Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸ್ಕೃತ ಮಕ್ಕಳು ಅವಕಾಶ ವಂಚಿಕ ಮಕ್ಕಳ ರಾಯಭಾರಿಗಳಾಗಬೇಕು: ಕೆ.ವಿ ಪ್ರಭಾಕರ್‌

ಬೆಂಗಳೂರು ಸೆ 8: ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ಮತ್ತು ಬಳಕೆದಾರರ ಸಹಕಾರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಮಗುವೂ ಹುಟ್ಟುತ್ತಲೇ ಪ್ರತಿಭೆ ತುಂಬಿಕೊಂಡೇ ಜನಿಸುತ್ತದೆ. ಅವಕಾಶಗಳು, ಪ್ರೋತ್ಸಾಹ ಸಿಕ್ಕಾಗ ಪ್ರತಿಭೆ ಹೊರಗೆ ಬರುತ್ತದೆ. ಇವತ್ತು ಇಲ್ಲಿ ಪುರಸ್ಕಾರಗೊಂಡ ಮಕ್ಕಳಿಗೆ ಅವಕಾಶ ಸಿಕ್ಕಿದೆ. ಸಮಾಜ ಈ ಅವಕಾಶವನ್ನು ಒದಗಿಸಿರುವುದರ ಜೊತೆಗೆ ಪೋಷಕರು ತಮ್ಮ ವೈಯುಕ್ತಿಕ ಆಸೆ, ಆಕಾಂಕ್ಷೆಗಳನ್ನು ತ್ಯಾಗ ಮಾಡಿ ಮಕ್ಕಳಿಗೆ ಅಗತ್ಯ ಅವಕಾಶಕ್ಕೆ ನೀರು ಗೊಬ್ಬರ ಒದಗಿಸಿದ್ದಾರೆ. ಹೀಗಾಗಿ ನಿಮ್ಮೊಳಗಿನ ಪ್ರತಿಭೆಗೆ ಪುರಸ್ಕಾರ ಸಿಕ್ಕಿದೆ ಎಂದರು.

ಇಂದು ಇಲ್ಲಿ ಪುರಸ್ಕೃತಗೊಂಡ ಮಕ್ಕಳಲ್ಲಿ ನನ್ನದೊಂದು ನಿವೇದನೆ ಇದೆ. ಏನೆಂದರೆ, ನಿಮ್ಮ ಹಾಗೆಯೇ ಪ್ರತಿಭೆ ಇದ್ದೂ ಅವಕಾಶವಂಚಿತ ಮಕ್ಕಳು ಹೊರಗೆ ಸಾವಿರಾರು ಸಂಖ್ಯೆಯಲ್ಲಿದಗದಾರೆ. ಹೀಗಾಗಿ ನೀವುಗಳು ದೊಡ್ಡವರಾಗಿ ಬೇರೆ ಬೇರೆ ಒಳ್ಳೊಳ್ಳೆ ಹುದ್ದೆಗಳಿಗೆ ಹೋದಾಗ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಿ ಕೆಲಸ ಮಾಡಿ ಎಂದು  ಕರೆ ನೀಡಿದರು.

ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ. ನೀವೂ ಮತ್ತೊಬ್ಬರ ಬದುಕು ಕಟ್ಟಿಕೊಳ್ಳಲು ಹದವಾದ ಭೂಮಿಯಂತಾಗಬೇಕು. ಅಗ ಸಮಾಜ ನಿಮಗೆ ಕೊಟ್ಟಿದ್ದನ್ನು ನೀವು ಸಮಾಜಕ್ಕೇ ವಾಪಾಸ್ ಕೊಟ್ಟಂತಾಗುತ್ತದೆ, ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದು ವಿವರಿಸಿದರು.

ನಿಮ್ಮ ಹಾಗೆಯೇ ಪ್ರತಿಭೆ ಇರುವ ಹಾಗೂ ಅವಕಾಶ ಇಲ್ಲದ ಮಕ್ಕಳು ಸಮಾಜದಲ್ಲಿ ಲಕ್ಷಾಂತರ ಇದ್ದಾರೆ. ಶಾಲೆಗೆ ಹೋಗಲು ಸಾಧ್ಯವಿಲ್ಲದೆ ಬೆಳಗ್ಗೆ ಹಾಲು ಮಾರುತ್ತಾ, ಹೂ-ತರಕಾರಿ-ಹಣ್ಣು ಮಾರುತ್ತಾ, ಗ್ಯಾರೇಜ್ ಗಳಲ್ಲಿ, ಕಾರ್ಖಾನೆಗಳಲ್ಲಿ ದಿನಗೂಲಿಗಳಾಗಿ ದುಡಿಯುತ್ತಿರುವ ಮಕ್ಕಳು ಇದ್ದಾರೆ. ಅವರ ಪಾಲಿನ ಅವಕಾಶ ಅವರಿಗೂ ಸಿಗಬೇಕು. ಅವರ ಪರವಾಗಿಯೂ ನೀವು ಅವಕಾಶ ಸೃಷ್ಟಿಸುವವರಾಗಿ ಎಂದು ಕರೆ ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ