Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

*ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ ಸಮ್ಮೇಳನದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

 ಬೆಂಗಳೂರು: ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ (CWP) ಭಾರತ ಪ್ರಾದೇಶಿಕ ಸಮ್ಮೇಳನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.
ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಎರಡು ದಿನಗಳ ಮಹತ್ವದ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ ಮಹಿಳಾ ಸಂಸದರು ಹಾಗೂ ಶಾಸಕರು ಪಾಲ್ಗೊಂಡಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವುದು, ರಾಜಕೀಯ ಮತ್ತು ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುವುದು ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಸಕ್ರಿಯ ಮತ್ತು ಅರ್ಥಪೂರ್ಣ ಭಾಗವಹಿಸುವಿಕೆಯನ್ನು ಖಚಿತಪಡಿಸುವ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.
ಮಹಿಳೆಯರು ನಾಯಕತ್ವ ವಹಿಸಿಕೊಂಡಾಗ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಿಷ್ಠ, ಸಮಾನತೆ ಮತ್ತು ಒಳಗೊಳ್ಳುವಿಕೆಯಿಂದ ಕೂಡಿರುತ್ತದೆ ಎಂಬ ಆಶಯದೊಂದಿಗೆ ಈ ಸಮ್ಮೇಳನ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ಉಪಸಭಾಪತಿ ಹರಿವಂಶ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಜಿ.ಎಸ್. ಪಾಟೀಲ, ಸಿಡಬ್ಲ್ಯೂಪಿ ಭಾರತ ಪ್ರಾದೇಶಿಕ ಅಧ್ಯಕ್ಷೆ ಡಾ. ಡಿ. ಪುರಂದೇಶ್ವರಿ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಉಪಸಭಾಪತಿ ಡಾ. ಉಮಾಶ್ರೀ, ವಿಧಾನಸಭೆಯ ಉಪಸಭಾಪತಿ ಮಾಂಕಾಳ ವೈದ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಭಾಗವಹಿಸಿರುವ ಕುರಿತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ವ್ಯಕ್ತಪಡಿಸಿದ್ದು, ಮಹಿಳಾ ನಾಯಕತ್ವ, ಪ್ರಾತಿನಿಧ್ಯ ಮತ್ತು ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ನಿವೇಶನ, ಕಟ್ಟಡ ಮುಟ್ಟುಗೋಲು ; ಆದೇಶದೇಶದ ಆರ್ಥಿಕತೆಗೆ ಸಹಕಾರಿ ಕ್ಷೇತ್ರವೇ ಪ್ರಮುಖ ಆಧಾರಸ್ತಂಭ: ಶಾಸಕ ಯಶವಂತರಾಯಗೌಡ ಪಾಟೀಲಕಳೆದುಹೋದ ೭೫ ಸಾವಿರ ಪತ್ತೆಹಚ್ಚಿ ವಾರಸುದಾರರಿಗೆ ಮರಳಿಸಿದ ಪೊಲೀಸರುಇಂಡಿ: ಶ್ರೀ ಶಾಂತೇಶ್ವರ ಶಿಕ್ಷಣ ಸಂಸ್ಥೆಯಿಂದ ಗೋಶಾಲೆ ನಿರ್ಮಾಣಕ್ಕೆ ಭೂಮಿಪೂಜೆ; 11 ಲಕ್ಷ ರೂ. ಅನುದಾನ ಘೋಷಿಸಿದ ಶಾಸಕ ಯಶವಂತರಾಯಗೌಡ ಪಾಟೀಲ*ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ ಸಮ್ಮೇಳನದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಭಾಗ ೧ ರಲ್ಲಿ ಮಕ್ಕಳ ದಿನಾಚರಣೆಸಾಹಿತ್ಯ ಕೃತಿಗಳು ಅನುಭವದ ಜ್ಞಾನ ಹಂಚುವ ಮಾಧ್ಯಮ: ಡಾ. ವಿಶ್ವನಾಥ ಪಾಟೀಲಎರಡನೇ ಬಾರಿಗೆ ಮಾರಿಹಾಳ ಪಿಕೆಪಿಎಸ್ ಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನಮಗೆ ಹೆಮ್ಮೆ.*ಯೋಗ ರತ್ನ ಡಾ. ಸಂತೋಷ ಗುರೂಜಿ ಅವರಿಗೆ ಸನ್ಮಾನ* ಬಿ ಆರ್ ಅಂಬೇಡ್ಕರ್ ನಿಗಮದ ಸದಸ್ಯ ನಿಂಗಪ್ಪ  ಅರಿಕೆರಿಗೆ ಸತ್ಕಾರ