Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕುಸಿತ: 30ಮನೆಗಳು ಹಾನಿ

ಶ್ರೀನಗರ,27:  ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಬರೊಬ್ಬರಿ 1 ಕಿ.ಮೀ ವರೆಗೂ ರಸ್ತೆಗಳಲ್ಲಿನ ಭೂಮಿ ಮುಳುಗಡೆಯಾಗಿ 30ಮನೆಗಳು ಹಾನಿಗೊಳಗಾಗಿದೆ.

ಗುರುವಾರ ಸಂಜೆಯಿಂದ ಜಮ್ಮು ಮತ್ತು ಕಾಶ್ಮೀರದ ರಂಬಾನ್-ಗೂಲ್ ರಸ್ತೆಯಲ್ಲಿ ಸುಮಾರು 1 ಕಿ.ಮೀ.ನಷ್ಟು ಪ್ರದೇಶದಲ್ಲಿ ಭೂಮಿ ಮುಳುಗಡೆಯಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನಿಂದ 6 ಕಿಮೀ ದೂರದಲ್ಲಿರುವ ಪೆರ್ನೋಟ್ ಗ್ರಾಮದಲ್ಲಿ ಸುಮಾರು 30 ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

''ನಿನ್ನೆ ಸಂಜೆಯಿಂದ ರಸ್ತೆಗಳಲ್ಲಿ ಸಣ್ಣಪುಟ್ಟ ಬಿರುಕುಗಳು ಉಂಟಾಗಿದ್ದು, 1000-1200 ಮೀಟರ್‌ ಉದ್ದದ ರಸ್ತೆಗೆ ಹಾನಿಯಾಗಿದೆ. ಈ ಭಾಗದಲ್ಲಿ ಭೂಮಿ ನಿಧಾನವಾಗಿ ಮುಳುಗುತ್ತಿದ್ದು, ಭೂಕುಸಿತದಿಂದಾಗಿ ಕೆಲವೆಡೆ 10-12 ಮೀಟರ್‌ಗಳಷ್ಟು ರಸ್ತೆ ಕುಸಿದಿದೆ. ಇಲ್ಲಿ ಇನ್ನೂ ಭೂ ಕುಸಿತ ಮುಂದುವರೆದಿದೆ. ಸಂತ್ರಸ್ತ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಜನರಲ್ ರಿಸರ್ವ್ ಎಂಜಿನಿಯರ್ ಫೋರ್ಸ್‌ನ ಕಮಾಂಡಿಂಗ್ ಅಧಿಕಾರಿ ಎಸ್‌ಕೆ ಗೌತಮ್ ಹೇಳಿದ್ದಾರೆ.

"ನಿನ್ನೆ ಸಂಜೆ ರಾಂಬನ್ ನಿಂದ ಸುಮಾರು 5 ಕಿ.ಮೀ ದೂರದಲ್ಲಿ ಭೂಕುಸಿತ ಪ್ರಾರಂಭವಾಯಿತು. ಭೂ ಕುಸಿತ ಮತ್ತು ಭೂಮಿ ಮುಳುಗಡೆಯಿಂದಾಗಿ ರಸ್ತೆಗಳು ಹಾಳಾಗಿವೆ. ಸಮೀಪದ ಪ್ರದೇಶಗಳಲ್ಲಿ ಸುಮಾರು 30-40 ಮನೆಗಳು ಸಹ ಹಾನಿಗೊಳಗಾಗಿವೆ. ನಾವು ಈ ಭಾಗದಲ್ಲಿ ರಕ್ಷಣಾ ತಂಡಗಳನ್ನು ನಿಯೋಜಿಸಿದ್ದೇವೆ ಮತ್ತು ಅವರು ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ರಾಂಬನ್ ಎಡಿಡಿಸಿ ರೋಷನ್ ಲಾಲ್ ಮಾಹಿತಿ ನೀಡಿದ್ದಾರೆ. ಜಮೀನು ಮುಳುಗಡೆಯಿಂದ ಬೆಳೆ ಹಾನಿಯಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ