Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ ದಾಖಲೆ ಪರಿಶೀಲನೆ

ಬಳ್ಳಾರಿ. ಮೇ 29 :  ಬಳ್ಳಾರಿ  ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ವಲಯ ಕಚೇರಿಗಳಲ್ಲಿ ಮತ್ತು ಕೇಂದ್ರ ಕಚೇರಿಗಳಲ್ಲಿ ಅಕ್ರಮವಾಗಿ ಬಿ-ಖಾತೆ ವಿತರಿಸುತ್ತಾರೆಂದು ಹಾಗೂ ಫಾರಂ-2 ವಿತರಣೆಯಲ್ಲಿ ಹಾಗೂ ಇತರೆ ಸರ್ಕಾರಿ ಸೇವೆಯನ್ನು ನೀಡಲು ವಿಳಂಬಮಾಡುತ್ತಾ ಅಕ್ರಮ ಎಸಗುತ್ತಿದ್ದಾರೆಂದು ಹಲವು ದೂರು/ಮಾಹಿತಿಗಳು ಬಂದಿದ್ದರಿಂದ ಗೌರವಾನ್ವಿತ ಲೋಕಾಯುಕ್ತ ನ್ಯಾಯಮೂರ್ತಿಗಳು, ಕರ್ನಾಟಕ ರಾಜ್ಯ ರವರು ಸ್ವಯಂ ಪ್ರೇರಿತವಾಗಿ ದೋರನು ದಾಖಲಿಸಿಕೊಂಡು, ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಅದರ ವಲಯ ಕಚೇರಿಗಳ ಶೋಧನೆಗಾಗಿ ಶೋಧನಾ ವಾರಂಟ್ ಅನ್ನು ಹೊರಡಿಸಿದ ಮೇರೆಗೆ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಅಧೀಕ್ಷಕರಾದ ಶ್ರೀ ವಾಸುದೇವರಾಮ.ಎನ್ ರವರ ನೇತೃತ್ವದಲ್ಲಿ ಬಳ್ಳಾರಿ ಲೋಕಾಯುಕ್ತ ಘಟಕದ ಪೊಲೀಸ್ ಸಿಬ್ಬಂದಿ ಹಾಗೂ ಪಂಚಸಾಕ್ಷಿದಾರರೊಂದಿಗೆ ಒಟ್ಟು 4 ತಂಡಗಳಾಗಿ ಈ ದಿನ ದಿನಾಂಕ:29/05/2026 ರಂದು ಬೆಳಿಗ್ಗೆ ಏಕಕಾಲಕ್ಕೆ ಬಳ್ಳಾರಿ ಮಹಾನಗರ ಪಾಲಿಕೆಯ ಮುಖ್ಯ ಕಚೇರಿ ಹಾಗೂ 3 ವಲಯ ಕಚೇರಿಗಳ ಮೇಲೆ ದಾಳಿ ಮಾಡಿ, ಶೋಧನೆಯನ್ನು ಮಾಡಿದ್ದು, ಶೋಧನೆ ಸಮಯದದಲ್ಲಿ ಹಲವು ಅಕ್ರಮಗಳು ಕಂಡುಬಂದಿದ್ದು, ಈ ಬಗ್ಗೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಶೋಧನಾ ಕಾರ್ಯವನ್ನು ಮುಕಾಯಗೊಳಿಸಿರುತ್ತದೆ.
ಈ ಶೋಧನಾ ಕಾರ್ಯದಲ್ಲಿ ಲೋಕಾಯುಕ್ತ ಡಿ.ವೈ.ಎಸ್.ಪಿ ರವರಾದ  ಎಸ್.ಎಸ್.ಬೀಳಗಿ, ಪೊಲೀಸ್,  ಸಚಿನ್ ಎಸ್ ಚಲವಾದಿ, ಪೊಲೀಸ್ ಇನ್ಸ್‌ಪೆಕ್ಟರ್ ರವರಾದ  ಗುರಣ್ಣ ಎಸ್ ಹೆಬ್ಬಾಳ್, ಶ್ರೀ ಸುರೇಶ್ ಎಂ ಬಾವಿಮನಿ,  ರಾಜೇಶ್ ಲಮಾಣಿ,  ಅಮರೇಶ ಹುಬ್ಬಳ್ಳಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ