LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ದೇವರ ದರ್ಶನ ಪಡೆದು, ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್

 ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳಗಾವಿ: ನಗರದ ಎ.ಪಿ.ಎಂ.ಸಿ ರಸ್ತೆಯಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿತ್ತು.
ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಶ್ರೀ ಬಸವೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ, ಎಲ್ಲರ ಬದುಕಿನಲ್ಲಿ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಶ್ರಾವಣ ಮಾಸದ ಕೊನೆಯ ಸೋಮವಾರದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಭಕ್ತರು ಭಕ್ತಿಭಾವದಿಂದ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡು ಬಸವೇಶ್ವರ ಸ್ವಾಮಿಯ ದರ್ಶನ ಪಡೆದರು. ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ವಾತಾವರಣ ನಿರ್ಮಾಣಗೊಂಡಿತ್ತು.
ಪೂಜಾ ಕಾರ್ಯಕ್ರಮದ ಬಳಿಕ ಲಕ್ಷ್ಮೀ ಹೆಬ್ಬಾಳಕರ್ ಅವರು ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದರು. ಭಕ್ತರು ಹಾಗೂ ಸಾರ್ವಜನಿಕರಿಗೆ ಪ್ರಸಾದ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ಧಾರ್ಮಿಕ ಆಚರಣೆಗಳ ಜೊತೆಗೆ ಅನ್ನದಾಸೋಹ ಹಾಗೂ ಪ್ರಸಾದ ಸೇವೆಯಂತಹ ಸಮಾಜಮುಖಿ ಕಾರ್ಯಗಳು ಜನರಲ್ಲಿ ಭಕ್ತಿ, ಸೇವಾ ಮನೋಭಾವ ಮತ್ತು ಪರಸ್ಪರ ಬಾಂಧವ್ಯವನ್ನು ಬೆಳೆಸುತ್ತವೆ ಎಂದು ಹೇಳಿದರು.
ಇದೇ ವೇಳೆ ಶ್ರೀ ಬಸವೇಶ್ವರ ದೇವಸ್ಥಾನದ ಟ್ರಸ್ಟ್ ಕಮಿಟಿಯ ವತಿಯಿಂದ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ದೇವಸ್ಥಾನದ ಅಭಿವೃದ್ಧಿ ಹಾಗೂ ಧಾರ್ಮಿಕ ಚಟುವಟಿಕೆಗಳ ಕುರಿತು ಟ್ರಸ್ಟ್ ಸದಸ್ಯರು ಅವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ದೇವಸ್ಥಾನದ ಟ್ರಸ್ಟ್ ಕಮಿಟಿಯ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್