ಬಳ್ಳಾರಿ:28: ನಗರದ ರೂಪನಗುಡಿ ರಸ್ತೆಯಲ್ಲಿರುವ ವಾರ್ಡ್ ನಂಬರ್ 16ರ ವಾಲ್ಮೀಕಿ ಸಂಘದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಸಂಘದ ಆವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಮರ್ಪಿಸಲಾಯಿತು. ರಾಮಾಯಣ ಮಹಾಕಾವ್ಯವನ್ನು ರಚಿಸಿ ಜಗತ್ತಿಗೆ ಆದರ್ಶ ಮೌಲ್ಯಗಳನ್ನು ಬೋಧಿಸಿದ ವಾಲ್ಮೀಕಿ ಮಹರ್ಷಿಗಳ ಜೀವನ ಮತ್ತು ಸಂದೇಶಗಳು ಸಮಾಜಕ್ಕೆ ಸದಾ ಪ್ರೇರಣಾದಾಯಕ ಎಂದು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಎನ್. ವಿ. ಶಿವಣ್ಣ, ತಿಪ್ಪೇಸ್ವಾಮಿ, ಸಣ್ಣ ಹೊನ್ನೂರಪ್ಪ, ಮಲ್ಲಿ, ಅಂದ್ರಳ್ಳಿ ಗೋವಿಂದಪ್ಪ ಸೇರಿದಂತೆ ಸಂಘದ ಪ್ರಮುಖರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.