ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿ: ಅರ್ಜಿ ಆಹ್ವಾನ
ಬಳ್ಳಾರಿ,ಏ.25
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲೆಯ ಪರಿಶಿಷ್ಟ ಪಂಗಡದ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಭೂ-ಒಡೆತನ ಯೋಜನೆಯಡಿ ಜಮೀನು ಖರೀದಿಸಲು ಉದ್ದೇಶಿಸಲಾಗಿದ್ದು, ಜಮೀನು ಮಾರಾಟ ಮಾಡುವ ಭೂ-ಮಾಲೀಕರಿಂದ ಹಾಗೂ ಸೌಲಭ್ಯ ಪಡೆಯಬಯಸುವ ಫಲಾನುಭವಿಗಳಿಂದ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹಿಂದೆ ಜಿಲ್ಲಾ ಕಚೇರಿಯಲ್ಲಿದ್ದ ಹಳೆಯ ಪ್ರಸ್ತಾವನೆಗಳನ್ನು ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ರದ್ದುಪಡಿಸಲಾಗಿದ್ದು, ಈಗ ಸಂಪೂರ್ಣವಾಗಿ ಹೊಸ ಪ್ರಸ್ತಾವನೆಗಳನ್ನು ಮಾತ್ರ ಸ್ವೀಕರಿಸಲಾಗುವುದು.
ಅರ್ಜಿಗಳನ್ನು ಮೇ 04 ರೊಳಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಸಂತೋಷಿ ಮಾತಾ ಮಂದಿರದ ಎದುರು, ಪಿ.ಡಬ್ಲೂö್ಯ.ಡಿ. ಕಚೇರಿ ಹತ್ತಿರ, ಬಳ್ಳಾರಿ. ಇಲ್ಲಿಗೆ ಸಲ್ಲಿಸಬೇಕು.
*ಭೂ-ಮಾಲೀಕರಿಗೆ ಸೂಚನೆಗಳು:*
ಜಮೀನು ಮಾರಾಟ ಮಾಡಲು ಇಚ್ಛಿಸುವ ಮಾಲೀಕರು ನಿಯಮಗಳನ್ನು ಪಾಲಿಸಬೇಕು. ಭೂ-ಮಾಲೀಕರು ಖುದ್ದಾಗಿ ನಮೂನೆ-1ರ ಒಪ್ಪಿಗೆ ಪತ್ರವನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಜಮೀನಿಗೆ ಸಂಬAಧಿಸಿದ ಪಹಣಿ, ನಕ್ಷೆ ಹಾಗೂ ಅಗತ್ಯವಿರುವ ಎಲ್ಲಾ ಮೂಲ ದಾಖಲಾತಿಗಳನ್ನು ಲಗತ್ತಿಸಬೇಕು. ಯಾವುದೇ ಮಧ್ಯವರ್ತಿಗಳ ಆಮಿಷಕ್ಕೆ ಒಳಗಾಗದೆ ನೇರವಾಗಿ ಕಚೇರಿಯನ್ನು ಸಂಪರ್ಕಿಸಬೇಕು.
*ಫಲಾನುಭವಿಗಳಿಗೆ (ಮಹಿಳಾ ಕೃಷಿ ಕಾರ್ಮಿಕರಿಗೆ) ನಿಯಮಗಳು:*
ಅರ್ಜಿದಾರರು ಕಡ್ಡಾಯವಾಗಿ ಭೂ-ರಹಿತ ಕೃಷಿ ಕಾರ್ಮಿಕ ಮಹಿಳೆ ಆಗಿರಬೇಕು. ತಮಗೆ ಯಾವುದೇ ಜಮೀನು ಇಲ್ಲದಿರುವ ಬಗ್ಗೆ ಸಂಬAಧಪಟ್ಟ ಇಲಾಖೆಯಿಂದ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಯ ಪ್ರತಿಗಳನ್ನು ಸಲ್ಲಿಸಬೇಕು.
ಸಾರ್ವಜನಿಕರು ಹಾಗೂ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳ ಮೊರೆ ಹೋಗಬಾರದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿಯ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚಿದಾನಂದಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ