ಇಂಡಿ : ತಾಲೂಕಿನ ಹಿರೇಬೇವನೂರು ಗ್ರಾಮದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ವಿಶ್ವಭಾರತಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ಪದವಿಪೂರ್ವ ಮಹಾವಿದ್ಯಾಲಯ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ೧೫೭ನೇ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ೧೨೨ನೇ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪೂಜೆ ಹಾಗೂ ಪು?ರ್ಚನೆ ನೆರವೇರಿಸಲಾಯಿತು.
ನಂತರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪಿ.ಜಿ. ಕಲ್ಮನಿ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಸತ್ಯ, ಶಾಂತಿ ಹಾಗೂ ಅಹಿಂಸೆಯ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ಕೊಡುಗೆ ನೀಡಿದರು. ವಿದ್ಯಾರ್ಥಿಗಳು ಕೂಡ ತಮ್ಮ ಜೀವನದಲ್ಲಿ ಸತ್ಯ, ಶಾಂತಿ ಮತ್ತು ಅಹಿಂಸೆಯಂತಹ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿ.ಜಿ. ಕಲ್ಮನಿ ಗುರುಗಳು ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟದ ಹಾದಿಯನ್ನು ವಿವರಿಸಿದರು. ಅಲ್ಲದೆ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಸ್ವಾಭಿಮಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿ, ಅವರು ನೀಡಿದ ಜೈ ಜವಾನ್, ಜೈ ಕಿಸಾನ್ ಘೋ?ಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳು, ವಿಶ್ವಭಾರತಿ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಬರುವ ಕಾಲೇಜಿನ ಉಪನ್ಯಾಸಕರು, ಶಾಲೆಯ ಶಿಕ್ಷಕ-ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಆದರ್ಶಗಳನ್ನು ಸ್ಮರಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.