Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌




ಹುಬ್ಬಳ್ಳಿ: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಹೇಳಿದರು.


ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಣೆ ಮತ್ತು ಸ್ಮಾರ್ಟ್‌ ಕಾರ್ಡ್‌ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಅಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಲು ನಮ್ಮ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿದ್ದಾರೆ. ನಾನು ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಸಾಕಷ್ಟು ಸವಾಲುಗಳು ಇದ್ದವು. ಈಗಲೂ ಇವೆ. ಆದರೆ ಕಾರ್ಮಿಕರ ಕಲ್ಯಾಣಕ್ಕಾಗಿ ಏನಾದರೂ ಮಾಡಲೇ ಬೇಕು ಎಂಬ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.


ಅಸಂಘಟಿತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಸಾರಿಗೆ ಮಂಡಳಿ ರಚನೆ ಮಾಡಿದ್ದೇವೆ.  ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಸಹಕಾರ ಹಾಗೂ ಬೆಂಬಲದಿಂದ ಈ ಮಂಡಳಿ ರಚನೆ ಸಾಧ್ಯವಾಯಿತು. ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ರೀತಿಯಿಂದ ಸಹಕಾರ ನೀಡಿದರು. ಹೊಸ ವಾಹನಗಳನ್ನು ಖರೀದಿ ಮಾಡಿದಾಗ ಸಂಗ್ರಹಿಸುವು ಕರದಿಂದ ಈ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ನಿಧಿ ಸ್ಥಾಪಿಸಿ ಜೀವ ವಿಮೆ ಸೇರಿದಂತೆ  ಸೌಲಭ್ಯಗಳನ್ನು ಒದಗಿಸಲಾಗುವುದು. ಇಂತಹ ಒಂದು ಮಂಡಳಿಯನ್ನು ರಚನೆ ಮಾಡಿರುವುದು ಇಡೀ ದೇಶದಲ್ಲೇ ನಾವು ಎಂಬುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.


ಅಸಂಘಟಿತ ವಲಯದಲ್ಲಿ ಕೋಟ್ಯಂತರ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಅವರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಲು ಹಣಕಾಸಿನ ಅಗತ್ಯವಿದೆ. ಅದಕ್ಕಾಗಿ ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲೆ ಕರ ವಿಧಿಸಲು ಮಾನ್ಯ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದೇವೆ. ಹಾಗಾದರೆ ಎರಡು ಸಾವಿರ ಕೋಟಿ ಹಣ ಮಂಡಳಿಗೆ ಬರಲಿದೆ. ಇದರೊಂದಿಗೆ ಜಿಎಸ್‌ಟಿಯಲ್ಲಿ ಒಂದಂಶ ಕೊಡಲು ಕೇಳಿದ್ದೇವೆ. ಕಾರ್ಪೋರೇಟ್‌ ತೆರಿಗೆಯಲ್ಲಿ ಪಾಲು ಕೇಳಿದ್ದೇವೆ. ಇದು ಸಿಕ್ಕರೆ ಸಾವಿರಾರು ಕೋಟಿ ಹಣ ಸಿಗಲಿದೆ. ಆ ಹಣದಿಂದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವವರಿಗೆ ಸೌಲಭ್ಯ ಕೊಡಲು ಅನುಕೂಲವಾಗಲಿದೆ. ಇದೆಲ್ಲ ಸಾಕಾರವಾದರೆ ಇಡೀ ದೇಶದಲ್ಲೇ ಮೊದಲ ಬಾರಿಗೆ ನಮ್ಮ ಕರ್ನಾಟಕದಲ್ಲಿ ಮೊದಲು ಎಂಬುದು ಹೆಮ್ಮೆಯ ವಿಷಯ ಎಂದರು.


ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣಕ್ಕಾಗಿ ಕಾಯ್ದೆ ಜಾರಿ ಮಾಡಿದ್ದೇವೆ. ಈ ಕ್ಷೇತ್ರದಲ್ಲೂ ಅಸಂಖ್ಯಾತ ಕಾರ್ಮಿಕರು ಕೆಲಸ ಮಾಡುತ್ತಾ ಇದ್ದಾರೆ. ಸಿನಿಮಾ ಟಿಕೆಟ್‌ ಮೇಲೆ ಸಣ್ಣ ಮೊತ್ತದ ಕರ ಹಾಕಿ  ಅದಕ್ಕೆ ಸರ್ಕಾರದ ಹಣವೂ ನೀಡಿ ನಿಧಿ ಸ್ಥಾಪಿಸಿ ಈ ಕ್ಷೇತ್ರದ ಜನರಿಗಾಗಿ ಸೌಲಭ್ಯ ಒದಗಿಸಲಾಗುವುದು ಎಂದರು.


 ಇನ್ನು ಗಿಗ್‌ ಕಾರ್ಮಿಕರ ಕಲ್ಯಾಣಕ್ಕಾಗಿ ನಮ್ಮ ಸರ್ಕಾರ ಕ್ರಾಂತಿಕಾರಕ ಕ್ರಮಗಳನ್ನು ಜಾರಿ ಮಾಡಿದೆ. ಇದು ರಾಹುಲ್‌ ಗಾಂಧಿ ಅವರ ಕನಸು. ಭಾರತ್‌ ಜೋಡೊ ಯಾತ್ರೆ ವೇಳೆ ಗಿಗ್‌ ಕಾರ್ಮಿಕರಿಗೆ ಸೌಲಭ್ಯಕ್ಕಾಗಿ ಮನವಿ ಮಾಡಿದ್ದರು. ರಾಜಸ್ಥಾನಕ್ಕಿಂತ ಒಳ್ಳೆಯ ಮಸೂದೆ ಜಾರಿ ಮಾಡಿದ್ದೇವೆ. ಗಿಗ್‌ ಕಾರ್ಮಿಕರ ಕಲ್ಯಾಣ ಮಂಡಳಿ ರಚನೆ ಸಂಬಂಧ ಸಾಕಷ್ಟು ಸಭೆ ಮಾಡಿದ್ದೇನೆ. ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇನೆ. ಗಿಗ್‌ ಕಾರ್ಮಿಕರಾಗಿ ಕೆಲಸ ಮಾಡುವವರು ಮತ್ತು ಅವರ ಅವಲಂಬಿತರಿಗೆ ಜೀವವಿಮೆ ಸೇರಿದಂತೆ ಹಲವಾರು ಸೌಲಭ್ಯಗಳು ಸಿಗಲಿವೆ ಎಂದರು.


ಇನ್ನು ಕಡ್ಡಾಯ ಉಪಧನ (ಗ್ರ್ಯಾಚುಯಿಟಿ) ಕಾಯ್ದೆ, ಅಂಬೇಡ್ಕರ್‌ ಸಹಾಯ ಹಸ್ತ, ಆಶಾದೀಪ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಸದ್ಯದಲ್ಲೇ ಮನೆಕೆಲಸದವರಿಗೆ ಅನುಕೂಲವಾಗುವ ಬಿಲ್‌ ತರಲು ಸಿದ್ಧತೆ ನಡೆದಿದೆ ಎಂದರು.


ನಮ್ಮ ಸರ್ಕಾರದ ಪಂಚ ಗ್ಯಾರಂಟಿಗಳು ಕೋಟ್ಯಂತರ ಕುಟುಂಬಗಳನ್ನು ತಲುಪುತ್ತಾ ಇವೆ. ಹಿಂದಿನ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಹಲವಾರು ಕಾರ್ಯಕ್ರಮಗಳು ಜಾರಿಯಲ್ಲಿವೆ ಎಂದು ವಿವರಿಸಿದರು.


ಸಮಾರಂಭದಲ್ಲಿ ಶಾಸಕರಾದ ಮಹೇಶ್‌ ಟೆಂಗಿನಕಾಯಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲ ಕೃಷ್ಣ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಡಾ ಅಧ್ಯಕ್ಷ ಶಾಕೀರ್‌ ಸನದಿ, ಮಾಜಿ ಸಚಿವ ಹಿಂಡಸಗೇರಿ, ಹೆಸ್ಕಾಂ ಅಧ್ಯಕ್ಷ ಅಜ್ಜಂಪಿರ್‌ ಖಾದ್ರಿ, ಕಾರ್ಮಿಕ ಇಲಾಖೆ ಅಧಿಕಾರಿಗಳು, ಪಕ್ಷದ ಮುಖಂಡರಾದ ಅನಿಲ್‌ ಕುಮಾರ್‌ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ