Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾಷೆ ಸಂಸ್ಕೃತಿ ಅರಿವಿನ ಸಾಧನ: ಪ್ರೊ. ಸಿ.ಎಂ. ತ್ಯಾಗರಾಜ

ಭಾಷೆ ಕೇವಲ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲ ; ಅದು ಒಂದು ನಿರ್ದಿಷ್ಟ ಪರಿಸರದ ಸಂಪತ್ಭರಿತ ಸಂಸ್ಕೃತಿಯನ್ನು ಅರಿತುಕೊಳ್ಳುವ ಸಾಧನ ಎಂದು ಪ್ರೊ. ಸಿ. ಎಂ. ತ್ಯಾಗರಾಜ ಅವರು ಅಭಿಪ್ರಾಯಪಟ್ಟರು.

ಬೆಳಗಾವಿ : ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಹಿಂದಿ ವಿಭಾಗವು  ಹಿಂದಿ ದಿವಸ್ ಆಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿ ಮಾತನಾಡುವವರ ಸಂಖ್ಯೆ ಮತ್ತು ಅದು ಒಳಗೊಂಡಿರುವ ಭೌಗೋಳಿಕತೆಯ ವ್ಯಾಪ್ತಿ ಹೆಚ್ಚಿದೆ. ನಮ್ಮ ಭಾಷೆಯ ಜೊತೆಗೆ ಇತರ ಭಾಷೆಗಳನ್ನು ಗೌರವಿಸೋಣ. ಒಂದು ಭಾಷೆ ಕಲಿಯುವುದರಿಂದ ಆ ಭಾಷೆಯ ಮೂಲ ಸಂಸ್ಕೃತಿಯ ಸೊಗಡನ್ನು ಯಥಾವತ್ತಾಗಿ ಅನುಭವಿಸಬಹುದು. ಇದು ಅನುವಾದಿಂದ ತಿಳಿದುಕೊಳ್ಳುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಹಿಂದಿ  ಹೆಚ್ಚು ರಾಜ್ಯಗಳನ್ನು ಜೋಡಿಸುವ ಭಾಷೆಯಾಗಿದೆ. ಹಿಂದಿ ಕಲಿಯುವುದರಿಂದ ಕೇಂದ್ರದ ಆಡಳಿತಾತ್ಮಕ ವಿಷಯಗಳನ್ನು ಕೂಲಂಕಷವಾಗಿ ಅರಿತುಕೊಳ್ಳಲು ಸಹಾಯವಾಗುತ್ತದೆ  ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್ ಸಿ ಪಾಟೀಲ್ ಅವರು  ರಾಷ್ಟ್ರವ್ಯಾಪಿ  ಬಹುತೇಕ ಹರಡಿಕೊಂಡಿರುವ ಹಿಂದಿಯನ್ನು ಒಂದು ಭಾಷೆಯಾಗಿ ಕಲಿಯುವುದು ಹೆಚ್ಚು ಲಾಭದಾಯಕವಾಗಿದೆ. ನಮ್ಮ  ಜ್ಞಾನ ಭಂಡಾರ ಹೆಚ್ಚುತ್ತದೆ. ಅಲ್ಲಿಯ ಸಂಸ್ಕೃತಿ, ಇತಿಹಾಸ, ಪರಂಪರೆಗಳನ್ನು ನೇರವಾಗಿ ತಿಳಿದುಕೊಳ್ಳಬಹುದಾಗಿದೆ. ಬಹುತೇಕ ಉತ್ತರ ಭಾರತದ ರಾಜ್ಯಗಳನ್ನು ಸಂಪರ್ಕಿಸಲು ಹಿಂದಿ ಪ್ರಮುಖ ಪಾತ್ರ ವಹಿಸುತ್ತದೆ. ಹಿಂದಿ ಭಾಷೆಯನ್ನು ಕಲಿಯುವುದರಿಂದ ಆ ಪರಿಸರದ ಭವ್ಯ ಪರಂಪರೆಯನ್ನು ನೈಜವಾಗಿ ತಿಳಿದುಕೊಳ್ಳಬಹುದಾಗಿದೆ ಎಂದರು.

ಬೆಳಗಾವಿಯ ಮರಾಠಾ ಮಂಡಲ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹವಿಜ್ಞಾನ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಡಿ. ಎಂ. ಮುಲ್ಲಾ ಅವರು ಹಿಂದಿ ಔರ್ ರೋಜಗಾರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಹಿಂದಿ ಭಾಷೆ ಸುಂದರ, ಸರಳ ಹಾಗೂ ಹೃದಯವನ್ನ ಜೋಡಿಸುವ ಭಾಷೆಯಾಗಿದೆ. ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ಯ ಹೋರಾಟದಲ್ಲಿ ಎಲ್ಲ ಜನರನ್ನು ಜೋಡಿಸಲು ಹಿಂದಿ ಭಾಷೆಯನ್ನು ಮಾಧ್ಯಮವನ್ನಾಗಿ ಬಳಸಿಕೊಂಡರು.  ಪ್ರಪಂಚದಲ್ಲಿ ಅತೀ ಹೆಚ್ಚು ಬಳಸುವ ಮೂರನೇ ಭಾಷೆಯಾಗಿದೆ.  ಅನುವಾದ ಕ್ಷೇತ್ರದಲ್ಲಿ ಅತ್ಯುತ್ತಮ ಉದ್ಯೋಗ ಅವಕಾಶ ಕಲ್ಪಿಸಿದೆ. ವಿದೇಶದಲ್ಲಿ ಹಿಂದಿ ಭಾಷೆಯ ಬಗ್ಗೆ ಅಭಿಮಾನ, ಗೌರವ ಬೆಳೆಯುತ್ತಿದೆ ಎಂದರು.

ಹಿಂದಿ ವಿಭಾಗದ ಮುಖ್ಯಸ್ಥರಾದ ಎಂ.ಎಂ.ಮುತವಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೀಪಾ ಅಂಟಿನ ಪರಿಚಯಿಸಿದರು.
ವಿದ್ಯಾರ್ಥಿನಿ ಜ್ಯೋತಿ ಹುಬ್ಬಳಿಕರ ನಿರೂಪಿಸಿದರು, ವಿದ್ಯಾರ್ಥಿನಿಯರಾದ ಜ್ಯೋತಿ, ಸೌಂದರ್ಯ ಹಾಗೂ ರಕ್ಷಿತಾ ಪ್ರಾರ್ಥಿಸಿದರು. ಉಪನ್ಯಾಸಕಿ ಉಜ್ವಲಾ ಪಾಟೀಲ ವಂದಿಸಿದರು. ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಭಾಷೆ ಸಂಸ್ಕೃತಿ ಅರಿವಿನ ಸಾಧನ: ಪ್ರೊ. ಸಿ.ಎಂ. ತ್ಯಾಗರಾಜ

ಭಾಷೆ ಕೇವಲ ಸಂಪರ್ಕ ಕಲ್ಪಿಸುವುದು ಮಾತ್ರವಲ್ಲ ; ಅದು ಒಂದು ನಿರ್ದಿಷ್ಟ ಪರಿಸರದ ಸಂಪತ್ಭರಿತ ಸಂಸ್ಕೃತಿಯನ್ನು ಅರಿತುಕೊಳ್ಳುವ ಸಾಧನ ಎಂದು ಪ್ರೊ. ಸಿ. ಎಂ. ತ್ಯಾಗರಾಜ ಅವರು ಅಭಿಪ್ರಾಯಪಟ್ಟರು.

ಬೆಳಗಾವಿ : ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಹಿಂದಿ ವಿಭಾಗವು  ಹಿಂದಿ ದಿವಸ್ ಆಚರಣೆಯ ನಿಮಿತ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದರು.

ಹಿಂದಿ ಮಾತನಾಡುವವರ ಸಂಖ್ಯೆ ಮತ್ತು ಅದು ಒಳಗೊಂಡಿರುವ ಭೌಗೋಳಿಕತೆಯ ವ್ಯಾಪ್ತಿ ಹೆಚ್ಚಿದೆ. ನಮ್ಮ ಭಾಷೆಯ ಜೊತೆಗೆ ಇತರ ಭಾಷೆಗಳನ್ನು ಗೌರವಿಸೋಣ. ಒಂದು ಭಾಷೆ ಕಲಿಯುವುದರಿಂದ ಆ ಭಾಷೆಯ ಮೂಲ ಸಂಸ್ಕೃತಿಯ ಸೊಗಡನ್ನು ಯಥಾವತ್ತಾಗಿ ಅನುಭವಿಸಬಹುದು. ಇದು ಅನುವಾದಿಂದ ತಿಳಿದುಕೊಳ್ಳುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಹಿಂದಿ  ಹೆಚ್ಚು ರಾಜ್ಯಗಳನ್ನು ಜೋಡಿಸುವ ಭಾಷೆಯಾಗಿದೆ. ಹಿಂದಿ ಕಲಿಯುವುದರಿಂದ ಕೇಂದ್ರದ ಆಡಳಿತಾತ್ಮಕ ವಿಷಯಗಳನ್ನು ಕೂಲಂಕಷವಾಗಿ ಅರಿತುಕೊಳ್ಳಲು ಸಹಾಯವಾಗುತ್ತದೆ  ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್ ಸಿ ಪಾಟೀಲ್ ಅವರು  ರಾಷ್ಟ್ರವ್ಯಾಪಿ  ಬಹುತೇಕ ಹರಡಿಕೊಂಡಿರುವ ಹಿಂದಿಯನ್ನು ಒಂದು ಭಾಷೆಯಾಗಿ ಕಲಿಯುವುದು ಹೆಚ್ಚು ಲಾಭದಾಯಕವಾಗಿದೆ. ನಮ್ಮ  ಜ್ಞಾನ ಭಂಡಾರ ಹೆಚ್ಚುತ್ತದೆ. ಅಲ್ಲಿಯ ಸಂಸ್ಕೃತಿ, ಇತಿಹಾಸ, ಪರಂಪರೆಗಳನ್ನು ನೇರವಾಗಿ ತಿಳಿದುಕೊಳ್ಳಬಹುದಾಗಿದೆ. ಬಹುತೇಕ ಉತ್ತರ ಭಾರತದ ರಾಜ್ಯಗಳನ್ನು ಸಂಪರ್ಕಿಸಲು ಹಿಂದಿ ಪ್ರಮುಖ ಪಾತ್ರ ವಹಿಸುತ್ತದೆ. ಹಿಂದಿ ಭಾಷೆಯನ್ನು ಕಲಿಯುವುದರಿಂದ ಆ ಪರಿಸರದ ಭವ್ಯ ಪರಂಪರೆಯನ್ನು ನೈಜವಾಗಿ ತಿಳಿದುಕೊಳ್ಳಬಹುದಾಗಿದೆ ಎಂದರು.

ಬೆಳಗಾವಿಯ ಮರಾಠಾ ಮಂಡಲ ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಗೃಹವಿಜ್ಞಾನ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಡಿ. ಎಂ. ಮುಲ್ಲಾ ಅವರು ಹಿಂದಿ ಔರ್ ರೋಜಗಾರ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಹಿಂದಿ ಭಾಷೆ ಸುಂದರ, ಸರಳ ಹಾಗೂ ಹೃದಯವನ್ನ ಜೋಡಿಸುವ ಭಾಷೆಯಾಗಿದೆ. ಮಹಾತ್ಮಾ ಗಾಂಧೀಜಿ ಅವರು ಸ್ವಾತಂತ್ಯ ಹೋರಾಟದಲ್ಲಿ ಎಲ್ಲ ಜನರನ್ನು ಜೋಡಿಸಲು ಹಿಂದಿ ಭಾಷೆಯನ್ನು ಮಾಧ್ಯಮವನ್ನಾಗಿ ಬಳಸಿಕೊಂಡರು.  ಪ್ರಪಂಚದಲ್ಲಿ ಅತೀ ಹೆಚ್ಚು ಬಳಸುವ ಮೂರನೇ ಭಾಷೆಯಾಗಿದೆ.  ಅನುವಾದ ಕ್ಷೇತ್ರದಲ್ಲಿ ಅತ್ಯುತ್ತಮ ಉದ್ಯೋಗ ಅವಕಾಶ ಕಲ್ಪಿಸಿದೆ. ವಿದೇಶದಲ್ಲಿ ಹಿಂದಿ ಭಾಷೆಯ ಬಗ್ಗೆ ಅಭಿಮಾನ, ಗೌರವ ಬೆಳೆಯುತ್ತಿದೆ ಎಂದರು.

ಹಿಂದಿ ವಿಭಾಗದ ಮುಖ್ಯಸ್ಥರಾದ ಎಂ.ಎಂ.ಮುತವಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ದೀಪಾ ಅಂಟಿನ ಪರಿಚಯಿಸಿದರು.
ವಿದ್ಯಾರ್ಥಿನಿ ಜ್ಯೋತಿ ಹುಬ್ಬಳಿಕರ ನಿರೂಪಿಸಿದರು, ವಿದ್ಯಾರ್ಥಿನಿಯರಾದ ಜ್ಯೋತಿ, ಸೌಂದರ್ಯ ಹಾಗೂ ರಕ್ಷಿತಾ ಪ್ರಾರ್ಥಿಸಿದರು. ಉಪನ್ಯಾಸಕಿ ಉಜ್ವಲಾ ಪಾಟೀಲ ವಂದಿಸಿದರು. ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ