ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಎಲ್ಲ 288 ಕ್ಷೇತ್ರಗಳ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ರಾಜ್ಯಾದ್ಯಂತ ಮತದಾನ ಶುರುವಾಯಿತು.
Also read
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಸಿನಿಮಾ ನಟ ಅಕ್ಷಯ್ ಕುಮಾರ್ ತಮ್ಮ ತಮ್ಮ ಮತಗಟ್ಟೆಗೆ ಬಂದು ವೋಟ್ ಮಾಡಿದರು.
ನಾಗ್ಪುರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಂಬೈನಲ್ಲಿ ಕೇಂದ್ರ ಸಚಿವ ಪಿಯೂಶ್ ಗೋಯಲ್ ಮತ ಹಾಕಿದರು. ನಾಂದೇಡ್‌ನಲ್ಲಿ ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಸಂಸದ ಅಶೋಕ್ ಚವ್ವಾಣ್ ವೋಟ್ ಹಾಕಿದರೆ, ನಟರಾದ ರಿತೇಶ್ ದೇಶ್‌ಮುಖ್, ಜಾನ್ ಅಬ್ರಹಾಂ ಮತ್ತು ಬಾಬಾ ಸಿದ್ದಿಕಿ ಪುತ್ರ ಝೀಶನ್ ಸಿದ್ದಿಕಿ ಮುಂಬೈನಲ್ಲಿ ಮತದಾನ ಮಾಡಿದ್ದಾರೆ.