Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿ ಕಂಪನಿ ಕೆಲಸದ ಅವಧಿ ವಿಸ್ತರಣೆ ವಿರುದ್ಧ ಮೇಲ್ ಸಮರ

ಬೆಂಗಳೂರು, ಜುಲೈ 24: ಐಟಿ ಕಂಪನಿ ಉದ್ಯೋಗಿಗಳಿಂದ 14 ಗಂಟೆ ಕೆಲಸ ನಿರ್ವಹಿಸುವ ನೂತನ ಪ್ರಸ್ತಾವದ ವಿರುದ್ಧ ಕರ್ನಾಟಕದ ಐಟಿ ವೃತ್ತಿಪರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ ಸಚಿವರಿಗೆ ಸಾಮೂಹಿಕವಾಗಿ ಮೇಲ್ ಮಾಡುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಮೇಲ್ ಮೂಲಕವೇ ಸರ್ಕಾರದ ವಿರುದ್ಧ ಸಮರ ಸಾರಲು ಐಟಿ ವೃತ್ತಿಪರರು ತೀರ್ಮಾನ ಮಾಡಿದ್ದಾರೆ.

ಮೇಲ್ ಮೂಲಕ ಸಿಎಂ ಹಾಗೂ ಕಾರ್ಮಿಕ ಸಚಿವರಿಗೆ ತಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ತಿಳಿಸಲು ಐಟಿ ವೃತ್ತಿಪರರು ನಿರ್ಧಾರ ಕೈಗೊಂಡಿದ್ದಾರೆ. ಪ್ರಸ್ತಾವನೆ ಜಾರಿಯಾದರೆ ತಮ್ಮ ಕುಟುಂಬಗಳಿಗಾಗುವ ಸಮಸ್ಯೆ, ಅಷ್ಟೇ ಅಲ್ಲದೆ ತಮಗೆ ಆಗಬಹುದಾದ ಸಮಸ್ಯೆಗಳ ಬಗ್ಗೆ ಮೇಲ್ ಸಂದೇಶದಲ್ಲಿ ಉಲ್ಲೇಖಿಸಲು ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಇಎಸ್ ಎಂಪ್ಲಾಯೀಸ್ ಯೂನಿಯನ್ ಉದ್ಯೋಗಿಗಳಲ್ಲಿ ಮನವಿ ಮಾಡಿದೆ.

‘I oppose the Increase in Working Hours ಕೆಲಸದ ಅವಧಿ ವಿಸ್ತರಣೆಯನ್ನು ನಾನು ವಿರೋಧಿಸುತ್ತೇನೆ ಎಂಬ ಬರಹದ ಜತೆ ಮೇಲ್ ಮಾಡಲು ಸಲಹೆ ನೀಡಲಾಗಿದೆ.

ಈಗಾಗಲೇ ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಿಎಂ ಸಿದ್ದರಾಮಯ್ಯಗೆ ಸಹಸ್ರಾರು ಸಂಖ್ಯೆಯಲ್ಲಿ ಮೇಲ್ ಸಂದೇಶಗಳು ಬಂದಿವೆ. ಸಾಮಾಜಿಕ ಜಾಲತಾಣ ಎಕ್ಸ್​​​ ಹಾಗೂ ಫೇಸ್​​ಬುಕ್​​ನಲ್ಲಿ ಕೂಡ ಐಟಿ ನೌಕರರ ಕ್ಯಾಂಪೇನ್ ಟ್ರೆಂಡ್ ಆಗುತ್ತಿದೆ.

ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಜತೆಗೆ, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು. ಐಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ