Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಪಂಡರಪುರ ದಿಂಡಿ ಪಾದಯಾತ್ರೆಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳಕರ್* 

ಬೆಳಗಾವಿ: ಆಷಾಢ ಏಕಾದಶಿ ಅಂಗವಾಗಿ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಗುರುವಾರ ಆಯೋಜಿಸಲಾದ ಶ್ರೀ ವಿಠ್ಠಲ–ರುಕ್ಮಾಯಿ ಪಂಡರಪುರ ದಿಂಡಿ ಪಾದಯಾತ್ರೆಗೆ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿ, ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸಾವಿರಾರು ಭಕ್ತರಿಗೆ ಶುಭಾಶಯ ಕೋರಿದರು.
ಶ್ರೀ ವಿಠ್ಠಲ ಮತ್ತು ರುಕ್ಮಾಯಿ ದೇವಿಯ ಭಜನೆ, ನಾಮಸ್ಮರಣೆ ಹಾಗೂ ಭಕ್ತಿಗೀತೆಗಳ ನಡುವೆ ಆರಂಭವಾದ ಪಾದಯಾತ್ರೆಯಲ್ಲಿ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಸಂಪ್ರದಾಯಬದ್ಧ ವೇಷಭೂಷಣ ಧರಿಸಿದ್ದ ವಾರ್ಕರಿ ಭಕ್ತರು "ವಿಠ್ಠಲ ವಿಠ್ಠಲ" ಎಂಬ ನಾಮಘೋಷದೊಂದಿಗೆ ಸಾಗಿದ ದೃಶ್ಯ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಆಷಾಢ ಏಕಾದಶಿಯು ಭಕ್ತಿ, ಶ್ರದ್ಧೆ ಮತ್ತು ಆಧ್ಯಾತ್ಮಿಕತೆಯ ಪ್ರತೀಕವಾಗಿದ್ದು, ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಹಾಗೂ ಏಕತೆಯ ಸಂದೇಶವನ್ನು ಸಾರುತ್ತವೆ ಎಂದು ಹೇಳಿದರು. ಪಂಡರಪುರ ದಿಂಡಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಭಕ್ತರಿಗೆ ಶ್ರೀ ವಿಠ್ಠಲನ ಆಶೀರ್ವಾದ ಸದಾ ಇರಲಿ ಎಂದು ಅವರು ಹಾರೈಸಿದರು.
ಸಾಂಬ್ರಾ ಗ್ರಾಮದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತಿಭಾವದಿಂದ ನಡೆಯುತ್ತಿರುವ ಈ ದಿಂಡಿ ಪಾದಯಾತ್ರೆಯು ಸ್ಥಳೀಯರ ಧಾರ್ಮಿಕ ಸಂಪ್ರದಾಯದ ಪ್ರತೀಕವಾಗಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯುತ್ತಿರುವುದು ಶ್ಲಾಘನೀಯ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ನಾಗೇಶ್ ದೇಸಾಯಿ, ಮನೋಹರ್ ಬೆಳಗಾಂವ್ಕರ್, ವಾರ್ಕರಿ ಸಂತರು, ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ