Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಸ ವಿಲೇವಾರಿ ವಾಹನಗಳ ಲೋಕಾರ್ಪಣೆ, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿ




ಬಳ್ಳಾರಿ, ಜೂ.24: ಬಳ್ಳಾರಿ ಮಹಾನಗರ ಪಾಲಿಕೆಯ ವತಿಯಿಂದ ಕಸ ಸಂಗ್ರಹಿಸುವ ವಿಲೇವಾರಿ ಮಾಡುವ 23 ನೂತನ ವಾಹನಗಳನ್ನು ಶಾಸಕ ನಾರಾ ಭರತ್ ರೆಡ್ಡಿ ಲೋಕಾರ್ಪಣೆಗೊಳಿಸಿದರು. ಮಂಗಳವಾರ ಬೆಳಿಗ್ಗೆ ನಲ್ಲಚೆರುವು ಪ್ರದೇಶದ ಕಸ ಸಂಗ್ರಹ ಘಟಕದ ಆವರಣದಲ್ಲಿ ಏರ್ಪಡಿಸಿದ್ದ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.


ಮೇಯರ್ ಮುಲ್ಲಂಗಿ ನಂದೀಶ್, ಉಪ ಮೇಯರ್ ಡಿ.ಕುಸುಂ, ಮಾಜಿ ಮೇಯರ್ ಎಂ.ರಾಜೇಶ್ವರಿ, ಸದಸ್ಯರುಗಳಾದ ಪ್ರಭಂಜನಕುಮಾರ್, ಪಿ.ಗಾದೆಪ್ಪ, ಕುಬೇರಾ, ಮಿಂಚು ಸೀನಾ, ನೂರ್ ಮೊಹಮ್ಮದ್, ಪದ್ಮರೋಜ, ಟಿ.ನಾಜು, ಕಾಂಗ್ರೆಸ್ ಮುಖಂಡರಾದ ಅಯಾಜ್ ಅಹ್ಮದ್, ಸುಬ್ಬರಾಯುಡು, ಚಂಪಾ ಚವ್ಹಾಣ್ ಸೇರಿದಂತೆ ಹಲವರು ಹಾಜರಿದ್ದರು.


*ವಿವಿಧ ಕಾಮಗಾರಿಗಳಿಗೆ ಚಾಲನೆ:* ಮಂಗಳವಾರ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡುಗಳಲ್ಲಿ ಏರ್ಪಡಿಸಿದ್ದ ಭೂಮಿ ಪೂಜೆ ಕಾರ್ಯಕ್ರಮಗಳಲ್ಲಿ ಶಾಸಕ ನಾರಾ ಭರತ್ ರೆಡ್ಡಿಯವರು ಭಾಗವಹಿಸಿದರು.


ವಾರ್ಡ್ ಸಂಖ್ಯೆ 3ರ ವ್ಯಾಪ್ತಿಯ ಬಂಡಿಮೋಟ್ ಮಸೀದಿ ಹಿಂಭಾಗ ಅಂದಾಜು ವೆಚ್ಚ 63 ಲಕ್ಷ 50 ಸಾವಿರ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.


ತದನಂತರ ವಾರ್ಡ್ ಸಂಖ್ಯೆ 13ರ ಮಿಲ್ಲರ್ ಪೇಟೆಯಲ್ಲಿ ಅಂದಾಜು ವೆಚ್ಚ 50 ಲಕ್ಷ ರೂ.ಗಳ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.


ಅದೇ ರೀತಿ ವಾರ್ಡ್ ಸಂಖ್ಯೆ 17ರ ವಿಶಾಲ ನಗರ - ಹನುಮಾನ ನಗರದಲ್ಲಿ ಅಂದಾಜು ವೆಚ್ಚ 31 ಲಕ್ಷ 83 ಸಾವಿರ ರೂ.ಗಳ ವೆಚ್ಚದಲ್ಲಿ ಕಾಮಗಾರಿಗೆ, ಅಂಜಿನಪ್ಪ ನಗರ ಹಾಗೂ ಬಿ.ಗೋನಾಳ್ ಗ್ರಾಮದ ಅಂಗನವಾಡಿ ನಿರ್ಮಾಣ ಕಾಮಗಾರಿಗಳಿಗೆ (ಅನುಕ್ರಮವಾಗಿ ಅಂದಾಜು 40 ಲಕ್ಷ ರೂ.ಗಳು, 20 ಲಕ್ಷ ರೂ.ಗಳ ವೆಚ್ಚ) ಚಾಲನೆ ನೀಡಲಾಯಿತು.


ಈ ಸಂದರ್ಭ ಪಾಲಿಕೆಯ ಸದಸ್ಯರುಗಳಾದ ಎಂ.ಪ್ರಭಂಜನಕುಮಾರ್, ಕಾಂಗ್ರೆಸ್ ಮುಖಂಡರಾದ ಹೊನ್ನಪ್ಪ, ಹಗರಿ ಗೋವಿಂದ ಸೇರಿದಂತೆ ಹಲವರು ಹಾಜರಿದ್ದರು.

 ಮಾಜಿ ಮೇಯರ್, ಪಾಲಿಕೆಯ ಸದಸ್ಯ ಸಿ.ಇಬ್ರಾಹಿಂಬಾಬು, ಕಾಂಗ್ರೆಸ್ಸಿನ ಕಣೇಕಲ್ ಮೆಹಬೂಬಸಾಬ, ಥಿಯೇಟರ್ ಶಿವು, ರಾಕಿ, ರಘು ಮೊದಲಾದವರು ಹಾಜರಿದ್ದರು






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ