Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಣೆಕುಂಟೆ-ವೇಣಿ ವೀರಾಪುರ ಹಾಗೂ ಹಲಕುಂದಿ-ಬೆಳಗಲ್ಲು ಎರಡು ಯೋಜನೆ ಆಯ್ಕೆ: ಮಹೇಶ್ ಕುಮಾರ್ 




ಗಣಿ ಪ್ರಭಾವಕ್ಕೊಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯಡಿ ಕಾರ್ಯಕಾರಿ ಸಮಿತಿ ರಚನೆ


ಬಳ್ಳಾರಿ,ಮೇ 22:ರಾಜ್ಯದಲ್ಲಿ ಗಣಿಗಾರಿಕೆ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯನ್ನು ನಾಲ್ಕು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅದರಲ್ಲಿ ಬಳ್ಳಾರಿ ಜಿಲ್ಲೆಯು ಕೂಡ ಒಂದಾಗಿದೆ. ಬಳ್ಳಾರಿ ತಾಲ್ಲೂಕಿನ ಜಾಣೆಕುಂಟೆ-ವೇಣಿ ವೀರಾಪುರ ಹಾಗೂ ಹಲಕುಂದಿ-ಬೆಳಗಲ್ಲು ಎರಡು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ ಎಂದು ಗ್ರಾಮ್ಸ್ ಸಂಸ್ಥೆಯ ಮಹೇಶ್ ಕುಮಾರ್ ಹೇಳಿದರು.

ಜಲಾನಯನ ಅಭಿವೃದ್ಧಿ ಇಲಾಖೆ, ಕೃಷಿ ಇಲಾಖೆ ಹಾಗೂ ಗ್ರಾಮ್ಸ್ ಸಂಸ್ಥೆ ಲಿಂಗಸಗೂರು ಇವರ ಸಹಯೋಗದಲ್ಲಿ ಬಳ್ಳಾರಿ ತಾಲೂಕಿನ ಹಲಕುಂದಿ-ಬೆಳಗಲ್ಲು ಉಪಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ಬರುವ ಹಲಕುಂದಿ ಗ್ರಾಮ ಪಂಚಾಯಿತಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಗಣಿ ಪ್ರಭಾವಕ್ಕೆ ಒಳಗಾದ ವಲಯಗಳಿಗೆ ಸಮಗ್ರ ಪರಿಸರ ಯೋಜನೆಯ ಕಾರ್ಯಕಾರಿ ಸಮಿತಿ ರಚನೆ ಸಭೆಯಲ್ಲಿ ಅವರು ಮಾತನಾಡಿದರು.

ಹಲಕುಂದಿ ಬೆಳಗಲ್ಲು ಉಪಜಲಾನಯನ ಯೋಜನಾ ವ್ಯಾಪ್ತಿಯಲ್ಲಿ ಸುಮಾರು 4,196 ಹೇಕ್ಟರ್ ಪ್ರದೇಶಗಳಲ್ಲಿ ಈ ಯೋಜನೆಯ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 6 ಹಳ್ಳಿಗಳು ಈ ಯೋಜನೆಯಡಿ ಬರುತ್ತವೆ ಎಂದು ತಿಳಿಸಿದರು. ಮುಖ್ಯವಾಗಿ ಈ ಯೋಜನೆಯಡಿ ಮಣ್ಣು ಮತ್ತು ನೀರಿನ ಸಂರಕ್ಷಣೆ ಮಾಡಲು ರೈತರ ಜಮೀನುಗಳಿಗೆ ಉಪಚಾರಗಳನ್ನು ಮಾಡುವುದು, ಮಳೆಯ ಹಸಿರುಯುತ ಭೂಮಿಯ ಉತ್ಪಾದಕತೆ ಸಾಮರ್ಥ್ಯ ಹೆಚ್ಚಿಸುವುದಾಗಿದೆ ಎಂದರು.

ಯೋಜನಾ ವ್ಯಾಪ್ತಿಯ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಪುನಶ್ಚೇತನಗೊಳಿಸುವುದು ಮತ್ತು ನೀರಿನ ಮಟ್ಟ ಸುಧಾರಣೆಯಾಗುವಂತೆ ಕ್ರಮವಹಿಸುವುದು. ಮಣ್ಣು ಮತ್ತು ನೀರಿನ ಸಂರಕ್ಷಣೆಯನ್ನು ಮಾಡುವುದರ ಮುಖಾಂತರ ಮಣ್ಣಿನ ಸವಕಳಿ ತಡೆಗಟ್ಟುವುದು. ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಕೃಷಿ ಚಟುವಟಿಕೆಗಳ ಬಳಕೆಗಾಗಿ ಮಳೆ ನೀರು ಕೊಯ್ಲು ರಚನೆಗಳ ಮೂಲಕ ನೀರನ್ನು ಸಂರಕ್ಷಣೆ ಮಾಡುವುದು. ಕೃಷಿ ಉತ್ಪಾದನೆಯನ್ನು ಸುಸ್ಥಿರಗೊಳಿಸುವುದು ಹಾಗೂ ರೈತ ಸಮುದಾಯದ ಜೀವನ ಮಟ್ಟವನ್ನು ಸುಧಾರಣೆ ಮಾಡುವುದಾಗಿದೆ ಎಂದು ತಿಳಿಸಿದರು.

ಮುಖ್ಯವಾಗಿ ಆದಾಯ ಉತ್ಪನ್ನ ಚಟುವಟಿಕೆಗಳನ್ನು ಸ್ವಸಹಾಯ ಗುಂಪುಗಳಿಗೆ ತರಬೇತಿ ನೀಡುವುದರ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು ಮತ್ತು ಆರ್ಥಿಕತೆ ಹೆಚ್ಚಿಸುವ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಕೃಷಿ ಅಧಿಕಾರಿ ಬಸವರಾಜ್ ಅವರು ಮಾತನಾಡಿ, ಜಲಾನಯನ ಸಮಿತಿಯು ಈ ಯೋಜನೆಯ ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯ ದಾಖಲೆ ನಿರ್ವಹಣೆ ಮಾಡಲು ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.

ಜಲಾನಯನ ಸಮಿತಿಯು ಗ್ರಾಮ ಪಂಚಾಯಿತಿಗೆ ಒಂದರAತೆ ಇದ್ದು, ಇದರಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರೇ ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ ಮತ್ತು ಯೋಜನಾ ವ್ಯಾಪ್ತಿಯ ಗ್ರಾಮಗಳಲ್ಲಿಯ ಇಬ್ಬರು ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರು ಈ ಸಮಿತಿಗೆ ಸದಸ್ಯರಾಗಿರುತ್ತಾರೆ. ಜೊತೆಗೆ ಸ್ವಸಹಾಯ ಗುಂಪಿನ ಮಹಿಳೆಯರು ಎರಡರಿಂದ ಮೂರು ಜನ ಪ್ರತಿನಿಧಿಗಳು ಮತ್ತು ಬಳಕೆದಾರ ಗುಂಪುಗಳಿAದ ಮೂರರಿಂದ ನಾಲ್ಕು ಜನ ಪ್ರತಿನಿಧಿಗಳು ಮತ್ತು ಸರಕಾರೇತರ ಸಂಸ್ಥೆ ಪ್ರತಿನಿಧಿಗಳು ಇಬ್ಬರು ಹಾಜರಾಗಿರುತ್ತಾರೆ ಹಾಗೂ ಸಂಬAಧಿಸಿದ ಕೃಷಿ ಅಧಿಕಾರಿಗಳು ಈ ಒಂದು ಸಮಿತಿಗೆ ಖಜಾಂಚಿ ಅಥವಾ ಕಾರ್ಯದರ್ಶಿಗಳಾಗಿರುತ್ತಾರೆ ಎಂದು ಅವರು ವಿವರಿಸಿದರು.

ಜೊತೆಗೆ ಪ್ರತಿ ವರ್ಷ ಕೂಡ ಶೇ.20ರಷ್ಟು ಕಾರ್ಯಕಾರಿ ಸಮಿತಿ ಸದಸ್ಯರು ಬದಲಾಗುತ್ತಿರುತ್ತಾರೆ. ಶೇ.18ರಷ್ಟು ಪ.ಜಾತಿ ಮತ್ತು ಪ.ಪಂಗಡದ ಸದಸ್ಯರು ಜಲಾನಯನ ಸಮಿತಿಯಲ್ಲಿ ಇರುತ್ತಾರೆ ಎಂದು ತಿಳಿಸಿದರು.

ಬಳಿಕ ಹಲಕುಂದಿ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರುಗಳು, ಕೃಷಿ ಇಲಾಖೆಯ ಕೃಷಿ ಅಧಿಕಾರಿಗಳು, ತಾಂತ್ರಿಕ ಅಧಿಕಾರಿಗಳು, ಅನುಷ್ಠಾನ ಸಂಸ್ಥೆಯ ಸಿಇಓ ಮತ್ತು ಉಪಜಲಾನಯನ ಯೋಜನೆಯ ತಂಡದ ನಾಯಕರು, ಐಜಿಎ ಪರಿಣಿತರು, ಜಲಾನಯನ ಸಹಾಯಕರು, ಸ್ವಸಹಾಯ ಗುಂಪಿನ ಮಹಿಳಾ ಸದಸ್ಯರು, ಬಳಕೆದಾರ ಗುಂಪಿನ ರೈತ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ