Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜನತಾ ಬಜಾರ್ ನೂತನ ಅಧ್ಯಕ್ಷೆಯಾಗಿ ಮೈತ್ರಿ ಪಲ್ಲೇದ ಅವಿರೋಧ ಆಯ್ಕೆ

 

ಬಳ್ಳಾರಿ, ಏ.೩೦.. ಬಳ್ಳಾರಿ ಜನತಾ ಬಜಾರ್ (ಬಳ್ಳಾರಿ ಕೇಂದ್ರ ಸಹಕಾರ ಸಗಟು ಮಾರಾಟ ಸಂಘ)ದ ನೂತನ ಅಧ್ಯಕ್ಷೆಯಾಗಿ ಶ್ರೀಮತಿ ಮೈತ್ರಿ ಪಲ್ಲೇದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹಿಂದಿನ ಅಧ್ಯಕ್ಷ ಕೆ.ಎ. ವೇಮಣ್ಣ ಅವರ ರಾಜೀನಾಮೆಯಿಂದ ಖಾಲಿಯಾಗಿದ್ದ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮೈತ್ರಿ ಪಲ್ಲೇದ ಅವರ ಏಕೈಕ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ಘೋಷಿಸಲಾಯಿತು. ಅವರ ನಾಮಪತ್ರಕ್ಕೆ ಜಿ. ನೀಲಕಂಠಪ್ಪ ಸೂಚಕರಾಗಿ ಹಾಗೂ ಶ್ರೀಮತಿ ನಸೀಮಾಬೇಗಂ ಅನುಮೋದಕರಾಗಿ ಸಹಿ ಹಾಕಿದ್ದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಕೆ.ಎ. ವೇಮಣ್ಣ, ಉಪಾಧ್ಯಕ್ಷ ಎಸ್. ಮುಜಾಹಿದ್ ಅಲಿ, ವೆಂಕಟೇಶ್ ಹೆಗಡೆ, ನಸೀಮಾಬೇಗಂ, ಪಿ. ದಾನರೆಡ್ಡಿ, ವಿ. ಪ್ರದೀಪರೆಡ್ಡಿ, ಕೆ. ಭರಮರೆಡ್ಡಿ, ಹಲಕುಂದಿ ವಿಜಯಕುಮಾರ್, ಕೆ.ಎಂ. ಕೇದಾರನಾಥ, ಜಿ. ನೀಲಕಂಠಪ್ಪ, ಕೋರಿ ಚನ್ನಬಸಪ್ಪ (ಪುಟ್ಟ), ಎಂ. ನರೇಶ್ ಕುಮಾರ್, ಕೆ. ವೆಂಕಟಸ್ವಾಮಿ, ಕಾತ್ಯಾಯಿನಿ ಮರಿದೇವಯ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಪರಿಣಿತ ಸದಸ್ಯರಾದ ಎಚ್.ಎಂ. ಮಹೇಂದ್ರ ಕುಮಾರ್, ವೀರಶೈವ ತರುಣ ಸಂಘದ ಅಧ್ಯಕ್ಷ ನಂದೀಶ್ ಮಠಂ, ಮಾಜಿ ಉಪಾಧ್ಯಕ್ಷ ಇಬ್ರಾಹಿಂ ಬಾಬು, ಜಾನೆಕುಂಟೆ ಬಸವರಾಜ್ (ಕುಮ್ಮಿ), ಪಲ್ಲೇದ ಪ್ರಭುಲಿಂಗ, ಕೋರಿ ವಿರುಪಾಕ್ಷಪ್ಪ, ಗಂಗಾವತಿ ವೀರೇಶ್, ಮುಂಡಾಸದ ಮಲ್ಲಿಕಾರ್ಜುನ, ಬಾಡದ ಬದರಿನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚುನಾವಣಾ ಅಧಿಕಾರಿಯಾಗಿ ಜನತಾ ಬಜಾರ್ ಪ್ರಧಾನ ವ್ಯವಸ್ಥಾಪಕರಾದ ರಾಮು ಅವರು ಕಾರ್ಯನಿರ್ವಹಿಸಿದರು.
ಗಮನಾರ್ಹವಾಗಿ, ಮೈತ್ರಿ ಪಲ್ಲೇದ ಅವರು ಜನತಾ ಬಜಾರ್ ಇತಿಹಾಸದಲ್ಲಿ ಎರಡನೇ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ