LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಪರಿಸರ ಸಂರಕ್ಷಣೆಗೆ ಜಮಖಂಡಿ ಕ್ಷೇತ್ರದಲ್ಲಿ ‘ಲಕ್ಷ ವೃಕ್ಷ ಅಭಿಯಾನ’ - ಶಾಸಕ ಗುಡಗುಂಟಿ

 

 ಜಮಖಂಡಿ; ಪರಿಸರ ಸಂರಕ್ಷಣೆ, ಹಸಿರು ವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರ ನಿರ್ಮಿಸುವ ಉದ್ದೇಶದಿಂದ ಶಾಸಕ ಜಗದೀಶ ಗುಡಗುಂಟಿ ಅವರ ಪರಿವಾರ ಹಾಗೂ ಅಭಿಮಾನಿಗಳ ವತಿಯಿಂದ ಹಮ್ಮಿಕೊಂಡಿರುವ ‘ಲಕ್ಷ ವೃಕ್ಷ ಅಭಿಯಾನ’ಕ್ಕೆ ಸೋಮವಾರ ನಗರದ ಸಜ್ಜಿ ಹನುಮಾನ ದೇವಸ್ಥಾನ ಬಳಿ ಸಸಿಗಳನ್ನು ನಡುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಶಾಸಕ ಜಗದೀಶ ಗುಡಗುಂಟಿ, “ನನ್ನ ಗಿಡ–ನನ್ನ ಉಸಿರು, ಹಸಿರಿನಿಂದಲೇ ಮಳೆ–ಬೆಳೆ–ಬದುಕು” ಎಂಬ ಆಶಯದೊಂದಿಗೆ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದು ಯಾವುದೇ ಪಕ್ಷ, ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಕ್ಷೇತ್ರದ ಸಮಸ್ತ ಜನರ ಸಹಭಾಗಿತ್ವದಲ್ಲಿ ನಡೆಯುವ ಪರಿಸರ ಸಂರಕ್ಷಣೆಯ ಜನಾಂದೋಲನವಾಗಿದೆ ಎಂದು ತಿಳಿಸಿದರು. ಕ್ಷೇತ್ರವನ್ನು ಹಸಿರುಮಯಗೊಳಿಸುವ ಗುರಿಯೊಂದಿಗೆ ಹಂತ ಹಂತವಾಗಿ ಒಂದು ಲಕ್ಷ ಗಿಡಗಳನ್ನು ನೆಡಲಾಗುವುದು. ನಗರ ಪ್ರದೇಶ ಸೇರಿದಂತೆ ಕಡಪಟ್ಟಿ, ಹುನ್ನೂರ ವಿವಿಧ ಪ್ರದೇಶಗಳಲ್ಲಿ ಸುಮಾರು 50 ಸಾವಿರ ಗಿಡಗಳನ್ನು ಹಾಗೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಂತ ಹಂತವಾಗಿ ಉಳಿದ 50 ಸಾವಿರ ಗಿಡಗಳನ್ನು ನೆಡುವದು ಹಾಗೂ ಪೊಷಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಗಿಡ ನೆಡುವುದಷ್ಟೇ ಅಲ್ಲದೆ, ಅವುಗಳನ್ನು ಎರಡು ವರ್ಷಗಳ ಕಾಲ ನಿರಂತರ ಪೋಷಣೆ ಮತ್ತು ಸಂರಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗಿಡಗಳಿಗೆ ನೀರುಣಿಸಲು ನಾಲ್ಕು ಟ್ಯಾಂಕರ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಗಿಡಕ್ಕೆ ನಾಲ್ಕು ದಿನಕ್ಕೊಮ್ಮೆ ಸುಮಾರು 10 ಲೀಟರ್ ನೀರುಣಿಸುವ ವ್ಯವಸ್ಥೆ ಮಾಡಲಾಗಿದೆ. ಗಿಡಗಳಿಗೆ ಬಿದಿರಿನ ಗಾರ್ಡ್‌ಗಳನ್ನು ಅಳವಡಿಸಿ ಜಾನುವಾರುಗಳಿಂದ ರಕ್ಷಣೆ ಕಲ್ಪಿಸಲಾಗುವುದು ಎಂದು ವಿವರಿಸಿದರು. ಮನೆಗಳ ಮುಂದೆ, ಕಚೇರಿಗಳು, ಶಾಲಾ-ಕಾಲೇಜುಗಳು, ವಿವಿಧ ಸಂಸ್ಥೆಗಳು ಹಾಗೂ ಸಾರ್ವಜನಿಕ ಉದ್ಯಾನಗಳಲ್ಲಿ ಗಿಡಗಳನ್ನು ನೆಡಲು ಆಸಕ್ತರು ಸ್ಥಳ ಒದಗಿಸಿ ತಮ್ಮ ಹೆಸರು ನೋಂದಾಯಿಸಿದರೆ, ಅಭಿಯಾನದ ತಂಡವೇ ಸ್ಥಳಕ್ಕೆ ತೆರಳಿ ಗುಣಮಟ್ಟದ ಮಣ್ಣು, ಗೊಬ್ಬರ ಹಾಗೂ ನೀರಿನ ವ್ಯವಸ್ಥೆ ಮಾಡಿ ಗಿಡ ನೆಡಲಿದೆ ಎಂದು ಹೇಳಿದರು.

“ಗಿಡಮರಗಳು ಪ್ರಾಣವಾಯುವಿನ ಬ್ಯಾಂಕ್‌ಗಳಿದ್ದಂತೆ. ಅವುಗಳನ್ನು ಮಕ್ಕಳಂತೆ ಪೋಷಿಸಿ, ಹಿರಿಯರಂತೆ ಗೌರವಿಸಿ, ದೇವರಂತೆ ಪೂಜಿಸಬೇಕು. ಮನುಕುಲದ ಉಳಿವಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸಬೇಕು” ಎಂದು ಜಗದೀಶ ಗುಡಗುಂಟಿ ಕರೆ ನೀಡಿದರು.ಕಾರ್ಯಕ್ರಮದಲ್ಲಿ ಓಲೆಮಠದ ಆನಂದ ದೇವರು ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು, ಕೊಣ್ಣೂರ ಹೊರಗಿನ ಮಠದ ವಿಶ್ವಪ್ರಭು ಶಿವಾಚಾರ್ಯ ಮಹಾಸ್ವಾಮಿಗಳು ಬ್ರಹ್ಮಕುಮಾರಿ ಆಶ್ರಮದ ಮೀರಾ ಅಕ್ಕ ,ತಹಸೀಲ್ದಾರ ಅನಿಲ ಬಡಿಗೇರ, ಮಾಜಿಶಾಸಕ, ಶ್ರೀಕಾಂತ ಕುಲಕರ್ಣಿ,ಜಿ.ಎಸ್‌. ನ್ಯಾಮಗೌಡ ಮಹಾದೇವ ಇಟ್ಟಿ, ಮಲ್ಲಿಕಾರ್ಜುನ ಬಡಿಗೇರ, ವಿರೂಪಾಕ್ಷಯ್ಯ ಗುಡಗುಂಟಿ, ವಿಶ್ವನಾಥ ಶಾಸ್ತ್ರಿ, ನಾಗಪ್ಪ ಸನದಿ, ದೇವಲ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇಂಜಿನಿಯರ್‌ಗಳು, ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹಾಗೂ ವಿವಿಧ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್