Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ್ಞಾನದ ಬೆಳಕು ಭಗವಾನ್ ಬುದ್ಧ: ಲಿಡ್‌ಕರ್ ಅಧ್ಯಕ್ಷ ಮುಂಡರಗಿ ನಾಗರಾಜ

ಬಳ್ಳಾರಿ,ಮೇ ೧೩.ಭಗವಾನ್ ಬುದ್ಧರ ಜ್ಞಾನ ಇಡೀ ಜಗತ್ತಿಗೆ ಪಸರಿಸಿದೆ. ಅವರ ಶಾಂತಿ, ಸಹನೆ, ಸಹಬಾಳ್ವೆ ಸಂದೇಶ ನಮಗೆಲ್ಲರಿಗೂ ಸ್ಫೂರ್ತಿ. ಜ್ಞಾನದ ಬೆಳಕು ಜಗತ್ತಿಗೆ ನೀಡಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ ಅವರ ತತ್ವಾದರ್ಶ ನಾವೆಲ್ಲರೂ ಪಾಲಿಸೋಣ ಎಂದು ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದಲ್ಲಿ ಸೋಮವಾರ ಏರ್ಪಡಿಸಿದ್ದ ಭಗವಾನ್ ಬುದ್ಧರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಜ್ಞಾನದಿಂದ ಜ್ಞಾನದ ಕಡೆ, ಸಮಾಜದಲ್ಲಿದ್ದ ತಾರತಮ್ಯ ನೀತಿಯ ವಿರುದ್ಧ ಹೋರಾಡಿ ಹೊಸ ವ್ಯವಸ್ಥೆಯ ಸೈದ್ಧಾಂತಿಕ ನೆಲೆಗಟ್ಟನ್ನು ಭದ್ರಗೊಳಿಸಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರು ಸಹ ಬೌಧ್ದ ಧರ್ಮ ಸ್ವೀಕರಿಸುವ ಮೂಲಕ ಬೌಧ್ದ ಧರ್ಮವನ್ನು ಬೆಂಬಲಿಸಿದರು ಎಂದು ತಿಳಿಸಿದರು.

ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮಹಾನ್ ದಾರ್ಶನಿಕ. ಸಿದ್ಧಾರ್ಥ ಎನ್ನುವ ರಾಜವಂಶದ ಕುಡಿ ಸಕಲ ವೈಭೋಗವನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ. ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ಭೋಧಿಸುತ್ತಾನೆ. ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿ ವ? ಬುದ್ಧ ಪೂರ್ಣಿಮೆಯನ್ನು ಆಚರಿಸಲಾಗುತ್ತದೆ ಎಂದರು.

ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯ ಸ್ಮರಿಸುವ ಉದ್ದೇಶದಿಂದ ಸರ್ಕಾರದಿಂದ ಪ್ರಥಮವಾಗಿ ಬುದ್ಧ ಜಯಂತಿ ಆಚರಿಸಲಾಗುತ್ತಿದೆ. ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಮಹತ್ವದ ದಿನವಾಗಿದೆ ಎಂದ ಅವರು, ಬುದ್ಧ ಹೇಳಿದ ಬೌದ್ಧ ಧರ್ಮದ ಮೂರು ಸಂದೇಶವನ್ನು ಇದೇ ವೇಳೆ ಸ್ಮರಿಸಿದರು.
ಸಹಾಯಕ ಆಯುಕ್ತರಾದ ಪಿ.ಪ್ರಮೋದ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವ ಭೋದಿಸಿದ ಬುದ್ಧರ ತತ್ವ ಬೋಧನೆ ಅರಿತರೆ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿ ನೆಲೆಯೂರಲಿದೆ. ಬುದ್ಧನ ಜ್ಞಾನ ಮಾರ್ಗ ಅರಿತರೆ ಅದು ಮನು?ರ ಮನಸ್ಸಿನ ಶುದ್ಧಿ ಮತ್ತು ಇದರಿಂದ ದುಃಖ ನಿವಾರಣೆ ಹೊಂದಲು ಸಾಧ್ಯವಾಗಲಿದೆ ಎಂದರು.
ವಿಜಯನಗರ ಜಿಲ್ಲೆಯ ಹಂಪಿ ವಿದ್ಯಾರಣ್ಯ ಕನ್ನಡ ವಿಶ್ವವಿದ್ಯಾಲಯದ ಸಂಸ್ಕೃತಿ ಚಿಂತಕರಾದ ಡಾ.ವೆಂಕಟಗಿರಿ ದಳವಾಯಿ ಅವರು ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬಳ್ಳಾರಿಯ ಜಡೇಶ್ ಎಮ್ಮಿಗನೂರು ತಂಡದಿಂದ ಬುದ್ಧ ಬಸವ ಅಂಬೇಡ್ಕರ್ ಗೀತೆ ಗಾಯನ ಪ್ರಸ್ತುತ ಪಡಿಸಿದರು.

ಇದಕ್ಕೂ ಮುನ್ನ ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪು? ನಮನ ಸಲ್ಲಿಸುವ ಮೂಲಕ ಗಣ್ಯರು ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಭಾರತೀಯ ಬೌದ್ಧ ಮಹಸಭಾ ಜಿಲ್ಲಾ ಘಟಕ ಅಧ್ಯಕ್ಷ ಕಮಲರತ್ನ ಬಂತೇಜಿ, ಅಂಬೇಡ್ಕರ್ ಸಂಘದ ಜಿಲ್ಲಾಧ್ಯಕ್ಷ ಅನಂತ ಕುಮಾರ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

*ಸಂಭ್ರಮದ ಮೆರವಣಿಗೆ:*-ಭಗವಾನ್ ಬುದ್ಧರ ಜಯಂತ್ಯೋತ್ಸವದ ಅಂಗವಾಗಿ ನಗರದಲ್ಲಿ ಸಂಭ್ರಮದ ಮೆರವಣಿಗೆ ನಡೆಯಿತು. ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಭಗವಾನ್ ಬುದ್ಧ ಅವರ ಭಾವಚಿತ್ರಕ್ಕೆ ಪು? ನಮನ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನ ಸೆಳೆದವು.

ಮೆರವಣಿಗೆಯು ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ರೈಲ್ವೆ ಸ್ಟೇ?ನ್ ರಸ್ತೆ, ಹೆಚ್.ಆರ್.ಗವಿಯಪ್ಪ ವೃತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣಕ್ಕೆ ತಲುಪಿ ಸಂಪನ್ನಗೊಂಡಿತು.

ಫೋಟೋ೧೩ಬಿಎಲ್‌ಆರ್೦೫---ಉದ್ದೇಶಿಸಿ ಮಾತನಾಡುತ್ತಿರುವ ಚಿತ್ರ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ