Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಂಥಾಲಯಗಳು ಜ್ಞಾನದ ಕಣಜ: ಡಾ.ಮಾನಸ


ಬಳ್ಳಾರಿ,ಜೂ.04:
ಗ್ರಂಥಾಲಯಗಳು ಅರಿವಿನ ದೇಗುಲಗಳಾಗಿದ್ದು ಅವು ಜ್ಞಾನದ ಕಣಜಗಳಾಗಿವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಮೈಸೂರು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರ, ಬಳ್ಳಾರಿ ಜಿಲ್ಲಾ ಜಾಗೃತಿ ಸಮಿತಿ,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ಮಂಗಳವಾರ ಕಪ್ಪಗಲ್ ರಸ್ತೆಯ ಪ್ರಣವ ಸ್ವರೂಪ ನಿಲಯದಲ್ಲಿ ‘ಮನೆಗೊಂದು ಗ್ರಂಥಾಲಯ ಅನುಷ್ಠಾನ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಭಕ್ತಿಯ ಸಂಕೇತವಾಗಿ ಮನೆಯಲ್ಲಿ ಪೂಜಾಗೃಹ ಇರುವಂತೆ, ಜ್ಞಾನದ ಸಂಕೇತವಾಗಿ ಚಿಕ್ಕದೊಂದು ಗ್ರಂಥಾಲಯ ಪ್ರತಿ ಮನೆಯಲ್ಲಿ ಅತ್ಯಗತ್ಯವಾಗಿ ಇರಬೇಕು. ಬದುಕನ್ನು ಸುಂದರವಾಗಿ ಕಲಿಸುವ ಶಕ್ತಿ ಪುಸ್ತಕಗಳಿಗಿದೆ. ಹಾಗಾಗಿ ಪುಸ್ತಕಗಳನ್ನು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಹಸ್ತದೊಳಗಿರುವ ಮೊಬೈಲ್ ಬಿಡಿಸಿ ಮಕ್ಕಳ ಮಸ್ತಕಗಳಿಗೆ ಪುಸ್ತಕ ನೀಡುವಂತಾಗಬೇಕು. ಮನೆ-ಮನೆಯಲಿ ಪುಸ್ತಕ ಪ್ರೀತಿ ಬೆಳಗುವ ಮೂಲಕ ಮಕ್ಕಳಿಗೆ ಬದುಕುವ ಕಲೆಯನ್ನು ಕಲಿಸಬೇಕು ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ ಅವರು ಮಾತನಾಡಿ, ಪುಸ್ತಕಗಳು ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಹಕಾರಿಯಾಗಿದ್ದು, ಮೊಬೈಲ್ ಬಳಕೆ ಕಡಿಮೆ ಮಾಡಿ ಪುಸ್ತಕಗಳನ್ನು ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಈ ವೇಳೆ ಮನೆಗೊಂದು ಗ್ರಂಥಾಲಯ ಅನುಷ್ಠಾನದ ಕರಪತ್ರ ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ, ಪ್ರಾಧ್ಯಾಪಕ ತಿಪ್ಪೇರುದ್ರ ಸಂಡೂರು, ಬಳ್ಳಾರಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಾದ ಚಾಂದ್ ಪಾಷ, ಮಸೂತಿ ನಾಗರಾಜ, ಚಾಂದ್ ಬಾಷ ತೆಕ್ಕಲಕೋಟೆ, ಸಂಡೂರು ಕಸಾಪ ಅಧ್ಯಕ್ಷ ನಾಗನಗೌಡ, ಬಳ್ಳಾರಿ ತಾಲ್ಲೂಕು ಕಸಾಪ ಅಧ್ಯಕ್ಷ ನಾಗಿರೆಡ್ಡಿ, ರುದ್ರಮೂರ್ತಿ ಸ್ವಾಮಿ ಸೇರಿದಂತೆ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ