Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವಾದ ಮಲಬಾರ್ ಚಾರಿಟೇಬಲ್ ಟ್ರಸ್ಟ್

ಬಳ್ಳಾರಿ: 22.ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರ ಭರತ್ ರೆಡ್ಡಿ ಹೇಳಿದರು.
ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದ ಕಾರಣದಿಂದ ಉನ್ನತ ಶಿಕ್ಷಣದಿಂದ ದೂರವಾಗುವ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಖಾಸಗಿ ಸಂಸ್ಥೆಗಳು ಹಾಗೂ ದಾನಿಗಳು ಮುಂದೆ ಬಂದು ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ 7 ಅನುದಾನಿತ ಕಾಲೇಜುಗಳ 129 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ವಿದ್ಯಾರ್ಥಿಗಳಿಗೆ ನೀಡುತ್ತಿರುವ ಈ ಸಹಾಯಧನವು ಅವರ ವಿದ್ಯಾಭ್ಯಾಸಕ್ಕೆ ಪ್ರೇರಣೆಯಾಗಲಿದ್ದು, ಉನ್ನತ ಗುರಿಗಳನ್ನು ಸಾಧಿಸಲು ಆತ್ಮವಿಶ್ವಾಸ ತುಂಬಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಪದಾಧಿಕಾರಿಗಳು, ಶಿಕ್ಷಣ ಕ್ಷೇತ್ರದಲ್ಲಿ ಸೇವಾ ಮನೋಭಾವದಿಂದ ಹಲವಾರು ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ವಿದ್ಯಾರ್ಥಿಗಳಿಗೆ ನೆರವು ನೀಡುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೆಹತಾಬ್, ಯರ್ರಿಸ್ವಾಮಿ, ಕಪ್ಪಗಲ್ಲು ಚಂದ್ರಶೇಖರ್ ಆಚಾರ್, ಎಮ್ಮಿಗನೂರು ಜಗದೀಶ್, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಕಾಂಗ್ರೆಸ್ ಮುಖಂಡ ಸುಬ್ಬರಾಯುಡು ಸೇರಿದಂತೆ ಹಲವಾರು ಗಣ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು. ಪೋಷಕರು ಮತ್ತು ಕಾಲೇಜು ಆಡಳಿತ ಮಂಡಳಿಯವರು ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST