LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಉಪೇಂದ್ರ ನೆಕ್ಸ್ಟ್ ಲೆವೆಲ್' ಚಿತ್ರಕ್ಕೆ ಮಾಲಾಶ್ರೀ ಮಗಳು ಆರಾಧನಾ ನಾಯಕಿ



      ತರುಣ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತರುಣ್ ಶಿವಪ್ಪ 'ನೆಕ್ಸ್ಟ್ ಲೆವೆಲ್' ಸಿನಿಮಾ ನಿರ್ಮಾಣಕ್ಕೆ‌ ಮುಂದಾಗಿದ್ದಾರೆ. ವಿಭಿನ್ನತೆಗೆ ಹೆಸರುವಾಸಿಯಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರದ ನಾಯಕರು. ಅರವಿಂದ್ ಕೌಶಿಕ್ ನಿರ್ದೇಶನದ 'ನೆಕ್ಸ್ಟ್ ಲೆವೆಲ್' ಚಿತ್ರಕ್ಕೆ ನಾಯಕಿ ಸಿಕ್ಕಿದ್ದಾರೆ.

    ಪ್ಯಾನ್ ಇಂಡಿಯಾ ಚಿತ್ರವಾಗಿರುವ 'ನೆಕ್ಸ್ಟ್ ಲೆವೆಲ್'ಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ. ಕಾಟೇರ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದ ಆರಾಧನಾ ಮೊದಲ ಚಿತ್ರದಲ್ಲಿಯೇ ತಮ್ಮ‌ ನಟನಾ ಪ್ರತಿಭೆಯನ್ನು ಪರಿಚಯಿಸಿದ್ದರು. ಮೊದಲ ಸಿನಿಮಾದಲ್ಲಿಯೇ ದರ್ಶನ್ ಅವರಂತಹ ಸ್ಟಾರ್ ಹೀರೋಗೆ ಜೋಡಿಯಾಗಿ ಅಭಿನಯಿಸಿದ್ದರು. ಇದೀಗ ಎರಡನೇ ಚಿತ್ರದಲ್ಲಿಯೂ ಸೂಪರ್ ಸ್ಟಾರ್ ಉಪೇಂದ್ರ ಅವರಿಗೆ ನಾಯಕಿಯಾಗಿ ಸಾಥ್ ಕೊಡಲಿದ್ದಾರೆ.

      ಬೆಂಗಳೂರಿನಲ್ಲಿಯೇ ‘ನೆಕ್ಸ್ಟ್‌ ಲೆವೆಲ್‌’ ಸಿನಿಮಾದ ಅದ್ಧೂರಿ ಮುಹೂರ್ತ ನಡೆಯಲಿದ್ದು, ಬೆಂಗಳೂರು, ಮುಂಬೈ, ಹೈದರಾಬಾದ್‌ ಸೇರಿದಂತೆ ಭಾರತದ ಹಲವು ಕಡೆ ಚಿತ್ರದ ಶೂಟಿಂಗ್‌ ನಡೆಯಲಿದೆ. ಸಿನಿಮಾದ ಹೆಚ್ಚಿನ ಭಾಗ ವಿಎಫ್‌ಎಕ್ಸ್‌ನಿಂದ ಕೂಡಿರಲಿದೆ. ಇದಕ್ಕಾಗಿ ಈ ಚಿತ್ರತಂಡವು ಕೆನಡಾ ಸೇರಿದಂತೆ ಅನೇಕ ವಿದೇಶಿ ಗ್ರಾಫಿಕ್ಸ್‌ ಸ್ಟುಡಿಯೋಗಳು ಹಾಗೂ ಭಾರತದ ಪ್ರತಿಷ್ಠಿತ ಗ್ರಾಫಿಕ್ಸ್‌ ನಿರ್ಮಾಣ ಸಂಸ್ಥೆಗಳ ಸಹಯೋಗದೊಂದಿಗೆ ಪ್ಯಾನ್‌ ಇಂಡಿಯಾ ಮಟ್ಟದ ಈ ದೊಡ್ಡ ಸಿನಿಮಾವನ್ನು ಕಡಿಮೆ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಿದೆ ಚಿತ್ರತಂಡ.

     ಉಪೇಂದ್ರ ಅಭಿನಯದ ಬ್ಲಾಕ್‌ಬಸ್ಟರ್‌ ಎ, 'ಉಪೇಂದ್ರ, ರಕ್ತ ಕಣ್ಣೀರು ಸಿನಿಮಾಗಳ ಶೈಲಿಯಲ್ಲೇ ಈ ಸಿನಿಮಾ ಇರಲಿದೆ ಅನ್ನೋದು ಮತ್ತೊಂದು ವಿಶೇಷ. ತರುಣ್ ಶಿವಪ್ಪ ಈಗಾಗಲೇ ಐದು ಸಿನಿಮಾ ಮಾಡಿದ್ದಾರೆ. ರೋಸ್ ಚಿತ್ರದ ಮೂಲಕ ನಿರ್ಮಾಪಕರಾಗಿದ್ದರು. ಶಿವಣ್ಣನ ಜೊತೆಗೆ ಮಾಸ್ ಲೀಡರ್ ಮಾಡಿದ್ದರು. ವಿಕ್ಟರಿ-2, ಖಾಕಿ, ಛೂ ಮಂತರ್ ಆದ್ಮೇಲೆ ಇದೀಗ 'ನೆಕ್ಸ್ಟ್ಲೆವೆಲ್' ಸಿನಿಮಾ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಇದನ್ನ ದೊಡ್ಡ ಮಟ್ಟದಲ್ಲಿಯೇ ಮಾಡೋಕೆ ಪಕ್ಕಾ ಪ್ಲಾನ್ ಮಾಡಿಕೊಂಡಿದ್ದಾರೆ. ಛೂ ಮಂತರ್ ಚಿತ್ರದ ಕ್ಯಾಮರಾಮನ್ ಅನೂಪ್ ಕಟ್ಟುಕರನ್ ಈ ಚಿತ್ರಕ್ಕೂ ಕೆಲಸ ಮಾಡುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ