LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಕುಂಬಾರಹಳ್ಳ ಕೆಪಿಎಸ್ ಬಾಲಕಿಯರ ವಾಲಿಬಾಲ್ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

ಜಮಖಂಡಿ: ಆಲಗೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕುಂಚನೂರು ವಲಯ ಮಟ್ಟದ ಪ್ರೌಢಶಾಲೆಗಳ 17 ವರ್ಷದೊಳಗಿನ ವಯೋಮಾನದ ಕ್ರೀಡಾಕೂಟದಲ್ಲಿ ಕುಂಬಾರಹಳ್ಳ ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಬಾಲಕಿಯರ ವಾಲಿಬಾಲ್ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.
ಅದೇ ರೀತಿ ತ್ರೋಬಾಲ್ ಸ್ಪರ್ಧೆಯಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿದೆ. ಬಾಲಕರ 100 ಮೀಟರ್ ಓಟದಲ್ಲಿ ಶಿವಾನಂದ ನಾಗನೂರ ಪ್ರಥಮ ಸ್ಥಾನ ಪಡೆದರೆ, ಬಾಲಕಿಯರ 3000 ಮೀಟರ್ ಓಟದಲ್ಲಿ ಶಾಲೆಯ ವಿದ್ಯಾರ್ಥಿನಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಮುಖ್ಯೋಪಾಧ್ಯಾಯ ನಾರಾಯಣ ಶಾಸ್ತ್ರಿ ತಿಳಿಸಿದ್ದಾರೆ.
ವಾಲಿಬಾಲ್ ತಂಡದಲ್ಲಿ ಅಮೃತಾ ಸವದಿ (ನಾಯಕಿ), ಸ್ಫೂರ್ತಿ ನರಸನ್ನವರ, ಗಂಗಾ ಕಾಖಂಡಕಿ, ಕಲಾವತಿ ಪೂಜಾರಿ, ಶ್ರೇಯಾ ಗುಗ್ಗರಿ, ಸೃಷ್ಟಿ ಕೆಮ್ಮನವರ, ಭುವನೇಶ್ವರಿ ಪೂಜಾರಿ ಹಾಗೂ ಸೃಷ್ಟಿ ಮಟ್ಟಿ ಭಾಗವಹಿಸಿ ತಂಡದ ಯಶಸ್ಸಿಗೆ ಕಾರಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಬಸಣ್ಣವರ, ದೈಹಿಕ ಶಿಕ್ಷಣ ಪರಿವೀಕ್ಷಕಿ ಪಂಚಾಕ್ಷರಿ ನಂದೇಶ, ದೈಹಿಕ ಶಿಕ್ಷಣ ಶಿಕ್ಷಕ ಬಾಹುಬಲಿ ಮುತ್ತೂರ, ತಂಡದ ವ್ಯವಸ್ಥಾಪಕ ಚಂದ್ರಕಾಂತ ಪೊಲೀಸ್, ಶಾರದಾ ಮಠ ಹಾಗೂ ಶಿಕ್ಷಕರಾದ ಸಂಗಮೇಶ ಉಟಗಿ, ಸವಿತಾ ಬೆನಕಟ್ಟಿ, ಆಶಿಫಾ ಭಾನು ಮೋಮಿನ, ಅಶೋಕ ಬಿರಾದಾರ ಪಾಟೀಲ, ಶಕುಂತಲಾ ಬಿರಾದಾರ ಸೇರಿದಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸರ್ವ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.
ಅಲ್ಲದೆ, ಪಂಚಾಯತ್, ಪಿಕೆಪಿಎಸ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಊರಿನ ಹಿರಿಯರು ಮತ್ತು ಶಿಕ್ಷಣ ಪ್ರೇಮಿಗಳು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಮುಂದಿನ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂದು ಹಾರೈಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹ