ಬಳ್ಳಾರಿ,01..ನಗರದ ಡಾ.ರಾಜ್ ಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ಮೇ 3ರಂದು ಸಂಜೆ 6 ಗಂಟೆಗೆ ವಿಜಯಪುರ-ಗದಗ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ
ಶ್ರೀ ನಿರ್ಭಯಾನಂದ ಸರಸ್ವತಿ ಅವರಿಂದ ಸ್ವಾಮಿ ವಿವೇಕಾನಂದರ ಜೀವನ ಸಂದೇಶ ಕುರಿತು ವಿಶೇಷ ಉಪನ್ಯಾಸ "ವಿವೇಕಲೀಲಾಮೃತ" ಜರುಗಲಿದೆ. ಉಪನ್ಯಾಸ ಶುರು ಮುನ್ನ ರಾಜ್ಯೋತ್ಸವ ಪ್ರಶಸ್ತಿಪುರಸ್ಕೃತ ಹಿರಿಯ ರಂಗಭೂಮಿ ಕಲಾವಿದೆ ವೀಣಾ ಆದವಾನಿ ಅವರು ಹೇಮರೆಡ್ಡಿ ಮಲ್ಲಮ್ಮ ನಾಟಕದ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸುವರು. ಮುದ್ದಟನೂರು ಹೆಚ್.ತಿಪ್ಪೇಸ್ವಾಮಿ
ಹಾರ್ಮೋನಿಯಂ ಹಾಗೂ ಯೋಗೀಶ್ ಸಂಗನಕಲ್ಲು ತಬಲಾ ಸಾಥ್ ನೀಡುವರು.
ಬಳ್ಳಾರಿ ಭಾಗದ ಭಕ್ತರ ಆಪೇಕ್ಷೆ ಮೇರೆಗೆ ಸ್ವಾಮಿ ನಿರ್ಭಯಾನಂದ ಶ್ರೀಗಳು ಪ್ರತಿ ತಿಂಗಳ ಮೊದಲ ಭಾನುವಾರ ನಗರಕ್ಕೆ ಆಗಮಿಸಿ ವಿಶೇಷ ಉಪನ್ಯಾಸ ನೀಡುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿವೇಕಮಂಟಪದ ಸಂಯೋಜಕ ಪ್ರಭುದೇವ ಕಪ್ಪಗಲ್ಲು ಅವರು ಮನವಿ ಮಾಡಿದ್ದಾರೆ.