LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿ

ಈದ್-ಮಿಲಾದ್ ಹಬ್ಬ ಶಾಂತಿಯುತ ಆಚರಣೆಗೆ ಕರೆ



ಮಹಾಲಿಂಗಪುರ: ಭಾವೈಕ್ಯತೆ ಹಾಗೂ ಸಹಬಾಳ್ವೆಗೆ ಹೆಸರಾದ ಈದ್-ಮಿಲಾದ್ ಹಬ್ಬವನ್ನು ಎಲ್ಲರೂ ಶಾಂತಿ, ಸೌಹಾರ್ದತೆ ಹಾಗೂ ಸಂಭ್ರಮದಿಂದ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಹಾಲಿಂಗಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಕಿರಣ ಸತ್ತಿಗೇರಿ ಹೇಳಿದರು.
ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರೊಂದಿಗೆ ಸಹಕರಿಸಬೇಕು. ವಿಶೇ?ವಾಗಿ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ, ಜಾತಿ ಹಾಗೂ ಸಮುದಾಯಗಳ ನಡುವೆ ದ್ವೇ? ಅಥವಾ ವೈಮನಸ್ಸು ಉಂಟುಮಾಡುವಂತಹ ಚಿತ್ರ, ವಿಡಿಯೊ ಹಾಗೂ ಸಂದೇಶಗಳನ್ನು ಹಂಚಿಕೊಳ್ಳಬಾರದು ಎಂದು ಮನವಿ ಮಾಡಿದರು.
ಹಬ್ಬದ ಸಂಭ್ರಮದಲ್ಲಿ ಯಾರೊಬ್ಬರ ಭಾವನೆಗಳಿಗೂ ಧಕ್ಕೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಹಿರಿಯರು ಹಾಗೂ ಮುಖಂಡರು ಯುವಕರಿಗೆ ಮಾರ್ಗದರ್ಶನ ನೀಡುವ ಮೂಲಕ ಶಾಂತಿಯುತ ವಾತಾವರಣ ನಿರ್ಮಿಸಲು ಮುಂದಾಗಬೇಕು. ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ ನಡೆದುಕೊಂಡು ಮಹಾಲಿಂಗಪುರದ ಭಾವೈಕ್ಯತೆಯ ಪರಂಪರೆಯನ್ನು ಮತ್ತ? ಗಟ್ಟಿಗೊಳಿಸಬೇಕು ಎಂದರು.
ಎಸ್‌ಐ ಶಾಂತಾ ಹಳ್ಳಿ ಮಾತನಾಡಿ, ಮೇಲಾಧಿಕಾರಿಗಳ ಸೂಚನೆಯಂತೆ ಹಬ್ಬದ ಸಂದರ್ಭದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು. ಸಾರ್ವಜನಿಕರು ಪೊಲೀಸರಿಗೆ ಅಗತ್ಯ ಸಹಕಾರ ನೀಡುವ ಮೂಲಕ ಯಾವುದೇ ರೀತಿಯ ಗಲಾಟೆ, ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ನಂತರ ಮುಖಂಡರಾದ ಫಾರೂಕ್ ಪಕಾಲಿ, ಸಿರಾಜ್ ಪೆಂಡಾರಿ ಹಾಗೂ ಬಶೀರ್ ಮಾತನಾಡಿ, ಈದ್-ಮಿಲಾದ್ ಹಬ್ಬದ ಆಚರಣೆ ಕುರಿತು ರೂಪುರೇ?ಗಳನ್ನು ತಿಳಿಸಿದರು. ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶವನ್ನು ಸಾರುವಂತೆ ಎಲ್ಲರೂ ಒಗ್ಗಟ್ಟಿನಿಂದ ಆಚರಣೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಟ್ಟಣದ ವಿವಿಧ ಸಮುದಾಯಗಳ ಮುಖಂಡರು, ಸುತ್ತಮುತ್ತಲಿನ ಗ್ರಾಮಗಳ ಪ್ರಮುಖರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮಾಜ ನಮಗೇನು ಕೊಟ್ಟಿದೆ ಎನ್ನುವದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎನ್ನುವದನ್ನು ಅರಿಯಿರಿ  :ಡಾ. ಅಲ್ಲಮಪ್ರಭು ಶ್ರೀಗಳು ಎನ್‌ಕೌಂಟರ್ ಪ್ರತಿಕಾರಕ್ಕೆ 10 ಎಕರೆ ಅರಣ್ಯವೇ ಬಲಿ!ಬಿ. ನಾಗೇಂದ್ರಗೆ ಹೈಕೋರ್ಟ್ ಆಘಾತ: ರಾಜ್ಯ ಬಿಟ್ಟು ತೆರಳದಂತೆ ಆದೇಶತೋರಣಗಲ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಿಎಚ್‌ಒ ಡಾ.ಅಲಕಾನಂದ ಮಳಗಿ ದಿಢೀರ್ ಭೇಟಿ: ವೈದ್ಯರು, ಸಿಬ್ಬಂದಿಗೆ ಖಡಕ್ ಸೂಚನೆ"ತೆರಿಗೆದಾರರಿಗೆ ಗೌರವ ನೀಡಿ, ಸಮಾಲೋಚಿಸಿ" ಬಳ್ಳಾರಿ: ಪೋಷಕರ ಪತ್ತೆಗಾಗಿ ಮೂಕ ಬಾಲಕನ ಪರವಾಗಿ ಮನವಿಧರ್ಮಗಳ ನಡುವೆ ಸೌಹಾರ್ದತೆ ಕಾಪಾಡಿ, ಸಂಭ್ರಮದಿಂದ ಹಬ್ಬ ಆಚರಿಸಿ: ಕಿರಣ ಸತ್ತಿಗೇರಿದಿ. 27 ರಂದು "ಹೋರಾಟದ ನಡೆ ಶಾಸಕರ ಮನೆ ಕಡೆ"ಕೂಲಿ ಕೆಲಸದೊಂದಿಗೆ ವಿಮೆ ನೋಂದಣಿ ಮಾಡಿಕೊಳ್ಳಿ: ಸೌಮ್ಯರಾಜೀಯಾಗಬಲ್ಲ ಪ್ರಕರಣಗಳ ಸುಲಭ ಇತ್ಯರ್ಥಕ್ಕೆ ಅವಕಾಶ: ನ್ಯಾ. ಮಹಾಂತೇಶ ದರಗದ