Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರಿ ಸಂಘಗಳು ಜನಪರವಾಗಿ ಕೆಲಸ ಮಾಡಲಿ - ಕೊಟ್ಟೂರು ಶ್ರೀಗಳು

ಬಳ್ಳಾರಿ,ಫೆ,10- ಸಹಕಾರವು ಶರಣ ಸಂಸ್ಕೃತಿಯ ಜೀವಾಳವೇ ಆಗಿದೆ. ಹೊಸಪೇಟೆಯ ಈ ಬ್ಯಾಂಕ್ ಸ್ಥಾಪನೆ ಅದರ ಮುಂದುವರೆದ ಭಾಗವೇ ಆಗಿದೆ. ಸಮಾಜದ ವಿಸ್ಮೃತಿಗೆ ಒಳಗಾದ ಶ್ರೀ ಶರಣ ಸಕ್ಕರೆ ಕರಡೀಶ ಅವರ ಹೆಸರು ಈ ಸಹಕಾರಿ ಸಂಘಕ್ಕೆ ಇಟ್ಟಿದ್ದು ಸಮಯೋಚಿತ ಆಗಿದೆ ಎಂದು ಕೊಟ್ಟೂರು ಶ್ರೀಗಳು ಅಭಿಪ್ರಾಯ ಪಟ್ಟರು.

ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ನ ಹೊಸಪೇಟೆ ಶಾಖೆಯ ಉದ್ಘಾಟನೆ ಮಾಡಿ ಮಾತನಾಡಿದ, ಅವರು ಬಡವರು, ಮಧ್ಯಮ ವರ್ಗದ ಜನರಿಗೆ ಈ ಸಂಘ ಅನುಕೂಲ ಮಾಡಲಿ ಎಂದು ಹಾರೈಸಿದರು. ಬಂದ ಲಾಭದ ಸ್ವಲ್ಪ ಭಾಗವನ್ನು ಸಮಾಜಕ್ಕೂ ಹಂಚಬೇಕು ಎಂದು ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯರಾದ  ಎಸ್. ವಿ. ಸಂಕನೂರ ಅವರು ಮಾತನಾಡಿ "ಸಹಕಾರಿ ಸಂಘ ಬೆಳೆಯುತ್ತಿರುವುದು ತುಂಬ ಸಂತೋಷದ ಸಂಗತಿ. ಪಾರದರ್ಶಕ ಆಡಳಿತ ನೀಡಿದರೆ ಖಂಡಿತ ಸಹಕಾರ ಕ್ಷೇತ್ರ ಬೆಳವಣಿಗೆ ಆಗುವುದು ಖಚಿತ" ಎಂದು ಹೇಳಿದರು.

ಸಂಡೂರಿನ ಪ್ರಭುದೇವರ ವಿರಕ್ತಮಠದ ಸ್ವಾಮೀಜಿಗಳಾದ ಪ್ರಭುಸ್ವಾಮಿಗಳು ಆಶೀರ್ವಚನ ನೀಡಿದರು.

ಇನ್ನೋರ್ವ ಅತಿಥಿಗಳಾದ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಅಧ್ಯಕ್ಷರಾದ  ಜೀ.ನಂಜನಗೌಡರು ಮಾತನಾಡಿ " ಸಹಕಾರಿ ಸಂಸ್ಥೆ ನಿಜಕ್ಕೂ ಆರ್ಥಿಕವಾಗಿ ಸುಭದ್ರವಾಗಿದೆ. ಠೇವಣಿ ಸಂಗ್ರಹಣೆಗೆ ಯಾವ ಕೊರತೆಯೂ ಇಲ್ಲ. ಸಾಲ ಮಂಜೂರಾತಿಯಲ್ಲಿ ಸರಳ ನಿಯಮಗಳನ್ನು ಅಳವಡಿಸಿದ್ದೇವೆ. ಎಂದು ಹೇಳಿದರು.

ಜೀ. ನೀಲಕಂಠಪ್ಪ, ಬಳ್ಳಾರಿ ಶ್ರೇಷ್ಠ ಸಹಕಾರಿ ರತ್ನ ಪ್ರಶಸ್ತಿ ಪಡೆದಿದ್ದಾರೆ. ಅವರಿಗೆ ಸನ್ಮಾನ ಮಾಡಿದರು. ವಿವಿಧ ಗಣ್ಯರಿಗೆ ಸನ್ಮಾನ ಮಾಡಲಾಯಿತು.

ಶ್ರೀಮತಿ ಎನ್ ಪುಷ್ಪಾ ಮಲ್ಲಿಕಾರ್ಜುನ ಅವರು ಪ್ರಾರ್ಥನೆ ನೆರವೇರಿಸಿದರು. ಪ್ರಾಸ್ತಾವಿಕ ನುಡಿಯನ್ನು ಬ್ಯಾಂಕಿನ ಆಡಳಿತ ಮಂಡಳಿಯ ಅಧ್ಯಕ್ಷರಾದ  ಕಲ್ಗುಡಿ ಮಂಜುನಾಥ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಡಾ. ಮೃತ್ಯುಂಜಯ ರುಮಾಲೆ ಅವರು ಬರೆದ "ಶರಣ ಸಕ್ಕರೆ ಕರಡೆಪ್ಪನವರು" ಚಿತ್ತರಗಿ ಪೂಜ್ಯರಿಂದ ಬಿಡುಗಡೆ ಗೊಳಿಸಲಾಯಿತು.

ಷಾ ಭವರಲಾಲ್ ನಾಹರ್ ಬಿ.ಇಡಿ ಕಾಲೇಜಿನ ಅಧ್ಯಕ್ಷ  ಗುಡೇಕೋಟೆ ನಾಗರಾಜ್ ಅವರು ವಂದನಾರ್ಪಣೆ ಮಾಡಿದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ