Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಫ್ ಆರ್ ಎಸ್ ಜಾರಿಯಿಂದ ನಕಲಿ ಫಲಾನುಭವಿಗಳ ತಡೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್





ಶೂನ್ಯ ವೇಳೆಯಲ್ಲಿ ಎಫ್ ಆರ್ ಎಸ್ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಜೆಡಿಎಸ್ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಸಚಿವರ ಉತ್ತರ


ವಿಧಾನಸೌಧ : ಫೇಸ್ ರೆಕಗ್ನೀಷನ್ ಸಿಸ್ಟಮ್ (ಎಫ್ ಆರ್ ಎಸ್) ಜಾರಿಯಿಂದ ನಕಲಿ ಫಲಾನುಭವಿಗಳ ತಡೆಗೆ ಸಹಕಾರಿಯಾಗಲಿದೆ ಎಂದು ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಸೋಮವಾರದಿಂದ ಆರಂಭಗೊಂಡ ಮಳೆಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯರಾದ ಗೋವಿಂದರಾಜು ಕೇಳಿದ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಗರ್ಭಿಣಿ, ಬಾಣಂತಿಯರು, ಕಿಶೋರಿಯರು ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಕೆ ಸೇರಿದಂತೆ ಆರೋಗ್ಯದ ಮೇಲೆ ನಿಗಾ ವಹಿಸಲು ಫಲಾನುಭವಿಗಳಿಗೆ ಫೇಸ್ ಕ್ಯಾಪ್ಚರ್ ಮೂಲಕ ಸರಬರಾಜು ಮಾಡುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ  ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕದಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರಲು ಇದು ಸಹಕಾರಿಯಾಗಲಿದೆ ಎಂದರು.


ಈ ತಂತ್ರಾಂಶದ  ಜಾರಿಗೊಳಿಸಿದ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯ, ಪ್ರಸ್ತುತ ಶೇಕಡ 94.2 ರಷ್ಟು ಫಲಾನುಭವಿಗಳನ್ನು ಎಫ್‌ ಆರ್‌ಎಸ್‌ ಮೂಲಕ ನೋಂದಣಿ ಮಾಡುವ ಮೂಲಕ ಇಡೀ ದೇಶಕ್ಕೆ 2ನೇ ಸ್ಥಾನದಲ್ಲಿದೆ ಎಂದು ಸಚಿವರು ಉತ್ತರಿಸಿದರು.


ರಾಜ್ಯದ ಅಂಗನವಾಡಿ ಕೇಂದ್ರಗಳಿಂದ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೂರೈಕೆಯಾಗುತ್ತಿರುವ ಆಹಾರ ವ್ಯವಸ್ಥೆಗೆ ಮತ್ತಷ್ಟು ಪಾರದರ್ಶಕತೆ ತರಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.


ಎಫ್‌ಆರ್‌ಎಸ್‌ ಜಾರಿಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಕೆಲಸದ ಒತ್ತಡ ಜಾಸ್ತಿಯಾಗುತ್ತಿದೆ. ಹೀಗಾಗಿ ಅವರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಉತ್ತರಿಸಿದರು.


ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ವರ್ಷ ಹೊಸ ಮೊಬೈಲ್‌ ಕೊಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಂಟಿ ನಿರ್ದೇಶನದ ಮೇಲೆ ಎಫ್‌ಆರ್‌ಎಸ್‌ ಮೂಲಕ ಫಲಾನುಭವಿಗಳನ್ನು ಗುರುತಿಸಬೇಕು. ಎಫ್‌ಆರ್‌ಎಸ್‌ ಮೂಲಕ ಮೊಬೈಲ್‌ ಸಂಖ್ಯೆಯನ್ನು ಆಧಾರ್‌ ಸಂಖ್ಯೆಗೆ ಜೋಡಣೆ ಮಾಡದಿದ್ದರೆ, ಕೇಂದ್ರ ಸರ್ಕಾರದಿಂದ  ಐಸಿಡಿಎಸ್ ಕಾರ್ಯಕ್ರಮಗಳಿಗೆ ಆಹಾರ ಪದಾರ್ಥಗಳು ಬರುವುದು ನಿಲ್ಲುತ್ತದೆ. ಹೀಗಾಗಿ ಫಲಾನುಭವಿಗಳಿಗೆ ಪಾರದರ್ಶಕವಾಗಿ ಆಹಾರ ತಲುಪಿಸುವ ಸಲುವಾಗಿ ಎಫ್‌ಆರ್‌ಎಸ್‌ ಜಾರಿ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಫ್‌ಆರ್‌ಎಸ್‌ ತಂತ್ರಜ್ಞಾನವನ್ನು ಮತ್ತಷ್ಟು ಸರಳಿಕರಿಸಲಾಗುವುದು ಎಂದರು.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ