LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮಹಾ ವಿಕಾಸ್ ಅಘಾಡಿ ಸೀಟು ಹಂಚಿಕೆ ಅಂತಿಮ; ಯಾರಯಾರಿಗೆ ಎಷ್ಟೆಷ್ಟು ಸ್ಥಾನಗಳು?

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ 260 ಸ್ಥಾನಗಳಿಗೆ ಮಹಾ ವಿಕಾಸ್ ಅಘಾಡಿ ಗುರುವಾರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದ್ದು, ಉಳಿದ ಕ್ಷೇತ್ರಗಳಲ್ಲಿ ಮಿತ್ರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಉತ್ತಮ ಹೋರಾಟದ ನಂತರ ಇದೀಗ ಎಂವಿಎ ಮಿತ್ರಪಕ್ಷಗಳು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಜ್ಜಾಗಿದ್ದು, ಕಾಂಗ್ರೆಸ್ 110 ರಿಂದ 115 ಸ್ಥಾನಗಳಲ್ಲಿ, ಶಿವಸೇನೆ(ಯುಬಿಟಿ) 83 ರಿಂದ 86 ಮತ್ತು ಎನ್‌ಸಿಪಿ(ಎಸ್‌ಪಿ) 72 ರಿಂದ 75 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮೈತ್ರಿಕೂಟದ ನಾಯಕರು ತಿಳಿಸಿದ್ದಾರೆ. ವಿವಾದಿತ 20 ರಿಂದ 25 ಸ್ಥಾನಗಳಲ್ಲೂ ಶೀಘ್ರದಲ್ಲೇ ಒಮ್ಮತಕ್ಕೆ ಬರಲಾಗುವುದು ಎಂದು ಅವರು ಹೇಳಿದ್ದಾರೆ.

"ಎಲ್ಲಾ ಮೈತ್ರಿ ಪಾಲುದಾರರು ಈ ನಿರ್ದಿಷ್ಟ ಸ್ಥಾನಗಳಿಗೆ ಬೇಡಿಕೆ ಇಡುತ್ತಿದ್ದಾರೆ. ಆದ್ದರಿಂದ ಒಪ್ಪಂದಕ್ಕೆ ಬರಲು ಸಮಯ ತೆಗೆದುಕೊಳ್ಳುತ್ತಿದೆ. ಗೆಲ್ಲುವ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲರನ್ನೂ ತೃಪ್ತಿಪಡಿಸುವ ಸೂತ್ರವನ್ನು ರೂಪಿಸುತ್ತಿದ್ದೇವೆ' ಎಂದು ಸೀಟು ಹಂಚಿಕೆ ಸಭೆಯಲ್ಲಿ ಪಾಲ್ಗೊಂಡಿದ್ದ ಎಂವಿಎ ಹಿರಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಸಭೆಯಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್, ವಿರೋಧ ಪಕ್ಷದ ನಾಯಕ ವಿಜಯ್ ವಡೆತ್ತಿವಾರ್, ಎನ್‌ಸಿಪಿ (ಎಸ್‌ಪಿ) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್, ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಸಚಿವ ಜಿತೇಂದ್ರ ಅಹ್ವಾದ್ ಮತ್ತು ಶಿವಸೇನೆಯ(ಯುಬಿಟಿ) ಸಂಜಯ್ ರಾವತ್ ಉಪಸ್ಥಿತರಿದ್ದರು.

"ಸಮಾಜವಾದಿ ಪಕ್ಷಕ್ಕೆ ಎರಡರಿಂದ ಮೂರು ಸ್ಥಾನಗಳನ್ನು ನೀಡಲಾಗುವುದು. ಎಡಪಕ್ಷಗಳಿಗೂ ಎರಡರಿಂದ ಮೂರು ಸ್ಥಾನಗಳು ಮತ್ತು ರೈತರು ಹಾಗೂ ಕಾರ್ಮಿಕರ ಪಕ್ಷಕ್ಕೆ ಎರಡರಿಂದ ಮೂರು ಸ್ಥಾನಗಳನ್ನು ವಿಧಾನಸಭಾ ಚುನಾವಣೆಯಲ್ಲಿ ನೀಡಲಾಗುವುದು" ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್