Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ" ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ


ಸವದತ್ತಿ,ಜೂ,೧೫ : ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಹಾಗೂ ಕಾರ್ಮಿಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕಃ ೧೩-೦೬-೨೦೨೬ ರಂದು ಶ್ರೀ. ಕುಮಾರೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ" ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಮ್.ಎಫ್.ಸಿ ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಶ್ರೀ. ದೇವದಾಸ ಎಚ್. ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮದ ಉದ್ಫಾಟನೆ ನೆರವೇರಿಸಿದರು ನಂತರ ಮಾತನಾಡಿದ ಅವರು ಮಕ್ಕಳ ರಕ್ಷಣೆಗೆ ಎಲ್ಲರೂ ಮುಂದಾಗಬೇಕು, ಅವರ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕು, ಅವರನ್ನು ಬಡತನದಿಂದ ಹೊರತರುವ ಯತ್ನ ಮಾಡಬೇಕು. ಅಂದಾಗ ಮಾತ್ರ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಗೆ ಭವಿಷ್ಯದಲ್ಲಿ ಉತ್ತಮ ಬೆಲೆ ಬರುತ್ತದೆ ಎಂದರು. ನಂತರ ನೆರದಿರುವ ವಿದ್ಯಾರ್ಥಿಗಳಿಗೆ ಒಂದು ಚಲನಚಿತ್ರ ನೋಡಿದ ನಂತರ ಕಣ್ಣು ಮುಚ್ಚಿ ಅದರಲ್ಲಿರುವ ಕೆಲವು ಸನ್ನಿವೇಶಗಳನ್ನು ನೆನಪಿಸಿಕೊಳ್ಳುವ ನಿವೆಲ್ಲ ಅದೇ ರೀತಿಯಲ್ಲಿ ಕಾಲೇಜಿನಲ್ಲಿ ಶಿಕ್ಷಕರು ಪಾಠ ಮಾಡಿದ ಬಗ್ಗೆಯು ಮನೆಗೆ ಹೋದ ನಂತರ ನೆನಪಿಸಿಕೊಳ್ಳಬೇಕು ಪುಸ್ತಕಗಳಲ್ಲಿ ಪಾಠಗಳನ್ನು ಓದಿಕೊಳ್ಳುವ ಜೊತೆಗೆ ರಾತ್ರಿ ಮಲಗುವ ಮುಂಚೆ ಹಾಗೂ ಬೆಳಿಗ್ಗೆ ಎದ್ದ ತಕ್ಷಣ ಅವೆಲ್ಲ ಪಾಠಗಳನ್ನು ಪುನಃ ಪುನಃ ನೆನಪಿಸಿಕೊಳ್ಳಬೇಕು ಎಂದು ಹೇಳಿದರು. ನಿಮ್ಮ ಶಾಲಾ ಕಾಲೇಜುಗಳ ಜೀವನವು ಅಮೂಲ್ಯವಾಗಿರುವುರಿಂದ ಪ್ರೀತಿ-ಪ್ರೇಮ ಹಾಗೂ ಇನ್ನಿತರ ಅನಾವಶ್ಯಕ ವಿಷಯಗಳ ಕಡೆಗೆ ಗಮನ ಹರಿಸದೇ ಕೇವನ ಪಠ್ಯದ ಕಡೆಗೆ ಗಮನ ಕೊಡಬೇಕು ನೀವು ಪುಸ್ತಗಳನ್ನು ಎಷ್ಟು ಪ್ರೀತಿಸುತ್ತಿರೋ ಮುಂದೆ ನಿಮ್ಮ ಜೀವನ ಚೆನ್ನಾಗಿರಲು ಸಾಧ್ಯವಾಗುತ್ತದೆ ಮತ್ತು ವಿದ್ಯಾರ್ಥಿಗಳು ಏಕಾಗೃತೆ ಬೆಳೆಸಿಕೊಳ್ಳಬೇಕು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಬೇಕು ಎಂದು ಹೇಳಿದರು.
ಉಪನ್ಯಾಸ ಭಾಷಣ ಮಾಡಿದ ನ್ಯಾಯವಾದಿಗಳಾದ ಸಾವಿತ್ರಿ ಶಿಬಾರಗಟ್ಟಿ ರವರು ಮಾತನಾಡಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪ್ರತಿ ವರ್ಷ ಜೂನ್ ೧೨ ರಂದು ಆಚರಿಸಲಾಗುತ್ತದೆ. ಬಾಲ ಕಾರ್ಮಿಕ ಪದ್ಧತಿಯ ವಿರುದ್ಧ ಜಾಗೃತಿ ಮೂಡಿಸುವುದು ಮತ್ತು ಈ ಪಿಡುಗನ್ನು ಸಂಪೂರ್ಣವಾಗಿ ತೊಡೆದು ಹಾಕುವ ಉದ್ದೇಶದಿಂದ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆ (Iಐಔ) ೨೦೦೨ರಲ್ಲಿ ಈ ದಿನವನ್ನು ಮೊದಲಿಗೆ ಆಚರಣೆಗೆ ತಂದಿತು. ಮಗುವಿನ ವಯಸ್ಸು, ದೈಹಿಕ ಅಥವಾ ಮಾನಸಿಕ ಸಾಮರ್ಥ್ಯಕ್ಕೆ ಸೂಕ್ತವಲ್ಲದ ಯಾವುದೇ ಕೆಲಸವನ್ನು ಬಾಲ ಕಾರ್ಮಿಕ ಪದ್ಧತಿ ಎಂದು ವ್ಯಾಖ್ಯಾನಿಸಲಾಗುತ್ತದೆ ಮತ್ತು ಅದರ ದೂರಗಾಮಿ ಪರಿಣಾಮಗಳು ಅವರ ಬೆಳವಣಿಗೆ ಮತ್ತು ಭವಿಷ್ಯದ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತವೆ ಎಂದು ಹೇಳಿದರು.
ಅದ್ಯಕ್ಷತೆ ಭಾಷಣ ಮಾಡಿದ ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ ರವರು ಮಾತನಾಡಿ ಬಾಲ ಕಾರ್ಮಿಕ ಪದ್ದತಿಗೆ ಬಡತನವೇ ಏಕೈಕ ದೊಡ್ಡ ಕಾರಣ ಎಂದರೆ ತಪ್ಪಾಗುವುದಿಲ್ಲ. ಬಡ ಮಕ್ಕಳು ಚಿಕ್ಕಂದಿನಿಂದಲೇ ಕುಟುಂಬಗಳನ್ನು ಆರ್ಥಿಕವಾಗಿ ಪೊರೆಯಲು ಅನಿವಾರ್ಯವಾಗಿ ಕೆಲಸ ಮಾಡಬೇಕಾಗುತ್ತದೆ. ದೇಶದ ಲಕ್ಷಾಂತರ ಮಕ್ಕಳಿಗೆ ಶಾಲೆಯ ಮೆಟ್ಟಿಲು ಹತ್ತುವ ಭಾಗ್ಯವೂ ಇಲ್ಲ. ಇದ್ದರೂ ಉತ್ತಮ ಗುಣಮಟ್ಟದ ಶಿಕ್ಷಣ ಇಲ್ಲ. ಹೀಗಿದ್ದಾಗ ಅವರು ಶಾಲೆಗೆ ಹೋಗುವ ಬದಲು ಕಾರ್ಖಾನೆಗೋ, ಸಣ್ಣಪುಟ್ಟ ಹೋಟೆಲ್ ಕಡೆಗೋ ಮುಖ ಮಾಡುತ್ತಾರೆ. ಸರ್ಕಾರ ಕಾಲ ಕಾಲಕ್ಕೆ ಬಾಲ ಕಾರ್ಮಿಕತೆಯ ವಿರುದ್ಧ ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯಿದೆ ಮತ್ತು ಶಿಕ್ಷಣ ಹಕ್ಕು ಕಾಯಿದೆ ರೂಪಿಸಿದೆ ಎಂದು ಹೇಳಿದರು.
ಕಾರ್ಮಿಕ ನೀಕ್ಷಕರಾದ ಮಹೇಶ ಭಾಗೋಜಿ ರವರು ನೆರದಿರುವ ಎಲ್ಲರಿಗೂ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಚೇರಮನ್ನರಾದ ಸದಾಶಿವ ಕೌಜಲಗಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಜೆ.ಬಿ. ಮುನವಳ್ಳಿ, ಕಾಲೇಜಿನ ಪ್ರಾಚಾರ್ಯರಾದ ಕೆ.ಬಿ.ಕೋರಿ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಅಮೃ ಸಾಣಿಕೊಪ್ಪ ಇತರರು ಉಪಸ್ಥಿತರಿದ್ದರು. ಶಿಕ್ಷಕರಾದ ಎಸ್.ಕೆ.ಕಂಬಾಳಿಮಠ ಸ್ವಾಗತಿಸಿದರು, ಎಸ್.ಎಸ್.ಬೆಟಗೇರಿ ನಿರೂಪಿಸಿದರು. ಕೆ.ಎಮ್.ಹುಣಶಿಕಟ್ಟಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ