ಮಹಾಲಿಂಗಪುರ: ದಲಿತ ಸಮುದಾಯದ ಪ್ರಭಾವಿ ನಾಯಕರಾದ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರಿಗೆ ನೂತನ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ನೀಡಬೇಕೆಂದು ತೇರದಾಳ್ ಮತಕ್ಷೇತ್ರದ ಅಲ್ಪಸಂಖ್ಯಾತರ ಯುವ ಮುಖಂಡ ಮದಾರ ಮುಲ್ಲಾ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಆರ್ ಬಿ ತಿಮ್ಮಾಪುರ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ. ಶೋಷಿತರ, ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ಸೂಕ್ತ ಪ್ರಾತಿನಿತ್ಯ ನೀಡುವ ಅಗತ್ಯವಿದೆ. ರಾಜ್ಯದಲ್ಲಿ ದಲಿತ ಸಮುದಾಯದ ಸರ್ವೋತೋಮುಖ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಆರ್ ಬಿ ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.
ನೂತನ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಹೈಕಮಾಂಡ್ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಅವರಿಗೆ ಡಿಸಿಎಂ ಹುದ್ದೆಯನ್ನು ಅವಕಾಶ ಮಾಡಿಕೊಡಬೇಕೆಂದು. ತೇರದಾಳ ಮತಕ್ಷೇತ್ರದ ಅಲ್ಪಸಂಖ್ಯಾತರ ಯುವ ಮುಖಂಡರಾದ ಮದಾರ ಮುಲ್ಲಾ ಆಗ್ರಹಿಸಿದ್ದಾರೆ.
೩೦ mಟಠಿ ೦೩ ಪೋಟೊ
