Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಪದವೀಧರರ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ


ಬಳ್ಳಾರಿ,ಜೂ.13: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಕಾನೂನು ತರಬೇತಿ ಭತ್ಯೆಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಜು.10 ಕೊನೆಯ ದಿನ.
*ನಿಬಂಧನೆಗಳು:*
ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯವರಾಗಿರಬೇಕು. ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ)ಗೆ ಸೇರಿದವರಾಗಿರಬೇಕು. ಶೇಕಡವಾರು ಪ್ರವರ್ಗ-1 ರಲ್ಲಿ 2 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಉಳಿದ ವರ್ಗಗಳಲ್ಲಿ ನಿಯಮಾನುಸಾರ 8 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಯು ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು. ತರಬೇತಿಗೆ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕಕ್ಕೆ ಹಿಂದೆ 2 ವರ್ಷಗಳೊಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನು ತರಬೇತಿಯು 4 ವರ್ಷಗಳ ಅವಧಿಯಾಗಿದ್ದು, ಮಾಸಿಕ 4 ಸಾವಿರ ರೂ.ಗಳ ತರಬೇತಿ ಭತ್ಯೆ ನೀಡಲಾಗುವುದು.
ಕಾನೂನು ತರಬೇತಿಗೆ ಬಳ್ಳಾರಿ ಜಿಲ್ಲೆಯಿಂದ 10 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವರ್ಗ-1 ರಲ್ಲಿ ಶೇ.15 ರಷ್ಟು 2 ಅಭ್ಯರ್ಥಿಗಳು, ಪ್ರವರ್ಗ-2(ಎ) ಶೇ.53 ರಷ್ಟು 5 ಅಭ್ಯರ್ಥಿಗಳು, ಪ್ರವರ್ಗ-3(ಎ) ಶೇ.15ರಷ್ಟು 1 ಅಭ್ಯರ್ಥಿ, ಪ್ರವರ್ಗ-3(ಬಿ) ಶೇ.17 ರಷ್ಟು 2 ಅಭ್ಯರ್ಥಿಗಳು ಸೇರಿ ಒಟ್ಟು 10 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2ಎ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ (ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕಕ್ಕೆ) ಇರುತ್ತದೆ. ತರಬೇತಿಯ ಅವಧಿಯ ಮಧ್ಯಭಾಗದಲ್ಲಿ ಅಭ್ಯರ್ಥಿಯು ತರಬೇತಿಗೆ ಗೈರು ಹಾಜರಾದಲ್ಲಿ ಪಡೆಯಲಾಗಿರುವ ತರಬೇತಿ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಪಾವತಿಸಬೇಕಾಗುವುದು.
ವಾರ್ಷಿಕ ಆದಾಯ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ.3.50 ಲಕ್ಷ, ಪ್ರವರ್ಗ-2ಎ, 3ಎ ಮತ್ತು 3ಬಿ ರೂ.2.50 ಲಕ್ಷಗಳ ವಾರ್ಷಿಕ ಆದಾಯದ ಮಿತಿಯನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಸಮಿತಿಯು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ಸರ್ಕಾರಿ ವಕೀಲರು ಅಥವಾ ಕನಿಷ್ಟ 15 ವರ್ಷಗಳ ವೃತ್ತಿಯಲ್ಲಿ ಅನುಭವ ಹೊಂದಿರುವ ವಕೀಲರ ಅಧೀನದಲ್ಲಿ ತರಬೇತಿ ಪಡೆಯುವುದು.
ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
*ಬೇಕಾದ ದಾಖಲೆ:*
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣೆ ಪ್ರಮಾಣ ಪತ್ರ ಮತ್ತು ಪದವಿ ಹಾಗೂ ಕಾನೂನು ಪದವಿಗಳಲ್ಲಿ ಪಡೆದ ಅಂಕಪಟ್ಟಿ ಪ್ರಮಾಣ ಪತ್ರದ ದೃಢೀಕರಣ ಪ್ರತಿಗಳನ್ನು ಲಗತ್ತಿಸುವುದು.
ಹೆಚ್ಚಿನ ವಿವರಗಳಿಗಾಗಿ  www.ballari.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ