Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓಟಿಎಸ್ ಪದ್ದತಿ ಸಾಲ ತಿರುವಳಿಗೆ ಅವಕಾಶ ಕಲ್ಪಿಸಿ :  ಕುರುಬರು ಶಾಂತಕುಮಾರ್

ಬಳ್ಳಾರಿ. ಜ. 30..: ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಓ ಟಿ ಎಸ್ ಪದ್ಧತಿಯಲ್ಲಿ ಸಾಲ ತಿರುವಳಿ ಮಾಡಿ ಹೊಸ ಸಾಲ ವಿತರಣೆ ಮಾಡುತ್ತಿದ್ದಾರೆ ಆದರೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಶಾಖೆಗಳಲ್ಲಿ  ಓ ಟಿ ಎಸ್ ಪದ್ದತಿಯಲ್ಲಿ ಸಾಲ ತಿರುವಳಿ ಮಾಡಲು ಮೀನಾ ಮೇಸ ಏಣಿಸುತ್ತಾ ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಹಲವು  ಜಿಲ್ಲೆಗಳ ರೈತರು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ಬಳ್ಳಾರಿಯ ಕೇಂದ್ರ ಕಚೇರಿಯಲ್ಲಿ  ಪ್ರತಿಭಟನೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿದರು.

 ಅವರು ಇಂದು ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮುಖ್ಯ ಶಾಖೆಯ ಬಳಿ ರೈತರಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.

 ಈ ಸಂದರ್ಭದಲ್ಲಿ  ಪ್ರತಿಭಟನಕಾರರ ಬಳಿ ಬಂದ  ಜನರಲ್ ಮ್ಯಾನೇಜರ್ ಸತ್ಯಪ್ರಸಾದ್ ಚಳುವಳಿಗಾರರ ಜೊತೆ ಸಭಾಂಗಣದಲ್ಲಿ ಸಭೆ ನಡೆಸಿ ಚರ್ಚಿಸಿ ನಮ್ಮ ಗ್ರಾಮೀಣ ಬ್ಯಾಂಕಿನಲ್ಲಿ ಪ್ರಸಕ್ತ ವರ್ಷ 61,000 ರೈತರಿಗೆ ಸಾಲ ಒಟಿಎಸ್ ನಲ್ಲಿ ತೀರುವಳಿ ಮಾಡಿದ್ದೇವೆ ಈಗ  ಓಟಿಎಸ್ ನಲ್ಲಿ ತಿರುವಳಿ ಮಾಡುವ ರೈತರಿಗೆ ಅಸಲು ಹಣದಲ್ಲಿಯೂ ರಿಯಾಯಿತಿ ನೀಡಿ

ಕೃಷಿ ಸಾಲ ತಿರುವಳಿ  ಮಾಡಿ ರೈತರಿಗೆ ಹೊಸ ಸಾಲ ತೀರುವಳಿ ಮಾಡಿದ ಹಣಕ್ಕಿಂತ ಹೆಚ್ಚಾಗಿ ಇಪ್ಪತ್ತೈದರಷ್ಟು ಸಾಲ ವಿತರಿಸಲಾಗುವುದು.

 ಸರ್ಕಾರಿ ಯೋಜನೆಗಳ ಹಣ  ಸಾಲಕ್ಕೆ ಜಮಾ ಮಾಡಿಕೊಳ್ಳುವುದು  ಕಾನೂನು ಬಾಹಿರ ಈ ಬಗ್ಗೆ ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ  ಈಗಲೇ ಸೂಚನೆ ನೀಡಲಾಗುವುದು

ವಸುಲಾತಿಗೆ ಜಾಮೀನುದಾರರ ಮೂಲಕ ಕಿರುಕುಳ ನೀಡುತ್ತಿರುವುದು ಹಾಗೂ ನ್ಯಾಯಾಲಯದಲ್ಲಿ ದಾವೆ ಕೂಡುವುದು ಬೇಡ ಎಂದು ತಾವು ಹೇಳುತ್ತಿದ್ದೀರಿ ಅಂತಹ ರೈತರು ಸಹಿ ಪಡೆದು ಸಾಲ ನವಿಕರಿಸಲಾಗುವುದು ಎಂದರು.

 ಹೊಸ ಟ್ರ್ಯಾಕ್ಟರ್ ಕೊಡುತ್ತೇವೆ ಎಂದು ಬ್ಯಾಂಕಿನವರು ಹಳೆ ಟ್ಯಾಕ್ಟರ್ ತೆಗೆದುಕೊಂಡು ಸಹಿ ಪಡೆದು ಸಾಲ ವಿತರಿಸಿಲ್ಲ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು ಇನ್ನೂ ಬಳ್ಳಾರಿಗೆ ಬಂದಿರುವ ರೈತರು ಲಿಖಿತ ರೂಪದಲ್ಲಿ ದೂರು ಸಲ್ಲಿಸಿದರೆ  ಅವರ ಸಮಸ್ಯೆ ಒಂದು ತಿಂಗಳಲ್ಲಿ ಪರಿಹರಿಸಲಾಗುವುದು ಇಂತಹ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಂದಿನ ತಿಂಗಳು 15ರ ನಂತರ ಮೈಸೂರಿನಲ್ಲಿ ವಲಯ ಮಟ್ಟದ ಸಭೆ ರೈತರ ಆಹ್ವಾನಿಸಿ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ  ಬಗೆಹರಿಸಲಾಗುವುದು ಎಂದು ತಿಳಿಸಿದರು  ಇಂದಿನ ಚಳುವಳಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ .ರಾಜ್ಯಮಹಿಳಾ ಸಂಚಾಲಕಿ ಜೀವಿ ಲಕ್ಷ್ಮೀದೇವಿ ಕಮಲಮ್ಮ. ಬರನಪುರ ನಾಗರಾಜ್. ಬೈರಾರೆಡ್ಡಿ . ರವಿಚಂದ್ರ. ಪಿ ಸೋಮಶೇಖರ್. ನಂಜುಂಡಸ್ವಾಮಿ. ನಾಗೇಶ್ ಕುಮಾರ್. ಮಾದೇವಪ್ಪ. ಮುಂತಾದ ನೂರಾರು ರೈತರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ