LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ: ಓಂ ಬಿರ್ಲಾ, ಕೆ ಸುರೇಶ್​ ನಾಮಪತ್ರ ಸಲ್ಲಿಕೆ

72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ(Om Birla) ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.

ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಸ್ವತಂತ್ರ ಭಾರತದಲ್ಲಿ 1952ರಲ್ಲಿ ಮೊಟ್ಟ ಮೊದಲ ಬಾರಿಗೆ ಜಿವಿ ಮಾಳವಂಕರ್ ಮತ್ತು ಶಂಕರ್ ಶಾಂತಾರಾಮ್ ನಡುವೆ ಸ್ಪೀಕರ್ ಹುದ್ದೆಗೆ ಚುನಾವಣೆ ಪೈಪೋಟಿ ಏರ್ಪಟ್ಟಿತ್ತು. ಆ ಬಳಿಕ 1976ರಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಸ್ಪೀಕರ್ ಚುನಾವಣೆ ನಡೆದಿತ್ತು. ಆ ಸಮಯದಲ್ಲಿ ಬಲಿಗ್ರಾಮ ಭಗತ್ ಹಾಗೂ ಜಗನ್ನಾಥ ರಾವ್ ನಡುವೆ ಚುನಾವಣೆ ನಡೆದಿತ್ತು.

ಈಗ 2024ರಲ್ಲಿ ಮೂರನೇ ಬಾರಿಗೆ ಚುನಾವಣೆ ನಡೆಯಲಿದೆ. ಇಲ್ಲಿಯವರೆಗೆ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ನೇಮಕ ಮಾಡಲಾಗಿತ್ತು.

 

ಈ ಹಿಂದೆ, ಸ್ಪೀಕರ್ ಚುನಾವಣೆಗೆ ಒಮ್ಮತ ಮೂಡಿಸಲು ಎನ್​ಡಿಎ ಪ್ರಯತ್ನ ಡನೆಸಿತು ಹಾಗೂ ಬಿಜೆಪಿಯ ಹಿರಿಯ ನಾಯಕರು ಇಂಡಿಯಾ ಬ್ಲಾಕ್​ನ ನಾಯಕರೊಂದಿಗೆ ಮಾತುಕತೆ ನಡೆಸಿದರು. ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಮತ್ತು ಸಂಶದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು ವಿವಿಧ ನಾಯಕರನ್ನು ಭೇಟಿ ಮಾಡಿ ಮಾತನಾಡಿದರು.

ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

ಕೆ ಸುರೇಶ್​ ನಾಮಪತ್ರಕ್ಕೆ ಇಂಡಿಯಾ ಬ್ಲಾಕ್​ನ ಮಿತ್ರಪಕ್ಷಗಳಾದ ಡಿಎಂಕೆ, ಶಿವಸೇನೆ, ಶರದ್​ಪವಾರ್​(ಎನ್​ಸಿಪಿ) ಹಾಗೂ ಇತರೆ ಪ್ರಮುಖ ಪಕ್ಷಗಳು ಸಹಿ ಹಾಕಿವೆ. ಮಮತಾ ಬ್ಯಾನರ್ಜಿ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಇದಕ್ಕೂ ಮುನ್ನ ಎನ್​ಡಿಎ ಪರವಾಗಿ ಓಂ ಬಿರ್ಲಾ ನಾಮಪತ್ರ ಸಲ್ಲಿಸಿದ್ದರು. ಆಡಳಿತ ಪಕ್ಷಕ್ಕೆ ಸಂಪೂರ್ಣ ಬಹುಮತವಿದೆ, ಎನ್​ಡಿಎಗೆ 292 ಸಂಸದರ ಬೆಂಬಲವಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್