LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಕುರುಗೋಡು: ಶುಚಿ ಯೋಜನೆಯಡಿ ಮುಟ್ಟಿನ ಕಪ್ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮ


ಬಳ್ಳಾರಿ,ಆ.20: ಕೇಂದ್ರ ಮತ್ತು ರಾಜ್ಯ ಸರ್ಕಾರ, ರಾಷ್ಟಿçÃಯ ಆರೋಗ್ಯ ಅಭಿಯಾನ, ಆರ್.ಬಿ.ಎಸ್.ಕೆ/ಆರ್.ಕೆ.ಎಸ್.ಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶುಚಿ ಯೋಜನೆಯಡಿ ‘ಪ್ರೇರಣಾ ಮುಟ್ಟಿನ ಕಪ್’ ವಿತರಣೆ ಹಾಗೂ ಋತುಚಕ್ರದ ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ ಕಾರ್ಯಕ್ರಮವನ್ನು ಕುರುಗೋಡಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.
ಕುರುಗೋಡು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ, ಓರ್ವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರ, ಕುರುಗೋಡು ಸಮುದಾಯ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳೆಯರಲ್ಲಿ ಋತುಚಕ್ರದ ನೈರ್ಮಲ್ಯ ಹಾಗೂ ಮುಟ್ಟಿನ ಕಪ್ ಬಳಕೆಯ ಪ್ರಯೋಜನಗಳ ಕುರಿತು ಸಮಗ್ರ ಮಾಹಿತಿ ನೀಡಿ, ಜಾಗೃತಿ ಮೂಡಿಸಲಾಯಿತು.
ಮುಟ್ಟಿನ ಕಪ್ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸಮುದಾಯ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ, ಕಚೇರಿ ಅಧಿಕಾರಿಗಳು, ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಒಟ್ಟು 98 ಮುಟ್ಟಿನ ಕಪ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಕೆ.ಎಸ್.ಕೆ. ಸಂಯೋಜಕ ಕೆ.ಎನ್.ಎಂ. ಮನೋಹರ್, ದಂತ ವೈದ್ಯಾಧಿಕಾರಿ ಡಾ. ಗಾಯತ್ರಿ, ನೇತ್ರಾಧಿಕಾರಿ ಜಿ. ಪಲ್ಲವಿ, ಹಿರಿಯ ಶುಶ್ರೂಷಣಾಧಿಕಾರಿ ಕೆ.ಬಿ. ಸರಸ್ವತಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ. ಮಂಜುನಾಥ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಷಡಕ್ಷರಯ್ಯ ಮತ್ತು ಮಹೇಂದ್ರ ಕುಮಾರ್, ಪ್ರಭಾರಿ ಎಲ್.ಹೆಚ್.ವಿ. ಕೆ. ನೀಲಾವತಿ ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳಾದ ಡಿ. ಸುನೀತಾ, ರೇಣುಕಾ, ಗಿರಿಜಾ, ಜಯಶ್ರೀ ಸೇರಿದಂತೆ ಇತರ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವದನ್ನು ಅರಿಯಿರಿ  :ಡಾ. ಅಲ್ಲಮಪ್ರಭು ಶ್ರೀಗಳು ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಅಲಕಾನಂದ ಮಳಗಿ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ"ತೆರಿಗೆದಾರರಿಗೆ ಗೌರವ ನೀಡಿ, ಸಮಾಲೋಚಿಸಿ" ಬಳ್ಳಾರಿ: ಪೋಷಕರ ಪತ್ತೆಗಾಗಿ ಮೂಕ ಬಾಲಕನ ಪರವಾಗಿ ಮನವಿಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿದಿ. 27 ರಂದು "ಹೋರಾಟದ ನಡೆ ಶಾಸಕರ ಮನೆ ಕಡೆ"ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ