Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ


ಬಳ್ಳಾರಿ,01.: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.ಮಹಾತ್ಮ ಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”, “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”- ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ರೊಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು - 560001 ಅಥವಾ ಇ - ಮೇಲ್ ವಿಳಾಸ [email protected] ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ