Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನರ ಸಮಸ್ಯೆಗಳಿಗೆ ಸ್ಪಂದಿಸೋಣ: ಸಂಸದ ಈ.ತುಕಾರಾಮ್

ಬಳ್ಳಾರಿ,ಮೇ 06ಸಂವಿಧಾನ ಆಶಯಗಳಡಿ ನೇಮಕಗೊಂಡಿರುವ ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಳಜಿ ಹೊಂದಬೇಕು ಎಂದು ಸಂಸದ ಈ.ತುಕಾರಾಮ್ ಅವರು ಹೇಳಿದರು.

ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಜನರು ಇದ್ದಲ್ಲಿಗೆ ಸರ್ಕಾರದ ಸೇವೆಗಳು ತಲುಪಬೇಕು ಎನ್ನುವ ಉದ್ದೇಶ ಹೊಂದಲಾಗಿದ್ದು, ಉತ್ತಮ ಆಡಳಿತ ನೀಡಲು ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.

ಸಂವಿಧಾನದ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸರ್ವಾಂಗೀಣ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯನ್ನು ತಾಲ್ಲೂಕು ಮಟ್ಟದಲ್ಲಿ ಏರ್ಪಡಿಸಲು ಯೋಜಿಸಲಾಗಿದೆ ಎಂದರು.

ಸಂಡೂರು ತಹಶೀಲ್ದಾರ್ ಅನಿಲ್ ಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಜಿಲ್ಲಾಡಳಿತ ಮತ್ತು ಸಂಡೂರು ತಾಲ್ಲೂಕು ಆಡಳಿತ ವತಿಯಿಂದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದರು.

ಸಾರ್ವಜನಿಕರ ದೂರು, ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಮತ್ತು ಉಳಿದವುಗಳನ್ನು ಕಡಿಮೆ ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದರು.
ಸಾರ್ವಜನಿಕರಿAದ ಅಹವಾಲು ಸ್ವೀಕರಿಸಲು ಸಂಡೂರು ತಾಲ್ಲೂಕು ಕಚೇರಿ ಆವರಣದಲ್ಲಿ 20 ಕ್ಕೂ ಹೆಚ್ಚು ಕೌಂಟರ್ ಗಳನ್ನು ತೆರೆಯಲಾಗಿತ್ತು.

ಇದೇ ಸಂದರ್ಭದಲ್ಲಿ ಸಂಸದರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಈ ವೇಳೆ ಸಂಡೂರು ಪುರಸಭೆಯ ಅಧ್ಯಕ್ಷ ಸಿರಾಜ್ ಹುಸೇನ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ