ನವದೆಹಲಿ: ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಇಂದು ಬಯಾನ್ ಅರಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಗೌರವವಾದ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಿದರು. ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಅನ್ನು ಸಾಮಾನ್ಯವಾಗಿ ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಗಣ್ಯರು ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸೂಚಕವಾಗಿ ನೀಡಲಾಗುತ್ತದೆ.
ಇಲ್ಲಿಯವರೆಗೆ 20ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಗೌರವಗಳನ್ನು ಪಡೆದಿರುವ ಪ್ರಧಾನಿ ನರೇಂದ್ರ ಮೋದಿ, ಯುಎಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಯುಕೆ ರಾಜ ರಾಜ ಚಾರ್ಲ್ಸ್ III ಅವರಂತಹವರ ಸಾಲಿಗೆ ಸೇರಿಕೊಂಡಿದ್ದಾರೆ. ಇವರೆಲ್ಲರೂ ಈ ಹಿಂದೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್-ಕಬೀರ್’ ಪ್ರಶಸ್ತಿಯನ್ನು ಪಡೆದಿದ್ದಾರೆ.
ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದ್ದಕ್ಕಾಗಿ ಮೋದಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಕುವೈತ್‌ನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.