಾಮ್ಸ್ ಕೊಪ್ಪಳ ನೂರಾರು ಸದಸ್ಯ ರೈತರಿಂದ ಮಾವಿನ ಹಣ್ಣುಗಳನ್ನು ಖರೀದಿಸಿ ಈ ಮೇಳದಲ್ಲಿ ಮಾರಾಟ ಮಾಡುವುದರಿಂದ ಈ ಮೇಳದಲ್ಲಿ ನೇರವಾಗಿ ಭಾಗವಹಿಸದ ರೈತರಿಗೂ ಅನುಕೂಲವಾಗಿ ಯೋಗ್ಯ ಬೆಲೆ ಸಿಗುವಂತಾಗಿದೆ.
*ನೈಸರ್ಗಿಕವಾಗಿ ಹಣ್ಣು ಮಾಗಿಸುವ ಪಂಚ್ ಹೋಲ್ ಪೌಚ್‌ಗಳ ಪರಿಚಯ:*
ಈ ಮೇಳದಲ್ಲಿ ಮಾವಿನ ಹಣ್ಣುಗಳನ್ನು ನೈಸರ್ಗಿಕವಾಗಿ ಹಾಗೂ ವೈಜ್ಞಾನಿಕವಾಗಿ ಮಾಗಿಸುವ ಕುರಿತು ಭಾರತೀಯ ತೋಟಗಾರಿಕೆ ಸಂಶೋದನಾ ಸಂಸ್ಥೆ (IIHR), ಹೇಸರಘಟ್ಟ, ಬೆಂಗಳೂರು ರವರು ಅಭಿವೃದ್ಧಿಪಡಿಸಿರುವ ಹಣ್ಣು ಮಾಗಿಸುವ ಘಟಕಗಳನ್ನು ರೈತರಿಗೆ ಇಲಾಖೆಯು ಸಹಾಯಧನದ ಮೂಲಕ ಮಾವು ಬೆಳೆಯುವ ರೈತರಿಗೆ ನೀಡಲಾಗಿದೆ. ನೈಸರ್ಗಿಕವಾಗಿ ಹಣ್ಣುಗಳನ್ನು ಮಾಗಿಸಲು “ಎನ್-ರೈಪ್ (en-ripe)”ಎಂಬ ನೈಸರ್ಗಿಕವಾಗಿ ಹಣ್ಣು ಮಾಗಿಸುವ ಪಂಚ್ ಹೋಲ್ ಪೌಚ್ ಗಳನ್ನು ರೈತರಿಗೆ ಪರಿಚಯಿಸಲಾಗುತ್ತಿದೆ. ಈ ಪೌಚ್‌ನ್ನು ಹೋಲ್ ಮಾಡಿ 10 ಕೆ.ಜಿ. ಮಾವಿನ ಕಾಯಿಯ ಕೆಳಗಡೆ ಇಟ್ಟಾಗ 48 ಗಟೆಗಳಲ್ಲಿ ಗುಣಮಟ್ಟದ ಆರೋಗ್ಯಕರ ಮಾವಿನ ಕಾಯಿಗಳು ಒಂದೇ ರೀತಿಯ ಬಣ್ಣ ಹೊಂದಿ ಹಣ್ಣಾಗುತ್ತವೆ. ಇದು ನೈಸರ್ಗಿಕವಾದ ಇಥಲಿನ್ ಹೊಂದಿರುತ್ತದೆ. ಈ ಪೌಚ್‌ಗೆ ರೈತರಿಂದ ಸಾಕಷ್ಟು ಬೇಡಿಕೆ ವ್ಯಕ್ತವಾಗುತ್ತಿದೆ.
*ಆಸಕ್ತ ರೈತರಿಗೆ ಮಾವು ಬೆಳೆಯುವ ಬಗ್ಗೆ ಮಾಹಿತಿ:*
ಈ ಮೇಳದಲ್ಲಿ ಮಾವು ಬೆಳೆಯಲು ಆಸಕ್ತಿ ಹೊಂದಿದ ರೈತರಿಗೆ ಮಾವನ್ನು ಬೆಳೆಯುವ ಬಗ್ಗೆ ಹೊಸ ತಂತ್ರಜ್ಞಾನಗಳು ಹಾಗೂ ಮಾರುಕಟ್ಟೆ, ಗುಣಮಟ್ಟದ ಮಾವು ಮತ್ತು ಇಳುವರಿ ಹೇಗೆ ತೆಗೆಯಬೇಕೆಂಬುದರ ಬಗ್ಗೆಯೂ ತಿಳಿಸಿಕೊಡಲಾಗುತ್ತಿದೆ. ಸಾವಯವ ಪದ್ದತಿಯಲ್ಲಿ ಮಾವು ಬೆಳೆಯುವ ಬಗ್ಗೆ ಹಾಗೂ ವಿವಿಧ ವಿದೇಶಿ ಮಾರುಕಟ್ಟೆಗಳಿಗೆ ರಫ್ತುಮಾಡುವ ಕುರಿತು ಮಾಹಿತಿಯನ್ನು ಸಹ ನೀಡಲಾಗುತ್ತಿದೆ.
*`ಕೊಪ್ಪಳ ಕೇಸರ್' ಮಾವಿನ ಜನಪ್ರಿಯತೆ ಹೆಚ್ಚಿಸಲು ಕ್ರಮ:* 
“ಕೊಪ್ಪಳ ಕೇಸರ್ ಮಾವು” ಬ್ರ್ಯಾಂಡ್‌ನ ಬಾಕ್ಸ್ನಲ್ಲಿನ ಕೊಪ್ಪಳ ಕೇಸರ್ ಮಾವಿನ ಹಣ್ಣುಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಸಾರ್ವಜನಿಕರಿಗೆ ಬಾಕ್ಸ್ನಲ್ಲಿನ ಹಣ್ಣುಗಳನ್ನು ಸಿಗುವಂತೆ ಅನುಕೂಲ ಮಾಡಲಾಗಿದೆ. ಇದರಿಂದ ಕೊಪ್ಪಳ ಕೇಸರ್ ಮಾವು ಹೆಚ್ಚು ಜನಪ್ರಿಯವಾಗಿದೆ. ಅಲ್ಲದೇ ಸಾರ್ವಜನಿಕರು ಬಾಕ್ಸ್ಗಳನ್ನು ಮೆಚ್ಚಿಕೊಂಡಿರುತ್ತಾರೆ. ಈ ಬಾಕ್ಸ್ಗಳನ್ನು ರೈತರಿಗೆ ಆರ್.ಕೆ.ವಿ.ವಾಯ್. ಯೋಜನೆಯಡಿ ಸಹಾಯಧನದ ರೂಪದಲ್ಲಿ ನೀಡಲಾಗುತ್ತಿದೆ.
 ಇದಲ್ಲದೇ ಮಾವಿನ ಹಣ್ಣುಗಳಲ್ಲಿ ಲಭ್ಯವಿರುವ ಪೋಷಕಾಂಶಗಳು, ಖನಿಜಗಳು ಮತ್ತು ಅವುಗಳ ಆರೋಗ್ಯದ ಬಗ್ಗೆ ಮಹತ್ವ ತಿಳಿಸುವ ಬ್ಯಾನರ್‌ಗಳನ್ನು ಪ್ರದರ್ಶಿಸಲಾಗುತ್ತಿದ್ದು, ಗ್ರಾಹಕರಿಗೆ ಇದೊಂದು ವಿಶಿಷ್ಟ ಅನುಭವ ನೀಡಬಲ್ಲದಾಗಿದೆ.
*ಆಕರ್ಷಕ ಸೆಲ್ಫಿ ಪಾಯಿಂಟ್:*
ಈ ಮೇಳದಲ್ಲಿ ಮಕ್ಕಳು ಮತ್ತು ಸಾರ್ವಜನಿಕರಿಗೆ ಆಕರ್ಷಕ ಸೆಲ್ಫಿ ಪಾಯಿಂಟ್ ನಿರ್ಮಿಸಲಾಗಿದೆ. ಈ ಸೆಲ್ಫಿ ಪಾಯಿಂಟ್ ಮಾವಿನ ಮಾದರಿ ಹೊಂದಿದ್ದು, ಅತ್ಯಾಕರ್ಷಣೆವಾಗಿ ಜನರನ್ನು ಆಕರ್ಷಿಸಿಸುತ್ತಿದೆ.

``ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಕ್ಷೇತ್ರವು ಪ್ರತಿ ವರ್ಷ ಹೆಚ್ಚುತ್ತಲಿದ್ದು, ಈಗಾಗಲೇ 6500ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತಿದೆ. ರೈತರ ಅನುಕೂಲಕ್ಕಾಗಿ ಮತ್ತು ಗ್ರಾಹಕರಿಗೆ ಯೋಗ್ಯ ಬೆಲೆಗೆ ಗುಣಮಟ್ಟದ ಹಣ್ಣುಗಳನ್ನು ಮಾರಾಟ ಮಾಡಲು ರೈತರಿಂದ ನೇರವಾಗಿ ಗ್ರಾಹಕರಿಗೆ ತಲುಪಿಸಲು ಪ್ರತಿ ವರ್ಷ ಮಾವು ಮೇಳವನ್ನು ಆಯೋಜಿಸಲಾಗುತ್ತಿದೆ. ಈ ಬಾರಿಯ ಕೊಪ್ಪಳ ಮಾವು ಮೇಳವು ಮೇ 12 ರಿಂದ ಮೇ 22ರ ವರೆಗೆ 10 ದಿನಗಳ ಕಾಲ ತೋಟಗಾರಿಕೆ ಇಲಾಖಾ ಆವರಣದಲ್ಲಿ ನಡೆಯುತ್ತಿದ್ದು, ಬೇಡಿಕೆ ಅನುಸಾರ 10 ದಿನಗಳಿಗೂ ಹೆಚ್ಚಿನ ದಿನಗಳ ಕಾಲ ನೆಡೆಸಲು ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು. ಮಾವು ಮೇಳದಲ್ಲಿ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು.''
- ಕೃಷ್ಣ ಸಿ. ಉಕ್ಕುಂದ, ತೋಟಗಾರಿಕೆ ಜಂಟಿ ನಿರ್ದೇಶಕರು, ಕೊಪ್ಪಳ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಳಿ ಮಳೆಯ ರಭಸಕ್ಕೆ, ಸರ್ಕಾರಿ ಶಾಲೆ ರಕ್ಷಣಾ ಗೋಡೆ ದ್ವಂಸಜಿಗಜೇವಣಿ ಗ್ರಾಮದ ಕೆರೆಗೆ ಅಳವಡಿಸಲಾದ ಪೈಪಲೈನ್ ತೆರವುಗೊಳಿಸುವಂತೆ ಮನವಿ ಸಿದ್ಧಾರ್ಥ ನಗರದ ಜನರ ಸಮಸ್ಯೆ ಆಲಿಸಿ, ಕ್ರಮಕ್ಕೆ ಸೂಚಿಸಿದ ಶಾಸಕ ನಾರಾ ಭರತ್ ರೆಡ್ಡಿಒಂದು ಚಿನ್ನ, ಎರಡು ಬೆಳ್ಳಿ, ಮೂರು ಕಂಚಿನ ಪದಕ ಗೆದ್ದು ರಾಜ್ಯಕ್ಕೆ ಕೀರ್ತಿರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ  ಅರ್ಜಿ ಅಹ್ವಾನಉಚಿತ ಬೇಸಿಗೆ ಶಿಬಿರಕ್ಕೆ ಡಿಸಿ ಸಂಗಪ್ಪ ಚಾಲನೆಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಹುಬ್ಬಳ್ಳಿಯಲ್ಲಿ ಮೇ 16, 17 ರಂದು 12ನೇ 'ಮೇ ಸಾಹಿತ್ಯ ಮೇಳ': ಅಲ್ಲಮಪ್ರಭು ಬೆಟ್ಟದೂರುವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಮೇ 31ರಂದು ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆಯ ಮಾವಿನ ಮೇಳಕ್ಕೆ 10 ವರ್ಷ; ಹಲವು ವಿಶೇಷ