LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾರ್ಮಿಕರ ಕನಿಷ್ಠ ವೇತನ 20,000 ರೂ. ವರೆಗೆ ಹೆಚ್ಚಳ ಸಾಧ್ಯತೆ

ಬೆಂಗಳೂರು, ಏಪ್ರಿಲ್ 3: ಕೌಶಲಯುಕ್ತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ  ಉದ್ದೇಶಿಸಿದ್ದು, ಮುಂದಿನ ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದ್ದೇ ಆದಲ್ಲಿ, ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂದು ಕರ್ನಾಟಕ ಗುರುತಿಸಿಕೊಳ್ಳಲಿದೆ. ಒಟ್ಟು 82 ವಿವಿಧ ಕೆಲಸಗಳಿಗೆ ಕಾರ್ಮಿಕರ ಕನಿಷ್ಠ ವೇತನ ಅನ್ವಯವಾಗಲಿದೆ. ಈ ಸಂಬಂಧ 2022 ರಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

ಕರಡು ಅಧಿಸೂಚನೆಯನ್ನು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಲಾಗುವುದು. ಮಂಡಳಿಯು ಅನುಮೋದನೆ ನೀಡಿದ್ದೇ ಆದಲ್ಲಿ ಮುಂದಿನ ಒಂದೆರಡು ವಾರಗಳಲ್ಲಿ ಸರ್ಕಾರ ಅಧಿವೇಶನ ಹೊರಡಿಸುವ ನಿರೀಕ್ಷೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ವೇತನ ಪರಿಷ್ಕರಣೆಯಿಂದ ಸಂಘಟಿತ ಮತ್ತು ಅಸಂಘಟಿತ ವಲಯಗಳ ಕಾರ್ಮಿಕರಿಗೆ ಪ್ರಯೋಜನವಾಗಲಿದೆ.

ಪ್ರಸ್ತುತ ಕರ್ನಾಟಕದಲ್ಲಿ ಕೌಶಲ ಸಹಿತ ಮತ್ತು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 12,000 ಇದೆ. ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಇದು 20,000 ರೂಪಾಯಿಗೆ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಸೇರಿದಂತೆ ವಿವಿಧ ವಲಯಗಳ ಸುಮಾರು 1.7 ಕೋಟಿ ಕಾರ್ಮಿಕರಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್