Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಲಿಂಕ್ ಡಾಕ್ಯೂಮೆಂಟ್, ಅನಿರ್ಭಂದಿತ ವಾರ್ಷಿಕ ಕ್ರೀಯಾ ಯೋಜನೆ ಕುರಿತು ಸಭೆ

ಬಾಗಲಕೋಟೆ, ಜೂನ್ ೨೪ : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಅವರ ಅಧ್ಯಕ್ಷತೆಯಲ್ಲಿ ಲಿಂಗ್ ಡಾಕ್ಯೂಮೆಂಟ್ ಹಾಗೂ ಅನಿರ್ಭಂಧಿತ ಅನುದಾನದ ವಾರ್ಷಿಕ ಕ್ರೀಯಾ ಯೋಜನೆ ಕುರಿತು ಪರಿಶೀಲನಾ ಸಭೆ ಜರುಗಿತು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಪ್ರಸಕ್ತ ಸಾಲಿನ ಲಿಂಕ್ ಡಾಕ್ಯೂಮೆಂಟ್ ತಯಾರಿಕೆ, ವಿವಿಧ ಇಲಾಖೆಗಳ ಅಭಿವೃದ್ದಿ ಕಾರ್ಯಕ್ರಮಗಳ ಸಮನ್ವಯ, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ದಿ ಹಾಗೂ ಜನಪರ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚೆ ನಡೆಸಲಾಯಿತು.
ಅನಿರ್ಭಂದಿತ ಅನುದಾನದಡಿ ಕೈಗೊಳ್ಳಬೇಕಾದ ಕಾಮಗಾರಿಗಳು, ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಅಭಿವೃದ್ದಿ ಕಾರ್ಯಕ್ರಮಗಳನ್ನು ಆದ್ಯತೆ ಮೇರೆಗೆ ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಇಓ ಸೂಚಿಸಿದರು. ಕ್ರೀಯಾ ಯೋಜನೆ ಅನುಮೋದನೆಗೊಂಡ ಮೇಲೆ ಮೊದಲ ಹಂತವಾಗಿ ನಿಗದಿಪಡಿಸಿದ ಅನುದಾನದಲ್ಲಿ ಪೇಮೆಂಟ್ ಆಗಬೇಕು. ವಿವಿಧ ಇಲಾಖೆಗಳ ಸ್ಟೇಷನರಿ ಖರೀದಿಗೆ ಒಂದು ಅವಧಿಗೆ ಮಾತ್ರ ಅನುಮೋದನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿಗೆ ಅನುಮೋದನೆಗೊಂಡ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆಗಸ್ಟ ರೊಳಗಾಗಿ ಟೆಂಡರ ಪ್ರಕ್ರಿಯೆ ಮುಗಿಸಿಕೊಂಡು ಕಾಮಗಾರಿ ಪ್ರಾರಂಭವಾಗಬೇಕು. ದುರಸ್ಥಿ ಕೆಲಸಗಳಿಗೆ ಪಡೆದ ಅನುದಾನದಲ್ಲಿ ಸರಿಯಾಗ ಕೆಲಸ ಆಗಿರುವ ಬಗ್ಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಾಮಗಾರಿ ಗುಣಮಟ್ಟದಿಂದ ಕೂಡಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಈ ವರ್ಷ ಕೈಗೊಂಡ ದುರಸ್ಥಿ ಕೆಲಸ ಮುಂದಿನ ವರ್ಷ ತೆಗೆದುಕೊಂಡಿರುವುದು ಕಂಡುಬಂದಲ್ಲಿ ನಿರ್ದಾಕ್ಷಣ್ಯವಾಗಿ ಕ್ರಮಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಔಷಧಿ, ಶಾಲೆಗಳಿಗೆ ಡೆಸ್ಕ ಹಾಗೂ ಕ್ರೀಡಾ ಸಾಮಗ್ರಿಗಳ ಖರೀದಿ ಕಾರ್ಯ ಅಕ್ಟೋಬರ ಅಥವಾ ಡಿಸೆಂಬರ ಮಾಹೆಯಲ್ಲಿ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ನಿರ್ವಹಣೆಗೆ ತಮ್ಮ ಹಂತದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಸೂಚನೆ ನೀಡಿದರು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ನೂರಕ್ಕೆ ನೂರರಷ್ಟು ನನ್ನಿಂದ ಎಲ್ಲ ರೀತಿಯ ಸಹಕಾರ ನಿಮಗೆ ದೊರೆಯುತ್ತದೆ. ಕೆಲಸ ಆಗಿಲ್ಲ ಎಂದರೆ ನಾನು ಕೇಳಲ್ಲ. ನಿಮ್ಮ ಮೇಲೆ ಸೂಕ್ರ ವಹಿಸಲಾಗುತ್ತದೆ ಎಂದರು. 
ಕಚೇರಿಗೆ ಬರುವ ಜನ ಸಾಮಾನ್ಯರಿಗೆ ಇಲಾಖೆಯಿಂದ ದೊರೆಯಬಹುದಾದ ಸೌಲಭ್ಯಗಳನ್ನು ತಲುಪಿಸುವ ಕೆಲಸವಾಗಬೇಕು. ಕಚೇರಿಯಿಂದ ಹೊರಗೆ ಹೋಗುವಾಗ ಸಂತೋಷದಿಂದ ಹೋಗುಂತಾಗಬೇಕು ಈ ನಿಟ್ಟಿನಲ್ಲಿ ಕೆಲಸ ಮಾಡಲು ತಿಳಿಸಿದು. ವಸತಿ ನಿಲಯಗಳಿಗೆ ಸಂಬಂಧಿಸಿದಂತೆ ಮೂಲಶೌಕರ್ಯ ಒದಗಿಸುವ ಕೆಲಸವಾಗಬೇಕು. ಅನಿರೀಕ್ಷಿತವಾಗಿ ಭೇಟಿ ನೀಡಿದ ಸಮಯದಲ್ಲಿ ಅವ್ಯವಸ್ಥೆ ಕಂಡುಬಂದಲ್ಲಿ ಸೂಕ್ತ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.
ಅನುದಾನ ಸದ್ಬಳಕೆ, ಯೋಜನೆಗಳ ಸಕಾಲಿಕ ಅನುಷ್ಠಾನ ಹಾಗೂ ಗುರಿ ಸಾಧನೆಗೆ ಇಲಾಖೆಗಳ ನಡುವೆ ಸಮನ್ವಯ ಅಗತ್ಯವಾಗಿದೆ. ಅಭಿವೃದ್ದಿ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಜಿ.ಪಂ ಉಪ ಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ