Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಟಿಸಿಎಲ್: ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ ಪ್ರಕಟ

 

- ಮೇ ತಿಂಗಳಲ್ಲಿ ಸಹನ ಶಕ್ತಿ ಪರೀಕ್ಷೆ ನಡೆಸಿದ್ದ ಕವಿಪ್ರನಿನಿ

- 491 ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟಿಸಿದ ಕವಿಪ್ರನಿನಿ

ಬೆಂಗಳೂರು, ಆಗಸ್ಟ್ 29, 2025: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.

ರಾಜ್ಯದಾದ್ಯಂತ ಕೆಪಿಟಿಸಿಎಲ್ ಉದ್ಯೋಗದ ಭರವಸೆಯಲ್ಲಿದ್ದ 2600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇ ತಿಂಗಳಿನಲ್ಲಿ ನಡೆದಿದ್ದ ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದಾದ ಎರಡು ತಿಂಗಳಲ್ಲೇ ನಿಗಮ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಂಧನ ಇಲಾಖೆಯು ಉದ್ಯೋಗದ ಗ್ಯಾರಂಟಿ ನೀಡಿದೆ.ಉಳಿದಂತೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*