Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೂತಾನ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರ್ಚನಾ ಅಥಣಿ ಭಾಗಿ



ಅಥಣಿ,ಮೇ,೨೭ : ಮೇ ೨೮ ರಂದು ಭೂತಾನ್ ದೇಶದ ರಾಜಧಾನಿ ಥಿಂಪುನ ಪೆಜೊಮ್  ಸಭಾಂಗಣದಲ್ಲಿ  ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ವತಿಯಿಂದ ಹಮ್ಮಿಕೊಂಡಿರುವ ೫೪ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಫೆಸ್ಟ್ ಕಾರ್ಯಕ್ರಮದಲ್ಲಿ ಹಲವಾರು ದಿಗ್ಗಜರೊಂದಿಗೆ ಅಥಣಿ ತಾಲೂಕಿನ ರಡ್ಡೇರಹಟ್ಟಿ ಸರಕಾರಿ ಫೌಢ ಶಾಲೆಯ ಸಹ ಶಿಕ್ಷಕಿ ಡಾ.ಅರ್ಚನಾ ಅಥಣಿ ಅವರು ಉದ್ಘಾಟನಾ ಸಮಾರಂಭದಲ್ಲಿ ಅತಿಥಿಗಳಾಗಿ  ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲಿದ್ದಾರೆ.
 ಭೂತಾನ್‌ನ ಪ್ರತಿಷ್ಠಿತ ಇಂಟರನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಇಂಡಿಯಾ ಹಾಗೂ ಫ್ರೆಂಡ್ಸ್ ಶಿಫ್ ಕ್ಲಬ್ ಭೂತಾನ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಭೂತಾನಿನ ಸಂಸತ್ ಸದಸ್ಯ ಎಚ್.ಇ. ದಶೋ ಉಗೇನ್ ಲಾಮಾ ಉದ್ಘಾಟಿಸಲಿದ್ದಾರೆ. ಭಾರತ ದೇಶದಿಂದ ಕರ್ನಾಟಕದ ಪ್ರತಿನಿಧಿಯಾಗಿ ಸಾಹಿತಿ ಡಾ.ಅರ್ಚನಾ ಅಥಣಿ ಸೇರಿದಂತೆ ಭಾರತದ ವಿವಿಧ ಭಾಗಗಳಿಂದ  ಅನೇಕರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
 ಸಾಹಿತಿ ಡಾ.ಅರ್ಚನಾ ಅಥಣಿಯವರು ಕನ್ನಡ ಸಾಹಿತ್ಯ ಸಂಸಕೃತಿ ಪ್ರಸಾರ ಮಾಡಲು ವಿದೇಶಗಳ ಕನ್ನಡ ಸಂಘಟನೆಗಳ ಜೊತೆಗೂಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾಲ್ಡೀವ್ಸ್, ದುಬೈ,ಒಮಾನ್, ಶ್ರೀಲಂಕಾ, ಇಂಡೋನೇಷ್ಯಾ, ಸಿಂಗಪೂರ,ಥೈಲ್ಯಾಂಡ್, ವಿಯೆಟ್ನಾಮ್, ಅಂಡಮಾನ್, ಲಕ್ಷದ್ವೀಪ ಸೇರಿದಂತೆ ಹಲವಾರು ದೇಶಗಳಲ್ಲಿ ಜರುಗಿರುವ ಅಂತಾರಾಷ್ಟ್ರೀಂಕನ್ನಡ ಸಂಸ್ಕೃತಿ ಉತ್ಸವಗಳಲ್ಲಿ  ಪಾಲ್ಗೊಂಡು ಕನ್ನಡ ನಾಡು,ನುಡಿ, ಭಾಷೆ, ಸಂಸ್ಕೃತಿಯ ಪರಂಪರೆಯನ್ನುಉಳಿಸಿ ಬೆಳೆಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ಪ್ರದಾನ, ಜರುಗಲಿದೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಂಡಿದ್ದಾರೆ.
 ಅಂತರಾಷ್ಟ್ರೀಯ ಸಮ್ಮೇಳನಗಳಲ್ಲಿ ಸಾಹಿತ್ಯ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ ಡಾ.ಅರ್ಚನಾ ಅಥಣಿ ಅವರು, ದೇಶ ವಿದೇಶಗಳಲ್ಲಿ ತಮ್ಮ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೇ, ತಮ್ಮ ಬರಹ, ಕವಿತೆಗಳ ಮೂಲಕ ಕನ್ನಡ ನಾಡಿನ ಮನೆಮಾತಾಗಿರುವುದು ಸಂತಸದ ಸಂಗತಿ.
 ಅವರು ಬೆಳಗಾವಿ ಜಿಲ್ಲೆಯಿಂದ ಏಕೈಕ ಕವಿಯತ್ರಿಯಾಗಿ ಆಯ್ಕೆಯಾಗಿದ್ದು ಜಿಲ್ಲೆಯಲ್ಲಿ  ಸಾಹಿತ್ಯಾಭಿಮಾನಿಗಳಲ್ಲಿ ಹರ್ಷವನ್ನುಂಟು ಮಾಡಿದೆ

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ