LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಯುವ ಸಂಘಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ರಾಜ್ಯದಲ್ಲಿ ಯುವಜನರ ನಾಯಕತ್ವ ಗುಣ, ಕ್ರೀಡಾ ಪ್ರತಿಭೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭಾರತ್ಜೋ ಡೋ ಯುವ ಸಂಘ’ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು. ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಯೋಜನೆಯ ಅನುಷ್ಠಾನದ ಪ್ರಗತಿ ಕುರಿತು ಸಮಗ್ರವಾಗಿ ಪರಿಶೀಲಿಸಿದರು.
ರಾಜ್ಯಾದ್ಯಂತ ಸ್ಥಳೀಯ ಜನಸಂಖ್ಯೆಯ ಆಧಾರದ ಮೇಲೆ ಒಟ್ಟು 10,000 ಯುವ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂ. ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ. ಈ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರಲ್ಲಿ ನಾಯಕತ್ವದ ಗುಣ ಬೆಳೆಸುವುದರ ಜೊತೆಗೆ ಕ್ರೀಡೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸರ್ಕಾರ ಮುಂದಾಗಿದೆ.
ಸಭೆಯಲ್ಲಿ ಹಿಂಡಲಗಾ, ಬೆನಕನಹಳ್ಳಿ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯುವ ಸಂಘಗಳ ಸ್ಥಾಪನೆ, ಯೋಜನೆಯ ಅನುಷ್ಠಾನ ಹಾಗೂ ಇದುವರೆಗೆ ಆಗಿರುವ ಪ್ರಗತಿ ಕುರಿತು ವಿವರವಾಗಿ ಚರ್ಚಿಸಲಾಯಿತು. ಯೋಜನೆಯ ಪ್ರಯೋಜನ ಅರ್ಹ ಯುವಜನರಿಗೆ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಬ್ಬಾಳಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಹಿಂಡಲಗಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಾಂತಪ್ಪ ಹಾದಿಮನಿ, ಬೆನಕನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಲಸಿದ್ದಪ್ಪ ಸುಳನ್ನವರ್ ಹಾಗೂ ಹಿರೇಬಾಗೇವಾಡಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅಭಿಷೇಕ್ ಪಾಂಡೆ ಉಪಸ್ಥಿತರಿದ್ದರು.
 *ಸಾರ್ವಜನಿಕರ ಅಹವಾಲು ಆಲಿಕೆ*  ಇದಕ್ಕೂ ಮೊದಲು ಲಕ್ಷ್ಮೀ ಹೆಬ್ಬಾಳಕರ್ ಅವರು ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೆಬ್ಬಾಳಕರ್ ಅವರ ಗಮನಕ್ಕೆ ತಂದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಸೂಚಿಸಿದರು. ಹಲವು ಅಹವಾಲುಗಳಿಗೆ ಸ್ಥಳದಲ್ಲಿಯೇ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಕ್ರಮ ಕೈಗೊಂಡರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ಕೆ. ಹರಿಪ್ರಸಾದ್ ಅವರ ಎಂಎಲ್‌ಸಿ ಸ್ಥಾನ ರದ್ದತಿ ಮಾಡಲಿ(ಎಸ್‌.ಎಲ್‌. ಚನ್ನಬಸವಣ್ಣ ಅವರ ಪುಸ್ತಕ ಲೋಕಾರ್ಪಣೆ ಮತ್ತು ಸನ್ಮಾನ ಸಮಾರಂಭಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆದೇವರಾಜ ಅರಸು ಅವರ ಆದರ್ಶ ಎಲ್ಲರಿಗೂ ಪ್ರೇರಣೆ-ಮಂಗಳೂರ  ಮುರುಘೇಂದ್ರ ಶಿವಯೋಗಿಗಳು ಬಸವ ತತ್ವದಂತೆ ನಡೆದು ನಾಡಿಗೆ ಬೆಳಕಾದವರು ಇಂಡಿ: ಹಿರೇರೂಗಿ ಶಾಲೆಯಲ್ಲಿ ಡಿ. ದೇವರಾಜ ಅರಸು 111ನೇ ಜಯಂತಿ ಆಚರಣೆಇಂಡಿ: ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮಇಂಡಿ: ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮಡಿ. ದೇವರಾಜ ಅರಸು ಅವರ 111ನೇ ಜಯಂತಿ ಕಾರ್ಯಕ್ರಮ / ಉಪನ್ಯಾಸಕ ಸಿದ್ರಾಯ ಕಾಂಬಳೆ  ಅಭಿಮತ ನಶಮುಕ್ತ ಭಾರತ ನಿರ್ಮಾಣಕ್ಕೆ ಯುವಜನತೆಯ ಪಾತ್ರ ಮುಖ್ಯ: ಬಿ.ಕೆ. ಮಂಜುಳಾ ಕರೆಕೋ.ಶಿವಾಪೂರದಿಂದ ಗೊಡಚಿಗೆ ಭಕ್ತರ ಪಾದಯಾತ್ರೆ: ವೀರಭದ್ರೇಶ್ವರನಿಗೆ ವಿಶೇಷ ಪೂಜೆ