LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೋಟಿಯ ಮಾತು ಸೋತು...  ಮೊದಲ ಹಾಡು ಬಿಡುಗಡೆ 

     ಡಾಲಿ ಧನಂಜಯ್ ಅಭಿನಯದ 'ಕೋಟಿ' ಸಿನಿಮಾದ ಮೊದಲ ಹಾಡು 'ಮಾತು ಸೋತು' ಈಗ ಬಿಡುಗಡೆಯಾಗಿದೆ. ಈ ಹಾಡಿಗೆ ವಾಸುಕಿ ವೈಭವ್ ರಾಗ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ.


     'ಕೋಟಿ' ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು, ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ‌ ವೀಕ್ಷಿಸಬಹುದು.


     ವಾಸುಕಿ ವೈಭವ್ "ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ ಜತೆ ಕೆಲಸ ಮಾಡುವುದು ಯಾವಾಗಲೂ ಖುಷಿ ಮತ್ತು ಕಲಿಕೆಯ ವಿಚಾರ. ಜನರಿಗೆ ಖಂಡಿತ ಈ ಹಾಡು ಇಷ್ಟವಾಗತ್ತೆ‌ ಅನ್ನೊ ನಂಬಿಕೆ ಇದೆ" ಎಂದು ಹೇಳಿದರು.


     “ವಾಸುಕಿ ಹೊಸ ತಲೆಮಾರಿನ ಪ್ರತಿಭಾವಂತ ಸಂಗೀತ ನಿರ್ದೇಶಕ. ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಅಭಿಮಾನಿ ನಾನು. ಈ ಇಬ್ಬರ ಕಾಂಬಿನೇಷನ್ನಿನ ಈ ಹಾಡನ್ನು ಅರ್ಮಾನ್ ಮಲಿಕ್ ತುಂಬಾ ಚೆನ್ನಾಗಿ ಹಾಡಿದ್ದಾರೆ. ಈ ಹಾಡು ಕನ್ನಡದ ಕಿವಿ ಮತ್ತು ಮನಸುಗಳಿಗೆ ಇಷ್ಟವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು 'ಕೋಟಿ'ಯ ನಿರ್ದೇಶಕ ‘ಪರಮ್’ ಅಭಿಪ್ರಾಯ ಪಟ್ಟರು.


     'ಕೋಟಿ' ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್‌ ಇಂದಿರಾ, ತಾರಾ, ಸರ್ದಾರ್‌ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.


    ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ಚಾರ್ಲಿ 777 ಖ್ಯಾತಿಯ ನೊಬಿನ್‌ ಪೌಲ್‌ ಹೊತ್ತಿದ್ದಾರೆ. ಕಾಂತಾರ ಸಿನಿಮಾದ ಕೆಲಸಕ್ಕೆ ಪ್ರಶಂಸೆಗಳಿಸಿದ್ದ ಪ್ರತೀಕ್‌ ಶೆಟ್ಟಿಯವರು‌ ಕೋಟಿಯ ಸಂಕಲನಕಾರರಾದರೆ, ಟೆಲಿವಿಷನ್‌ನ ಖ್ಯಾತ ಛಾಯಾಗ್ರಾಹಕ ಅರುಣ್ ಅವರು ಈ ಸಿನಿಮಾದ ಕ್ಯಾಮರಮನ್.

     ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್ ನಿರ್ಮಾಣ ಮಾಡಿದ್ದು, ಕಲರ್ಸ್ ಕನ್ನಡದ ಮಾಜಿ ಹೆಡ್  ಪರಮ್‌ ಅವರು ಬರೆದು ನಿರ್ದೇಶಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ