Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಸಮಾವೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ಇದೇ ತಿಂಗಳ 27 ಅಥವಾ 28 ರಂದು ಆಯೋಜನೆ

ಖರ್ಗೆ, ಸಿಎಂ, ಡಿಸಿಎಂ ಸೇರಿದಂತೆ ರಾಷ್ಟ್ರೀಯ ನಾಯಕರು ಭಾಗಿ


 *ಬೆಳಗಾವಿ:* ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕೋಡಿ ಹಾಗೂ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏಪ್ರಿಲ್ 27 ಅಥವಾ 28 ರಂದು ಬೃಹತ್ ಪ್ರತಿಭಟನೆ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಮಂಗಳವಾರ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಅಗತ್ಯ ವಸ್ತುಗಳ ಬೆಲೆ ಏರಿಕೆ, ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಕೇಂದ್ರದ ನೀತಿ ವಿರುದ್ಧ ಪ್ರತಿಭಟಿಸಲಾಗುವುದು ಎಂದರು.


ಕೇಂದ್ರ ಸರ್ಕಾರ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ದರವನ್ನು ಏರಿಕೆ ಮಾಡಿ, ಬಡವರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು.


ಬಿಜೆಪಿ ನಾಯಕರು ತಮ್ಮ ಒಳಬೇಗುದಿಯನ್ನು ಮರೆಯಾಚಿಸುವ ಸಲುವಾಗಿ ರಾಜ್ಯ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳು ಹುಟ್ಟಿಕೊಂಡಿದ್ದೇ ಬೆಲೆ ಏರಿಕೆಯ ಕಾರಣದಿಂದ, ಗ್ಯಾರಂಟಿ ಯೋಜನೆಗಳಿಂದ ಬೆಲೆ ಏರಿಕೆಯಾಗುತ್ತಿದೆ ಎನ್ನುತ್ತಿರುವುದು ಶುದ್ಧ ಸುಳ್ಳು. ಬಿಜೆಪಿ ನಾಯಕರ ನಡುವಿನ ಆಂತರಿಕ ಕಚ್ಚಾಟವನ್ನು ಮರೆಮಾಚಲು ಜನರ ದಾರಿ ತಪ್ಪಿಸುವ ಸಲುವಾಗಿ ಜನಾಕ್ರೋಶ ಯಾತ್ರೆ ಮಾಡಲಾಗುತ್ತಿದೆ ಎಂದು ಸಚಿವರು ಆರೋಪಿಸಿದರು.


* *ತನಿಖೆ ಹೆಸರಿನಲ್ಲಿ ರಾಷ್ಟ್ರೀಯ ನಾಯಕರಿಗೆ ಕಿರುಕುಳ*

ಕಾಂಗ್ರೆಸ್ ನಾಯಕರ ಧ್ವನಿಯನ್ನು ದಮನ ಮಾಡುವ ಉದ್ದೇಶದಿಂದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಕ್ಷದ ಮುಖಂಡರ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ. ಇದರ ಬಗ್ಗೆ ಸತ್ಯಾಸತ್ಯತೆಯನ್ನು ಎಲ್ಲರೂ ಪರಿಶೀಲನೆ ಮಾಡಬೇಕು. ಬಿಜೆಪಿಯವರು ನ್ಯಾಷನಲ್ ಹೆರಾಲ್ಡ್ ಆಸ್ತಿ 5 ಸಾವಿರ ಕೋಟಿ ಇದೆ ಅಂತಾರೆ. ಆದರೆ ಐಟಿಯವರೇ 359 ಕೋಟಿ ಅಂತಾ ಹೇಳುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


ಸುಳ್ಳುಗಳನ್ನು ಸತ್ಯ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಯಾಕೆ ತರಲಾಯಿತು ಅನ್ನೋದನ್ನ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಜನರ ದಾರಿ ತಪ್ಪಿಸುವುದೇ ಬಿಜೆಪಿಯವರ ಕೆಲಸ. ಜನ ಸಾಮಾನ್ಯರ ಬದಲಿಗೆ ಕೇಂದ್ರ ಸರ್ಕಾರ ಅಂದಾನಿ, ಅಂಬಾನಿಯವರಿಗಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಆರೋಪಿಸಿದರು.


* *ರಾಷ್ಟ್ರೀಯ ನಾಯಕರು ಪ್ರತಿಭಟನೆಯಲ್ಲಿ ಭಾಗಿ*

ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಏಐಸಿಸಿ ಕಾರ್ಯದರ್ಶಿಗಳಾದ ರಣದೀಪ್ ಸುರ್ಜೆವಾಲಾ, ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ರಾಷ್ಟ್ರೀಯ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.


ನಗರದ ಸಿಪಿಎಡ್ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ, ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.


ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರ ಸಚಿವರಾದ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ