LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ್ ಹಾಗೂ ಇನಾಂ ಬಡಸ್ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರ ಕುಟುಂಬಗಳಲ್ಲಿ ಇತ್ತೀಚೆಗೆ ಸಂಭವಿಸಿದ ದುಃಖದ ಘಟನೆಗಳ ಹಿನ್ನೆಲೆಯಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಎಳೇಬೈಲ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ಧಾನಾಜಿ ರಾಮು ಮೊರೆ ಅವರ ಪತ್ನಿ ಮಂಗಲ ಮೊರೆ ಅವರು ಇತ್ತೀಚೆಗೆ ನಿಧನರಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ, ಸಾಂತ್ವನ ಹೇಳಿದರು.
ಇದೇ ವೇಳೆ ಇನಾಂ ಬಡಸ್ ಗ್ರಾಮದ ಕಾಂಗ್ರೆಸ್ ಪಕ್ಷದ ಮುಖಂಡ ನಾರಾಯಣ ಪಾಟೀಲ ಅವರ ತಾಯಿ ಯುಲ್ಲುಬಾಯಿ ಪಾಟೀಲ ಅವರು ಇತ್ತೀಚೆಗೆ ನಿಧನರಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರು ಅವರ ನಿವಾಸಕ್ಕೂ ಭೇಟಿ ನೀಡಿದರು. ಕುಟುಂಬಸ್ಥರನ್ನು ಭೇಟಿಯಾಗಿ, ಮೃತರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ದುಃಖದಲ್ಲಿ ಭಾಗಿಯಾದರು.
ಎರಡೂ ಕುಟುಂಬಗಳೊಂದಿಗೆ ಕೆಲಕಾಲ ಆತ್ಮೀಯವಾಗಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಗಲಿದವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಬ್ಬಳ್ಳಿಯ ಪುಷ್ಕರಣಿ ವಿಚಾರದಲ್ಲಿ ಬೆಲ್ಲದ ರಾಜಕಾರಣ ಬಿಡಲಿ,  ದೀಪಕ ಚಿಂಚೋರೆ ವಾಗ್ದಾಳಿಭತ್ತದಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಅಳ್ನಾವರ ತಾಲೂಕಿನ ಬೆಣಚಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಡೋರಿ ಗ್ರಾಮಕ್ಕೆ ಜಿಲ್ಲಾಧಿಕಾರಿ- ಸ್ನೇಹಲ್ ಆರ್. ಭೇಟಿ  ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಪಿಎಸ್‌ಐ  ಎ. ರುಕ್ಮಿಣಿತಾಯಿ-ಶಿಶು ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ್ಮಾತು ಮನೆ ಕಟ್ಟುತ್ತದೆ, ಮಾತೇ ಮನೆಯನ್ನು ಕೆಡಿಸುತ್ತದೆ - ಶಿದ್ದಲಿಂಗಶ್ರೀ*ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ದತ್ತಾ ವಾಸ್ಟರ್ ಅವಿರೋಧವಾಗಿ ಆಯ್ಕೆ*ಪ್ರಾಮಾಣಿಕತೆ ಇದ್ದಲ್ಲಿ ಲಾಭ ಹೆಚ್ಚಿರುತ್ತದೆ - ಗುರುಪಾದ ಶ್ರೀಭಾಜಪ ಜಿಲ್ಲಾಧ್ಯಕ್ಷ ಶ್ರೀ ಖಾಸ್ಗತೇಶ್ವರ ಮಠಕ್ಕೆ ಭೇಟಿ