LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಚಾಲನೆ

ಬೆಳಗಾವಿ;

ಬೆಳಗಾವಿಯ ಕೋಟೆ ಆವರಣದಲ್ಲಿರುವ ಐತಿಹಾಸಿಕ ಕಮಲ ಬಸದಿಯಲ್ಲಿ ಇದೇ ಏಪ್ರಿಲ್ 24 ರಿಂದ 28 ರವರೆಗೆ ಐದು ದಿನಗಳ ಕಾಲ ನಡೆಯುತ್ತಿರುವ ಧರ್ಮಚಕ್ರ ಆರಾಧನಾ ಮಹೋತ್ಸವಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ  ಧರ್ಮಬಂಧುಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜೈನ ಸಮಾಜ ಶಾಂತಿಪ್ರೀಯ ಸಮಾಜವಾಗಿದ್ದು,  ಎಲ್ಲ ಸಮಾಜದವರೊಂದಿಗೆ ಒಂದಾಗಿ ಹಾಗೂ ಎಲ್ಲರೊಂದಿಗೆ ಹೊಂದಿಕೊಂಡು ಹೋಗುವ ಸಮಾಜವಾಗಿದೆ. ಇಂದು ಐತಿಹಾಸಿಕ ಕೋಟೆ ಆವರಣದಲ್ಲಿ ಒಂದು ಧಾರ್ಮಿಕ  ಕಾರ್ಯಕ್ರಮ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ಈಗಾಗಲೆ ಕೋಟೆ ಆವರಣವನ್ನು ಅಭಿವೃದ್ಧಿಗೊಳಿಸಲಾಗಿದ್ದು,  ಇದನ್ನು ಇದೇ ರೀತಿ ಕಾಪಾಡಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿಯಾಗಿದೆ.‌ ಇಂದಿನ ಕಾರ್ಯಕ್ರಮದಲ್ಲಿ ಅನೇಕ‌ ಯುವಕ- ಯುವತಿಯರು ಭಾಗವಹಿಸಿದ್ದು  ಹೆಮ್ಮೆಯ ಸಂಗತಿ. ‌ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಸಂಸ್ಕಾರ  ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ  ಮಹೋತ್ಸವ ಸಮಿತಿ ವತಿಯಿಂದ ಹಾಗೂ ಜೈನ ಸಮಾಜದ ವತಿಯಿಂದ ಗೌರವಿಸಲಾಯಿತು. ಸಮಾರಂಭದಲ್ಲಿ  ಮಹೋತ್ಸವ ಸಮಿತಿಯ ಖಜಾಂಚಿ ಹಾಗೂ ಭರತೇಶ ಶಿಕ್ಷಣ ಸಂಸ್ಥೆ ಯ ಕಾರ್ಯದರ್ಶಿ  ವಿನೋದ ದೊಡ್ಡಣ್ಣವರ, ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು. ಇದಕ್ಕೂ ಮೊದಲು ಬೆಳಿಗ್ಗೆ  ಮಾಜಿ ಶಾಸಕರಾದ ವೀರಕುಮಾರ ಪಾಟೀಲ, ಸಂಜಯ ಪಾಟೀಲ, ಖ್ಯಾತ ನ್ಯಾಯವಾದಿ ರವಿರಾಜ ಪಾಟೀಲ, ಉದ್ಯಮಿ‌ ಭರತ ಪಾಟೀಲ ಇನ್ನಿತರ ಗಣ್ಯರಿಂದ ಧ್ವಜಾರೋಹಣ ಮತ್ತು ಮಂಟಪ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಇಂದ್ರಜಿತ್ ‌ದೊಡ್ಡಣ್ಣವರ ಮತ್ತು ಭರತೇಶ ಬುಡವಿ ಇವರು ವಿಧಿ- ವಿಧಾನ ಮಾಡಿದರು. ಪಂಡಿತ ಅಮೋಲ  ಉಪಾಧ್ಯೆ ಮತ್ತು ಮಹಾವೀರ ಉಪಾಧ್ಯೆ  ಅವರು ಪೂಜಾ ವಿಧಿಗಳನ್ನು ನಡೆಸಿಕೊಟ್ಟರು. ‌

 ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುನಿಲ ಹನಮಣ್ಣವರ,  ಕಾರ್ಯದರ್ಶಿ ಹೀರಾಚಂದ ಕಲಮನಿ, ಸನ್ಮತಿ ಕಸ್ತೂರಿ, ಅಭಿನಂದನ ಜಾಬನ್ನವರ, ರಾಜೇಂದ್ರ ಜಕ್ಕನ್ನವರ , ಅಭಯ ಅವಲಕ್ಕಿ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು. ಪದ್ಮರಾಜ ವೈಜನ್ನವರ  ಕಾರ್ಯಕ್ರಮ ನಿರೂಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್