Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮಗಾಗಿ ಇರುವ ಪರಿಸರವನ್ನು ನಾವೇ ರಕ್ಷಿಸೋಣ: ರೋಹಿತಾಕ್ಷ

ಬಳ್ಳಾರಿ,ಜೂ.೦7: ಇಂದಿನ ಮಾನವನ ಸ್ವಾರ್ಥಭರಿತ ಜೀವನಶೈಲಿಯಿಂದಾಗಿ ಪರಿಸರವು ಸಂಪೂರ್ಣವಾಗಿ ಕಲುಷಿತಗೊಳ್ಳುತ್ತಿದೆ. ಹೀಗಾಗಿ ಪ್ರಸ್ತುತ  ಕಲುಷಿತ ಗಾಳಿ, ನೀರು ಹಾಗೂ ಆಹಾರ ಸೇವನೆಯಿಂದಾಗಿ ಅನೇಕ ರೋಗ ರುಜಿನಗಳು ನಮ್ಮನ್ನೆಲ್ಲ ಕಾಡುತ್ತಿದೆ ಎಂದು ಬಳ್ಳಾರಿ ಜಿಲ್ಲಾ ನಿರ್ದೇಶಕ ರೋಹಿತಾಕ್ಷ


ನÀಗರದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆಯೋಜಿಸಿದ್ದ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ ಸಹಯೋಗದಲ್ಲಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಪರಿಸರವು ಸ್ವಚ್ಛವಾಗಿದ್ದರೆ ಮಾತ್ರ ನಾವುಗಳು ಶುದ್ಧ ಗಾಳಿಯನ್ನು ಉಸಿರಾಡಲು ಸಾಧ್ಯವಾಗುತ್ತದೆ. ಆದರೆ ಈ ಪರಿಸರವು ಹಾಳಾಗಲು ಪ್ರಾರಂಭಿಸಿದಾಗ ನಾವುಗಳು ಆರೋಗ್ಯಕ್ಕೆ ಸಂಬAಧಿತ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಹೀಗಾಗಿ ನಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸುತ್ತೇವೆಯೋ ಅದೇ ರೀತಿ ಪರಿಸರದ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.


ಬಳ್ಳಾರಿ ಕೆನಾರ ಬ್ಯಾಂಕ್ ಎಲ್‌ಡಿಎಂ ಗೀರಿಶ್ ಕುಲಕರ್ಣಿ ಮಾತನಾಡಿ, ವಿಶ್ವ ಪರಿಸರ ಆರೋಗ್ಯ ದಿನವನ್ನು ೨೦೧೧ರಲ್ಲಿ ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ಎನ್ವಿರಾನ್ಮೆಂಟಲ್ ಹೆಲ್ತ್ ಕೌನ್ಸಿಲ್ ಪ್ರಾರಂಭಿಸಿತು. ಪರಿಸರಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಸಮಾಜಕ್ಕೆ ಮನದಟ್ಟು ಮಾಡಬೇಕೆನ್ನುವುದು ಈ ವಿಶ್ವ ಪರಿಸರ ಸಂರಕ್ಷಣೆಯ ದಿನಾಚರಣೆ ಕಾರ್ಯಕ್ರಮವನ್ನು ಇಡಿ ರಾಜ್ಯಾದ್ಯಂತ ಇಂದು ಆಚರಣೆ ಮಾಡಲಾಗುತ್ತದಿ ಎಂದು ತಿಳಿಸಿದರು.


ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಮ್.ಆನಂದ ಮಾತನಾಡಿ, ಒಬ್ಬ ವ್ಯಕ್ತಿಯು ತನ್ನದೇ ಯಾದ ರೀತಿಯಲ್ಲಿ ಪರಿಸರವನ್ನು ರಕ್ಷಿಸುವುದು ಹೇಗೆ, ಪರಿಸರ ಸಂರಕ್ಷಣೆಯನ್ನು ಉತ್ತೇಜಿಸಲು ಯಾವ ರೀತಿಯ ಜೀವನಶೈಲಿಯಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಪರಿಸರ ಹಾನಿಯನ್ನು ಹೇಗೆ ತಡೆಯಬಹುದು ಎಂದು ತಿಳಿಸಿದರು.



ಮಾನವನ ದುರಾಸೆಯಿಂದ ಪರಿಸರವನ್ನು ನಾಶಮಾಡಿ ಐಷಾರಾಮಿ ಜೀವನಕ್ಕೆ ಬೇಕಾದ ಸೌಲಭ್ಯಗಳನ್ನು ನಿರ್ಮಿಸಿಕೊಂಡಿದ್ದಾನೆ ಇದರಿಂದ ಪ್ರತಿವರ್ಷ ಬಿಸಿಲಿನ ತಾಪ ಹೆಚ್ಚಾಗುತ್ತಿದೆ ಹಾಗಾಗಿ

ಪ್ರಸ್ತುತ ಭೂಮಿಯ ಮೇಲೆ ಉಳಿದಿರುವ ಅರಣ್ಯವನ್ನು ಸಂರಕ್ಷಿಸುವ ಹೊಣೆ ನಮ್ಮದೇ ಆಗಿದೆ. ಮನೆ ಮನೆಗೊಂದು ಗಿಡ ನೆಟ್ಟು ವೃಕ್ಷ ಸಂಪತ್ತನ್ನು ಹೆಚ್ಚಿಸಬೇಕು. ಇದರಿಂದ ಬೇಸಿಗೆ ದಿನಗಳಲ್ಲಿ ತಂಪಾದ ವಾತಾವರಣವನ್ನು ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದು ಆಗಿದೆ ಎಂದು ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ರೂಪಶ್ರೀ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.


ಪ್ರತಿ ವರ್ಷ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜೂನ್ ೫ ರಂದು ವಿಶ್ವ ಪರಿಸರ ದಿ

ನಾಚರಣೆ ಅಂಗವಾಗಿ ಇಡೀ ರಾಜ್ಯದ್ಯಂತ ಸ್ವ-ಸಹಾಯ ಸಂಘಗಳ ಮೂಲಕ ಪರಿಸರ ಸಂರಕ್ಷಣೆಯ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಲಾಗುತ್ತದೆ ಅಷ್ಟೇ ಅಲ್ಲದೆ ವಿಶೇಷವಾಗಿ ಪೂಜ್ಯ ಡಾ/ ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಪ್ರತಿ ತಾಲೂಕಿನಲ್ಲೂ ಆಸಕ್ತಿ ಇರೂ ರೈತರಿಗೆ ಹಾಗೂ ಕೆರೆ ಬದುವಿನ ಮೇಲೆ ದೇವಸ್ಥಾನಗಳ ಆವರಣದಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಪರಿಸರ ಅರಣ್ಯೀಕರಣ ಕಾರ್ಯಕ್ರಮವನ್ನು ಕೂಡ ಆಯೋಜಿಸಿ ಪರಿಸರದ ಸಂರಕ್ಷಣೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆಸಲಾಗುತ್ತಿದೆ ಎಂದು ಬಳ್ಳಾರಿ ಯೋಜನಾ ಕಛೇರಿಯ ಕ್ಷೇತ್ರ ಯೋಜನಾಧಿಕಾರಿ ಬಸವರಾಜ ಕೆ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು


ಈ ಕಾರ್ಯಕ್ರಮದಲ್ಲಿ ರಾಜೇಸಾಬ್: ನಿರ್ದೇಶಕರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಸಹಾಯ ತರಬೇತಿ ಕೇಂದ್ರ ಬಳ್ಳಾರಿ, ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಸಹಾಯ ತರಬೇತಿ ಕೇಂದ್ರದ ಸಿಬ್ಬಂದಿಗಳು

ವಿಧ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ